ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಮೂಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ!

|
Google Oneindia Kannada News

ಬೆಂಗಳೂರು, ಫೆ. 05: ಕೊರೊನಾವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಬಂದ್ ಸಂಪೂರ್ಣವಾಗಿ ಬಂದ್ ಆಗಿದ್ದ ಶೈಕ್ಷಣಿಕ ಚಟುವಟಿಗೆಗಳು ಆರಂಭಗೊಂಡಿವೆ. ಇದೀಗ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜುಗಳು ಆರಂಗೊಂಡಿದ್ದು, ಕೋವಿಡ್ ಆತಂಕ ಕಡಿಮೆಯಾಗಿ ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೊನಾವೈರಸ್ ಪ್ರಕರಣಗಳು ಕಡಿಮೆಯಾಗಿರುವುದರಿಂದ ಮಕ್ಕಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳಿಗೆ ಬರುತ್ತಿದ್ದಾರೆ. ಹಾಗೆ ಕಾಲೇಜು ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

ಈ ಬಾರಿ ಶೇಕಡಾ 75ರಷ್ಟಿದ್ದ ಕಡ್ಡಾಯ ಹಾಜರಾತಿಗೆ ವಿನಾಯತಿ ಕೊಡಲಾಗಿದೆ. ಆದರೆ ವಿದ್ಯಾರ್ಥಿಗಳು ಮಾತ್ರ ಉತ್ಸಾಹದಿಂದ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ಎಲ್ಲ ತರಗತಿಗಳಲ್ಲಿ ಹತ್ತಿರ ಹತ್ತಿರ ಶೇಕಡಾ 90 ರಷ್ಟು ವಿದ್ಯಾರ್ಥಿಗಳು ರೆಗ್ಯುಲರ್ ತರಗತಿಗಳಿಗೆ ಬರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಂದು ಸಮಸ್ಯೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳಿಗೆ ಎದುರಾಗಿದೆ.

ಆ ಸಮಸ್ಯೆ ಪರಿಹರಿಸಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮುಂದಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ಅವರಲ್ಲಿ ಮಹತ್ವದ ಮನವಿ ಮಾಡಿಕೊಂಡಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿಗೆ ಪತ್ರ

ಡಿಸಿಎಂ ಲಕ್ಷ್ಮಣ ಸವದಿಗೆ ಪತ್ರ

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯತಿ ಪಾಸುಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿವೆ. ಆದರೆ ಬಹುತೇಕ ಕಡೆಗಳಲ್ಲಿ ಸರ್ಕಾರಿ ಬಸ್ ಸೌಲಭ್ಯವನ್ನೇ ಅವಲಂಬಿಸಿರುವ ಆ ಮಕ್ಕಳು ಶಾಲೆಗಳಿಗೆ ಸರಿಯಾಗಿ ಹಾಜರಾಗುತ್ತಿಲ್ಲವೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ವರದಿಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಬಸ್‌ಗಳು ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.

ಬಸ್‌ಗಳಿಲ್ಲದೆ ಪರದಾಟ

ಬಸ್‌ಗಳಿಲ್ಲದೆ ಪರದಾಟ

ಕೊರೋನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾವು-ನೀವೆಲ್ಲಾ ಸಭೆ ಸೇರಿ ಶಾಲೆಗಳನ್ನು ಆರಂಭಿಸುವ ತೀರ್ಮಾನ ಕೈಗೊಂಡಂತೆ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿವೆ. ಪ್ರಸ್ತುತ ಶಾಲೆಗಳು ಪೂರ್ಣ ಅವಧಿ ನಡೆಯುತ್ತಿವೆ. ಕೊರೋನಾ ಸೋಂಕಿನ ಮಧ್ಯೆಯೂ ಶಾಲೆಗಳಿಗೆ ಮಕ್ಕಳು ನಮ್ಮ ನಿರೀಕ್ಷೆಯನ್ನೂ ಮೀರಿ ಬರುತ್ತಿರುವುದು ಸಂತಸ ಸಂಗತಿ. ಏತನ್ಮ್ಮಧ್ಯೆ ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯತಿ ಪಾಸುಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿವೆ.


ಕೊರೋನಾ ಹಿನ್ನೆಲೆಯಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಸ್ ಕಾರ್ಯಾಚರಣೆಗೆ ಇಳಿಯದಿರುವುದರಿಂದ ಈ ಸಮಸ್ಯೆಯಾಗಿರಬಹುದು. ಬಸ್‌ಗಳು ಸರಿಯಾದ ಸಮಯಕ್ಕೆ ಬಾರದೇ ಕೆಲವಡೆ ಮಕ್ಕಳು ಗಂಟೆಗಟ್ಟಲೇ ಕಾಯುತ್ತಿದ್ದಾರೆಂಬ ಮತ್ತು ಹಾಗೆಯೇ ಕಾದು ಕಾದು ಶಾಲೆಯ ಸಮಯ ಮೀರಿದ್ದರಿಂದ ಶಾಲೆಗೆ ಬಾರದೇ ಮನೆಯತ್ತಲೇ ಹೆಜ್ಜೆ ಹಾಕಿದ್ದಾರೆಂಬ ವರದಿಗಳೂ ಇವೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

 ಮಕ್ಕಳ ಶೈಕ್ಷಣಿಕ ಹಿನ್ನೆಡೆಗೆ ಕಾರಣ

ಮಕ್ಕಳ ಶೈಕ್ಷಣಿಕ ಹಿನ್ನೆಡೆಗೆ ಕಾರಣ

ರಾಜ್ಯದ ಬಹುತೇಕ ಹಳ್ಳಿಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಗಳಿಗೆ, ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳ ಶಾಲಾ ಕಾಲೇಜುಗಳಿಗೆ ಹೋಗಿ ಬರಬೇಕಾಗಿದೆ. ಆದರೆ ಮೊದಲಿನಂತೆ ಸರಿಯಾಗಿ ಬಸ್‌ ಸೌಲಭ್ಯ ದೊರೆಯದೇ ಇರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬಸ್ ಸೌಲಭ್ಯ ದೊರೆಯದೇ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ನಾವು ಶಾಲೆಗಳನ್ನು ಆರಂಭಿಸಿರುವ ಉದ್ದೇಶ ಕೂಡ ಸಾಕಾರವಾಗುವುದಿಲ್ಲ. ಸಾರಿಗೆ ಸೌಲಭ್ಯ ತೊಂದರೆಯಿಂದ ಮಕ್ಕಳು ಶಾಲೆಗಳಿಗೆ ಹಾಜರಾಗದೇ ಇರುವುದು ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶೈಕ್ಷಣಿಕ ಹಿನ್ನೆಡೆಗೆ ಕಾರಣವಾಗಬಾರದು ಎಂದು ಸುರೇಶ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ.

Recommended Video

ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಇಂದು ತೆರೆ | Oneindia Kannada
ಮಕ್ಕಳಿಗೆ ಅನಕೂಲ ಮಾಡಿಕೊಡಿ

ಮಕ್ಕಳಿಗೆ ಅನಕೂಲ ಮಾಡಿಕೊಡಿ

ಕೊರೊನಾವೈರಸ್ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಎಲ್ಲ ಕಡೆಗಳಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿಲ್ಲವೆಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಹಿಂದೆ ಕಳೆದ ಸಾಲಿನ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಸಾರಿಗೆ ಇಲಾಖೆ ನೀಡಿದ ಸಹಕಾರ ಇಡೀ ರಾಜ್ಯದ ಪೋಷಕರ ಮತ್ತು ಮಕ್ಕಳ ಗಮನ ಸೆಳೆದಿತ್ತು. ಸಾರಿಗೆ ಇಲಾಖೆ ಸಹಕಾರದಿಂದಲೇ ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿತ್ತು. ಈ ಪರೀಕ್ಷೆಯ ಯಶಸ್ಸಿನಲ್ಲಿ ಸಾರಿಗೆ ಮತ್ತು ಆರೋಗ್ಯ ಇಲಾಖೆಗಳದ್ದು ಸಿಂಹಪಾಲು ಎಂದರೆ ಅತಿಶಯೋಕ್ತಿಯೇನೂ ಅಲ್ಲ.


ಹೀಗಾಗಿ ನಾಡಿನ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳ ಸಮಯದ ಬಸ್‌ಗಳು ಸಮರ್ಪಕವಾಗಿ ಕಾರ್ಯಾಚರಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿ. ಬಸ್‌ಗಳನ್ನೇ ಅವಲಂಬಿಸಿರುವ ಶಾಲಾ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕೆಂದು ಸುರೇಶ್ ಕುಮಾರ್ ಅವರು ಲಕ್ಷ್ಮಣ ಸವದಿ ಅವರಲ್ಲಿ ಮನವಿ ಮಾಡಿದ್ದಾರೆ.

English summary
Education Minister Suresh Kumar wrote a letter to Transport Minister Laxman Savadi requesting him to increase buses to Convenience students attend classes regularly. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X