ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬೆಂಗಳೂರಿನ ತಿಲಕ್ ನಗರದಲ್ಲಿ ಶಂಕಿತ ಉಗ್ರಗಾಮಿ ಅರೆಸ್ಟ್!

|
Google Oneindia Kannada News

ಬೆಂಗಳೂರು, ಜು. 25: ರಾಜಧಾನಿಯಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಸಿಬಿಯ 30 ಅಧಿಕಾರಿಗಳ ತಂಡ ತಿಲಕ್ ನಗರದ ಮನೆ ಮೇಲೆ ದಾಳಿ ಮಾಡಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗನ ಮನೆಯಲ್ಲಿಯೇ ತಂಗಿದ್ದ ಉಗ್ರನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆರೋಪಿಯ ಹಿನ್ನೆಲೆ, ಆತ ಯಾಕೆ ಬೆಂಗಳೂರಿಗೆ ಬಂದಿದ್ದ ಎಂಬುದರ ಬಗ್ಗೆ ಸಿಸಿಬಿ ತನಿಖೆಯಲ್ಲಿ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.

Suspect terrorist arrested in Bengaluru

ಬೆಂಗಳೂರಿನ ಶ್ರೀರಾಂಪುರದಲ್ಲಿ ಕೆಲ ದಿನಗಳ ಹಿಂದೆ ಉಗ್ರಗಾಮಿ ಪತ್ತೆಯಾಗಿದ್ದ. ಕಾಶ್ಮೀರ ಮೂಲದ ಉಗ್ರಗಾಮಿ ಬೆಂಗಳೂರಿನ ಮಸೀದಿಯಲ್ಲಿ ತಂಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾಶ್ಮೀರ ಪೊಲೀಸರು ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಈ ವೇಳೆ ಹಲವು ಸ್ಫೋಟಕ ಸಂಗತಿಗಳು ಹೊರ ಬಂದಿದ್ದವು. ಇದೀಗ ಮತ್ತೊಬ್ಬ ಉಗ್ರಗಾಮಿ ಬೆಂಗಳೂರಿನ ತಿಲಕ್ ನಗರದಲ್ಲಿ ಪತ್ತೆಯಾಗಿದ್ದು, ಬೆಂಗಳೂರು ಉಗ್ರಗಾಮಿಗಳ ಪಾಲಿಗೆ ಸ್ಲೀಪರ್ ಸೆಲ್ ಅಗಿದೆಯೇ ಎಂಬ ಅನುಮಾನ ಮೂಡಿಸಿದೆ.

ಎರಡನೇ ಉಗ್ರನನ್ನು ಬಂಧಿಸಿದ ಪೊಲೀಸರು:
ಉಗ್ರ ಸಂಘಟನೆ ಯೊಂದಕ್ಕೆ ಸೇರಿದವನೆಂದು ಹೇಳಲಾದ ಶಂಕಿತ ಉಗ್ರ ನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Recommended Video

Tiger Crossing Road: ಹುಲಿಯನ್ನ ರಸ್ತೆ ದಾಟಿಸಿದ ಪೊಲೀಸ್ ಅಧಿಕಾರಿ | *India | OneIndia Kannada

ಉಗ್ರನ ಜೊತೆಗೆ ಇದ್ದ ಸ್ಥಳೀಯ ಸಹಚರರನ್ನು ಸಹ ವಿಚಾರಣೆ ನಡೆದಿದ್ದು, ಅವನು ನಡೆಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಇತ್ತೀಚೆಗೆ, ಜಮ್ಮು ಕಾಶ್ಮೀರ ದಲ್ಲಿ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ಹಾಗೂ ಓಕಳಿಪುರ ಪ್ರದೇಶದಲ್ಲಿ ನೆಲೆಸಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ ನಂತರ, ಮತ್ತೊಬ್ಬ ಉಗ್ರನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಇದಕ್ಕಾಗಿ, ಅವರನ್ನು ಅಭಿನಂದಿಸುತ್ತೇನೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದಾರೆ.

English summary
CCB Police arrested a Assam based suspect terrorist in Bengaluru know more ,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X