ಅಚ್ಚರಿಯ ಅಭ್ಯರ್ಥಿ ಮುಖ್ಯಮಂತ್ರಿಯಾಗಿ ಆಯ್ಕೆ; ರಾಘವೇಂದ್ರ ಸುಳಿವು

ಬೆಂಗಳೂರು, ಜುಲೈ 27; "ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶದಂತೆ ರಾಜ್ಯದಲ್ಲಿಯೂ ಅಚ್ಚರಿ ನಡೆಯಬಹುದು" ಎಂದು ಶಿವಮೊಗ್ಗ ಸಂಸದ, ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ ಹೇಳಿದರು.

Recommended Video

      ಯಡಿಯೂರಪ್ಪನವರ ಪಾತ್ರವೇ ಇಲ್ಲ ಅಂದ್ಮೇಲೆ ಅವರ ಮಕ್ಕಳ ಪಾತ್ರ ಎಲ್ಲಿರುತ್ತೆ? | Oneindia Kannada

      ಮಂಗಳವಾರ ದೆಹಲಿಗೆ ತೆರಳುವ ಮುನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. "ಹೊಸ ಮುಖ್ಯಮಂತ್ರಿ, ಸಚಿವರ ಆಯ್ಕೆಯಲ್ಲಿ ಯಡಿಯೂರಪ್ಪ ಪಾತ್ರ ಇರುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

      ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜುಲೈ 26ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಅವರು ಮುಂದುವರೆಯಲಿದ್ದಾರೆ.

      ಹೊಸ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಆಯ್ಕೆಯಲ್ಲಿ ಯಡಿಯೂರಪ್ಪ ಪ್ರಭಾವ ಬೀರಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ. ಯಡಿಯೂರಪ್ಪ ಬೆಂಬಲಿಗರಾದ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆಯೇ? ಎಂಬ ಚರ್ಚೆಗಳು ನಡೆಯುತ್ತಿವೆ. ಹೊಸ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಮಾಡಲು ಕೇಂದ್ರದ ವೀಕ್ಷಕರ ತಂಡ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದೆ.

      ಅರುಣ್ ಸಿಂಗ್ ಆಗಮನ

      ಅರುಣ್ ಸಿಂಗ್ ಆಗಮನ

      ಹೊಸ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಚರ್ಚಿಸಲು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೊಸ ಸಿಎಂ, ಸಚಿವರ ಸಂಪುಟ ರಚನೆ ವೇಳೆ ಯಡಿಯೂರಪ್ಪ ಮಾತಿಗೆ ಮನ್ನಣೆ ದೊರೆಯಲಿದೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

      ಸಂಜೆ ಶಾಸಕಾಂಗ ಪಕ್ಷದ ಸಭೆ

      ಸಂಜೆ ಶಾಸಕಾಂಗ ಪಕ್ಷದ ಸಭೆ

      ಕ್ಷೇತ್ರದಲ್ಲಿರುವ ಶಾಸಕರಿಗೆ ಈಗಾಗಲೇ ಬೆಂಗಳೂರಿಗೆ ಬರುವಂತೆ ಸಂದೇಶ ರವಾನಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂಬ ಸುದ್ದಿ ಹಬ್ಬಿದೆ. ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗುತ್ತದೆ.

      ದೆಹಲಿಗೆ ತೆರಳಿದ ರಾಘವೇಂದ್ರ

      ದೆಹಲಿಗೆ ತೆರಳಿದ ರಾಘವೇಂದ್ರ

      ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ದೆಹಲಿಗೆ ತೆರಳಿದ್ದಾರೆ. ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ ಸಹ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

      ವಿಳಂಬ ಮಾಡದಿರಲು ಚಿಂತನೆ

      ವಿಳಂಬ ಮಾಡದಿರಲು ಚಿಂತನೆ

      ಹೊಸ ಮುಖ್ಯಮಂತ್ರಿ ಆಯ್ಕೆಯನ್ನು ವಿಳಂಬ ಮಾಡದಿರಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ಎರಡು ದಿನದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ? ಎಂಬ ಚರ್ಚೆಗಳು ಇನ್ನೂ ನಡೆಯುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+