ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು

|
Google Oneindia Kannada News

Recommended Video

Lok Sabha Elections 2019 : ಸಂಭಾವ್ಯ ಪಟ್ಟಿಯನ್ನ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು, ಫೆಬ್ರವರಿ 20 : ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಎಂದು ಕರ್ನಾಟಕ ಕಾಂಗ್ರೆಸ್ ಘೋಷಣೆ ಮಾಡಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಸಿದ್ಧಪಡಿಸಿದ್ದು, ಹಲವು ಅಚ್ಚರಿಯ ಹೆಸರುಗಳು ಪಟ್ಟಿಯಲ್ಲಿವೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದೆ. ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ. ಜೆಡಿಎಸ್‌ಗೆ 7 ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂಬ ನಿರೀಕ್ಷೆ ಇದೆ.

ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕು ಎಂದರೆ ಕರ್ನಾಟಕದಿಂದ ಹೆಚ್ಚಿನ ಕೊಡುಗೆ ಸಿಗಬೇಕು ಎಂಬುದು ಹೈಕಮಾಂಡ್ ಚಿಂತನೆ. ಆದ್ದರಿಂದ, ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಎಂದು ರಾಜ್ಯ ನಾಯಕರಿಗೆ ಸೂಚನೆ ಕೊಡಲಾಗಿದೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ತಂತ್ರ ರೂಪಿಸಲಾಗುತ್ತಿದೆ. ಅಗತ್ಯವಿದ್ದರೆ ಹಾಲಿ ಶಾಸಕರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಟಿಕೆಟ್ ನೀಡುವ ಚಿಂತನೆ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ್ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ್

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

* ಸಿದ್ದರಾಮಯ್ಯ - ಮೈಸೂರು-ಕೊಡಗು
* ಲಕ್ಷ್ಮೀ ಹೆಬ್ಬಾಳ್ಕರ್ - ಬೆಳಗಾವಿ
* ಆರ್.ವಿ.ದೇಶಪಾಂಡೆ - ಉತ್ತರ ಕನ್ನಡ
* ರೋಷನ್ ಬೇಗ್ - ಬೆಂಗಳೂರು ಕೇಂದ್ರ
* ರಮಾನಾಥ ರೈ - ದಕ್ಷಿಣ ಕನ್ನಡ
* ವಿನಯ್ ಕುಲಕರ್ಣಿ - ಧಾರವಾಡ
* ಶಿವರಾಜ್ ತಂಗಡಗಿ - ವಿಜಯಪುರ
* ಬಸವರಾಜ ರಾಯರೆಡ್ಡಿ - ಕೊಪ್ಪಳ
* ಎಚ್.ಎಂ.ರೇವಣ್ಣ - ಬೆಂಗಳೂರು ಉತ್ತರ
* ಪ್ರಿಯ ಕೃಷ್ಣ - ಬೆಂಗಳೂರು ದಕ್ಷಿಣ
* ಎಸ್‌.ಎಸ್.ಮಲ್ಲಿಕಾರ್ಜುನ - ದಾವಣಗೆರೆ

ಸಿದ್ದರಾಮಯ್ಯ ಅವರಿಗೆ ಟಿಕೆಟ್

ಸಿದ್ದರಾಮಯ್ಯ ಅವರಿಗೆ ಟಿಕೆಟ್

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಮೈಸೂರು-ಕೊಡಗು ಕ್ಷೇತ್ರದಿಂದ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲು ಪಕ್ಷ ಚಿಂತನೆ ನಡೆಸಿದೆ. ಹಾಲಿ ಕ್ಷೇತ್ರ ಬಿಜೆಪಿ ವಶದಲ್ಲಿದ್ದು ಪ್ರತಾಪ್ ಸಿಂಹ ಸಂಸದರಾಗಿದ್ದಾರೆ.

ಮಾಜಿ ಸಚಿವರಿಗೆ ಟಿಕೆಟ್

ಮಾಜಿ ಸಚಿವರಿಗೆ ಟಿಕೆಟ್

2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಲವು ಸಚಿವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡಲಾಗುತ್ತದೆ. ಈ ಕುರಿತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಆದರೆ, ಹೈಕಮಾಂಡ್ ಒಪ್ಪಿಗೆ ನೀಡಿದ ಬಳಿಕ ಈ ಪಟ್ಟಿ ಅಂತಿಮವಾಗಲಿದೆ.

ಸೀಟು ಹಂಚಿಕೆ ಅಂತಿಮವಾಗಿಲ್ಲ

ಸೀಟು ಹಂಚಿಕೆ ಅಂತಿಮವಾಗಿಲ್ಲ

ಜೆಡಿಎಸ್‌ ಜೊತೆ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಇನ್ನೂ ಅಂತಿಮಗೊಳಿಸಿಲ್ಲ. ಬೆಂಗಳೂರು ಉತ್ತರ, ಬೆಳಗಾವಿ, ಧಾರವಾಡ, ಮೈಸೂರು-ಕೊಡಗು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಕುರಿತು ಚರ್ಚೆ ನಡೆಯುತ್ತಿದೆ.ಸ

English summary
Karnataka Congress prepped probable candidates list for the 2019 Lok Sabha elections. Some surprise names inducted to list, who will get ticket let's wait and watch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X