ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ್ರೋಹಿ ಯತ್ನಾಳ್ ಅಮಾನತು ಮಾಡಿ : ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 02 : " ಬಸನಗೌಡ ಪಾಟೀಲ್ ಯತ್ನಾಳ್ ರಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಅಧಿವೇಶನದಿಂದ ಹೊರಗಿಡುವಂತೆ ಕಾಂಗ್ರೆಸ್ ಸೋಮವಾರ ಪಟ್ಟು ಹಿಡಿದಿದೆ. ಇದರಿಂದಾಗಿ ಕಲಾಪವನ್ನು ಕೆಲವು ಕಾಲ ಮುಂದೂಡಲಾಗಿತ್ತು.

ಬಸನಗೌಡ ಯತ್ನಾಳ್‌ಗೆ ಬಿಜೆಪಿ ನೋಟಿಸ್ಬಸನಗೌಡ ಯತ್ನಾಳ್‌ಗೆ ಬಿಜೆಪಿ ನೋಟಿಸ್

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ" ಎಂದರು.

ದೊರೆಸ್ವಾಮಿ ವಿರುದ್ಧ ಹೇಳಿಕೆ; ಯತ್ನಾಳ ಬೆಂಬಲಕ್ಕೆ ನಿಂತ ಬಿಜೆಪಿದೊರೆಸ್ವಾಮಿ ವಿರುದ್ಧ ಹೇಳಿಕೆ; ಯತ್ನಾಳ ಬೆಂಬಲಕ್ಕೆ ನಿಂತ ಬಿಜೆಪಿ

"ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು. ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಅವರ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ" ಎಂದು ದೂರಿದರು.

ದೊರೆಸ್ವಾಮಿ ಬಗ್ಗೆ ಅವಮಾನಕರ ಹೇಳಿಕೆ: ಯಾತ್ನಾಳ್ ವಿರುದ್ಧ ಪ್ರತಿಭಟನೆದೊರೆಸ್ವಾಮಿ ಬಗ್ಗೆ ಅವಮಾನಕರ ಹೇಳಿಕೆ: ಯಾತ್ನಾಳ್ ವಿರುದ್ಧ ಪ್ರತಿಭಟನೆ

ಬಿಜೆಪಿ ಮೊದಲು ಸ್ಪಷ್ಟಪಡಿಸಲಿ

ಬಿಜೆಪಿ ಮೊದಲು ಸ್ಪಷ್ಟಪಡಿಸಲಿ

"ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ?. ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ" ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಒಂದು ಪಕ್ಷಕ್ಕೆ ಕಟ್ಟಿ ಹಾಕುವುದು

ಒಂದು ಪಕ್ಷಕ್ಕೆ ಕಟ್ಟಿ ಹಾಕುವುದು

"ಸ್ವಾತಂತ್ರ್ಯಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆ ತುರ್ತುಪರಿಸ್ಥಿತಿಯ ಕಾಲದಲ್ಲಿ ಇಂದಿರಾಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು" ಎಂದು ಸಿದ್ದರಾಮಯ್ಯ ಹೇಳಿದರು.

ಸದನದಿಂದ ಅಮಾನತು ಮಾಡಬೇಕು

ಸದನದಿಂದ ಅಮಾನತು ಮಾಡಬೇಕು

"ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.

ಯತ್ನಾಳ್ ವಿರುದ್ಧ ನಾಲ್ಕು ನಿರ್ಣಯ

ಯತ್ನಾಳ್ ವಿರುದ್ಧ ನಾಲ್ಕು ನಿರ್ಣಯ

ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ವಿರುದ್ಧ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಾಹಿತಿಗಳು, ಪ್ರಗತಿಪರರು, ರಾಜಕೀಯ ಪಕ್ಷಗಳ ಮುಖಂಡರು 4 ನಿರ್ಣಯಗಳನ್ನು ಕೈಗೊಂಡಿದ್ದಾರೆ.

* ಯತ್ನಾಳ್ ಅವರನ್ನು ವಿಧಾನಸೌಧದ ಒಳಗೆ ಬಿಡಬಾರದು ಮತ್ತು ಶಾಸಕ ಸ್ಥಾನ ರದ್ದು ಮಾಡಬೇಕು
* ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು
* ದೊರೆಸ್ವಾಮಿ ಗುಂಡಿಗೆ ಬಲಿಯಾಗುತ್ತಾರೆ ಎಂದು ಹೇಳಿದ್ದರಿಂದ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕ್ರಮ ಕೈಗೊಳ್ಳಬೇಕು.
* ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಮತ್ತು ನಾಡಿನ ಜನತೆಯಲ್ಲಿ ಕ್ಷಮೆ ಕೇಳಬೇಕು.

English summary
Opposition leader of Karnataka Siddaramaiah urged that Vijayapura City BJP MLA Basanagouda Patil Yatnal should suspend from assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X