ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕರ್ನಾಟಕದಲ್ಲಿ ಇಂದಿನಿಂದ ಸಮೀಕ್ಷೆ
ಬೆಂಗಳೂರು, ಮೇ 05: ಕರ್ನಾಟಕದಲ್ಲಿ ಮೇ 5ರ ಸೋಮವಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಆರಂಭವಾಗಲಿದೆ. ಗಣತಿದಾರರಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿದ್ದು, ಅವರಿಗೆ ನಿಖರ ಮಾಹಿತಿ ನೀಡುವಂತೆ ಜನರಿಗೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಮೇ 5ರಿಂದ 23ರ ತನಕ 3 ಹಂತಗಳಲ್ಲಿ ಸಮೀಕ್ಷೆ ನಡೆಸಲಿದೆ. ನ್ಯಾಯಮೂರ್ತಿ ಡಾ. ಹೆಚ್. ಎನ್. ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಎಲ್ಲಾ ಜಿಲ್ಲೆಯಲ್ಲಿ ಮೇ 5 ರಿಂದ ಪ್ರಾರಂಭವಾಗಲಿದೆ. ಜನರು ತಮ್ಮ ಕುಟುಂಬದ ಜಾತಿ, ಉಪಜಾತಿ ಮತ್ತು ಇತರೆ ಮಾಹಿತಿಗಳನ್ನು ನಿಖರವಾಗಿ ಗಣತಿದಾರರಿಗೆ ನೀಡಬೇಕು ಎಂದು ಕರೆ ನೀಡಲಾಗಿದೆ. ಗಣತಿದಾರರು ಮನೆ ಬಾಗಿಲಿಗೆ ಬಂದು ಮೊಬೈಲ್ ಅಪ್ಲಿಕೇಶನ್ ಮೂಲಕ ಸಮೀಕ್ಷೆಯನ್ನು ನಡೆಸಿ, ದತ್ತಾಂಶಗಳನ್ನು ಸಂಗ್ರಹ ಮಾಡಲಿದ್ದಾರೆ.

ಈ ಸಮೀಕ್ಷೆಗಾಗಿಯೇ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಗಣತಿದಾರರನ್ನು ಗುರುತಿಸಿ ಅವರಿಗೆ ಸಮೀಕ್ಷಾ ಕಾರ್ಯವನ್ನು ಹೇಗೆ ನಡೆಸಬೇಕು? ಎಂದು ತರಬೇತಿಯನ್ನು ನೀಡಲಾಗಿದೆ. ಅವರ ಮೇಲ್ವಿಚಾರಣೆ ಮಾಡಲು ಸಿಬ್ಬಂದಿಗಳನ್ನ ಸಹ ನಿಯೋಜಿಸಲಾಗಿದೆ.
ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಜಿಲ್ಲಾಡಳಿತದಿಂದ ತರಬೇತಿ ನೀಡಲಾಗಿದೆ. ಮಾಸ್ಟರ್ ಟ್ರೈನರ್‌ಗಳು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿನ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೆಲವು ಕುಟುಂಬಗಳ ಮಾದರಿ ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆಯಲ್ಲಿ ಬಳಸುವ ಮೊಬೈಲ್ ಆಪ್ ಬಗ್ಗೆ ಪರೀಕ್ಷೆ ನಡೆಸಿ, ಅದರ ಬಳಕೆ ಬಗ್ಗೆ ಖಾತರಿಪಡಿಸಿಕೊಂಡಿದ್ದಾರೆ.
ಗಣತಿದಾರರಿಗೆ ಸಮೀಕ್ಷೆ ಕುರಿತಂತೆ ಮಾಸ್ಟರ್ ಟ್ರೈನರ್‌ಗಳಿಂದ ತರಬೇತಿ ಮತ್ತು ಸಮೀಕ್ಷೆಗೆ ಬಳಸುವ ಮೊಬೈಲ್ ಅಪ್ ತಂತ್ರಾಂಶದ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಅಲ್ಲದೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಜನರು ತಮ್ಮ ಅಹವಾಲು, ಸಮಸ್ಯೆಗಳನ್ನು ಸಲ್ಲಿಸಲು ಹಾಗೂ ಸಮೀಕ್ಷೆ ಕುರಿತ ಮಾಹಿತಿ ಪಡೆಯಲು ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.
ಜಿಲ್ಲಾ ಮಟ್ಟದ ಸಮೀಕ್ಷಾ ಕಾರ್ಯವನ್ನು ಸುಸೂತ್ರವಾಗಿ ಯಾವುದೇ ಲೋಪದೋಷಗಳು ಉಂಟಾಗದಂತೆ ಯಶಸ್ವಿಗೊಳಿಸಲು ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಸಮೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ, ಸಮಸ್ಯೆ ಉಂಟಾದಲ್ಲಿ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಸಮೀಕ್ಷೆ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿನ ಸದಸ್ಯರಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಇತರೆ ಇಲಾಖೆಗಳ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಸಮೀಕ್ಷೆ ಯಶಸ್ವಿಗೊಳಿಸಲು ನಿರ್ದೇಶನ ನೀಡಲಾಗಿದೆ.
ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಕುಟುಂಬಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡಂತೆ ಉಪ ಜಾತಿ ವಿವರಗಳನ್ನು ಗಣತಿದಾರರು ಪಡೆಯಲಿದ್ದಾರೆ. ಎಲ್ಲಾ ಗಣತಿದಾರರು ಶಿಕ್ಷಣ ಇಲಾಖೆಯ ಶಿಕ್ಷಕರಾಗಿದ್ದು, ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದಾರೆ.
ಮೊದಲನೇ ಹಂತದಲ್ಲಿ ಮನೆ-ಮನೆ ಸಮೀಕ್ಷೆ. 5/5/2025 ರಿಂದ 17/05/2025 ರ ತನಕ ಸಮೀಕ್ಷೆ ನಡೆಯಲಿದ್ದು, ಎರಡನೇ ಹಂತದ ಸಮೀಕ್ಷೆಯಲ್ಲಿ ಸಮೀಕ್ಷೆಯ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ, ಮನೆ ಮನೆಯ ಭೇಟಿಯ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲು 19/05/2025 ರಿಂದ 21/05/2025ರೊಳಗೆ ಸಮೀಕ್ಷೆ ಮಾಡಲಾಗುತ್ತದೆ.
ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಅವಕಾಶವಿದ್ದು, 19/05/2025 ರಿಂದ 23/05/2025 ರವರೆಗೆ ಎರಡು ಹಂತದ ಸಮೀಕ್ಷೆಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications