• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1ರಿಂದ 9ನೇ ತರಗತಿ ವಾರ್ಷಿಕ ಪರೀಕ್ಷೆ ಕುರಿತು ಸಚಿವ ಸುರೇಶ್ ಕುಮಾರ್ ಮಾಹಿತಿ

|

ಬೆಂಗಳೂರು, ಏಪ್ರಿಲ್ 5: ರಾಜ್ಯದಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಕುರಿತು ಮುಂದಿನ 2 ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ 6-9 ರವರೆಗೆ ತರಗತಿಗಳನ್ನು ಏಪ್ರಿಲ್ 20ರವರೆಗೆ ಸ್ಥಗಿತ ಮಾಡಿ ಆದೇಶ ಹೊರಡಿಸಲಾಗಿದೆ. 1-9 ರವರೆಗಿನ ತರಗತಿಗಳಿಗೆ ಪರೀಕ್ಷೆ ಬೇಡವೋ ಬೇಕೋ ಎಂಬ ಚರ್ಚೆ ನಡೆದಿದೆ. ಖಾಸಗಿ ಶಾಲೆಗಳ‌ ಒಕ್ಕೂಟ ಮತ್ತು ಪೋಷಕರ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಸಭೆಯಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು ಸಲಹೆ ಕೊಟ್ಟಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕೊರೊನಾ ಏರಿಕೆ; 6 ರಿಂದ 9ನೇ ತರಗತಿವರೆಗೆ ರಜೆ ಘೋಷಣೆಬೆಂಗಳೂರಿನಲ್ಲಿ ಕೊರೊನಾ ಏರಿಕೆ; 6 ರಿಂದ 9ನೇ ತರಗತಿವರೆಗೆ ರಜೆ ಘೋಷಣೆ

ಅವರು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ಶಿಕ್ಷಣ ತಜ್ಞರು, ಖಾಸಗಿ ಶಾಲೆಗಳ ಮುಖ್ಯಸ್ಥರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಎಂ ಜೊತೆ ಸಭೆ-ಚರ್ಚೆ ನಡೆಸುತ್ತಿದ್ದು ಇನ್ನೆರೆಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. 1-9ರಿಂದ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಭವಿಷ್ಯ ಇನ್ನೆರಡು ದಿನಗಳಲ್ಲಿ ನಿರ್ಧಾರವಾಗಲಿದೆ. ಶಿಕ್ಷಣ ಇಲಾಖೆ ಸಿಎಂ ಜೊತೆ ಚರ್ಚಿಸಿ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ.

ಶಿಕ್ಷಣ ಸಚಿವರ ತೀರ್ಮಾನದ ವಿರುದ್ಧ ಕಾನೂನು ಸಮರಕ್ಕೆ ಖಾಸಗಿ ಶಾಲೆಗಳು ಸಿದ್ಧತೆಶಿಕ್ಷಣ ಸಚಿವರ ತೀರ್ಮಾನದ ವಿರುದ್ಧ ಕಾನೂನು ಸಮರಕ್ಕೆ ಖಾಸಗಿ ಶಾಲೆಗಳು ಸಿದ್ಧತೆ

1-9 ರವರೆಗಿನ ತರಗತಿಗಳಿಗೆ ಪರೀಕ್ಷೆ ಬೇಡವೋ ಬೇಕೋ ಎಂಬ ಚರ್ಚೆ ನಡೆದಿದೆ. ಖಾಸಗಿ ಶಾಲೆಗಳ‌ ಒಕ್ಕೂಟ ಮತ್ತು ಪೋಷಕರ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಸಭೆಯಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು ಸಲಹೆ ಕೊಟ್ಟಿದ್ದಾರೆ ಎಂದರು.

ಸಭೆ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್, 1-9ರಿಂದ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಭವಿಷ್ಯ ಇನ್ನೆರಡು ದಿನಗಳಲ್ಲಿ ನಿರ್ಧಾರವಾಗಲಿದೆ. ಈಗಾಗಲೇ 6-9 ರವರೆಗೆ ತರಗತಿಗಳನ್ನು ಏಪ್ರಿಲ್ 20ರವರೆಗೆ ಸ್ಥಗಿತ ಮಾಡಿ ಆದೇಶ ಹೊರಡಿಸಿದ್ದೇವೆ ಎಂದರು.

ಚರ್ಚೆಯಲ್ಲಿ 47 ಸಂಘಟನೆಗಳು ಭಾಗಿ

ಚರ್ಚೆಯಲ್ಲಿ 47 ಸಂಘಟನೆಗಳು ಭಾಗಿ

ಕ್ಯಾಮ್ಸ್, ರುಪ್ಸಾ, ಉತ್ತರ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ, ವಿಧ್ಯಾಭಾರತಿ ಹೀಗೆ 47 ಸಂಘಟನೆಗಳು ಚರ್ಚೆಯಲ್ಲಿ ಭಾಗವಹಿಸಿದ್ದವು. ಖಾಸಗಿ ಶಾಲೆಗಳು ಯಾವುದಾದರೂ ಒಂದು ಮಾರ್ಗದಲ್ಲಿ ಪರೀಕ್ಷೆ ಮಾಡಲು ಸಲಹೆ‌ ಕೊಟ್ಟಿದ್ದಾರೆ. ಕಡ್ಡಾಯ ಶಿಕ್ಷಣ ಕಾಯ್ದೆ ಬಗ್ಗೆ ಸುದೀರ್ಘ ಚರ್ಚೆಯಾಯ್ತು ಎಂದು ಹೇಳಿದರು.

ಪರೀಕ್ಷೆ ಇಲ್ಲದೆಯೇ ತೇರ್ಗಡೆ ಕುರಿತು ಅಸಮಾಧಾನ

ಪರೀಕ್ಷೆ ಇಲ್ಲದೆಯೇ ತೇರ್ಗಡೆ ಕುರಿತು ಅಸಮಾಧಾನ

ಈ ಮೊದಲು ಸಭೆ ಆರಂಭವಾಗುತ್ತಿದ್ದಂತೆಯೇ ಪರೀಕ್ಷೆ ಇಲ್ಲದೇ ತೇರ್ಗಡೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿದವು. ಪೋಷಕರು ಮಕ್ಕಳನ್ನು ಆಫ್ ಲೈನ್ ಪರೀಕ್ಷೆಗೆ ಕಳಿಸಲ್ಲ ಎನ್ನುತ್ತಿದ್ದಾರೆ.

ಸಭೆಯಲ್ಲಿ ಯಾರ್ಯಾರು ಭಾಗಿಯಾಗಿದ್ದರು?

ಸಭೆಯಲ್ಲಿ ಯಾರ್ಯಾರು ಭಾಗಿಯಾಗಿದ್ದರು?

ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್, ಇಲಾಖೆಯ ಅಧಿಕಾರಿಗಳು, ರುಪ್ಸಾ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಕ್ಯಾಮ್ಸ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿ ಕುಮಾರ್, ಪೋಷಕರ ಸಂಘಟನೆಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

  #Covid19Update: 24 ಗಂಟೆಗಳಲ್ಲಿ ದೇಶದಲ್ಲಿ 96,982 ಜನರಿಗೆ ಕೊರೊನಾ ಸೋಂಕು ದೃಢ | Oneindia Kannada
  ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದ ರೀತಿ ಸಮಸ್ಯೆ ಬಗೆಹರಿಯುತ್ತೆ

  ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದ ರೀತಿ ಸಮಸ್ಯೆ ಬಗೆಹರಿಯುತ್ತೆ

  ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಮಸ್ಯೆ ಬಗೆಹರಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಗ್ರಾಮೀಣ ವಿದ್ಯಾರ್ಥಿಗಳ ಸಮಸ್ಯೆಯನ್ನ ಶಿಕ್ಷಣ ತಜ್ಞ ನಿರಂಜನಾರಾಧ್ಯ ಸಚಿವರ ಎದುರಿಟ್ಟರು.

  English summary
  Education Minister S Suresh Kumar Says Government will take decision on 1 to 9th standard annual exams.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X