ವರ್ಗಾವಣೆಗೆ ಡೋಂಟ್ ಕೇರ್: 27 ಮಂದಿ ಎಂಜನಿಯರ್‌ಗಳ ಅಮಾನತ್ತು! ಕಾರಣವೇನು?
ಬೆಂಗಳೂರು, ಅಕ್ಟೋಬರ್ 26: ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, ಸಹಾಯಕ ಎಂಜನಿಯರ್‌ಗಳು ಹಾಗೂ ಜೂನಿಯರ್ ಎಂಜನಿಯರ್‌ಗಳನ್ನು ಸೇವೆಯಿಂದ ಅಮಾನತ್ತು ಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.
ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ.

ಅಮಾನತ್ತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್ ಎಂಜನಿಯರ್‌ಗಳು (ಜೆಇ) ಸೇರಿದ್ದಾರೆ.
ಬಾಕಿ 600 ಕೋಟಿ ಹಣ ಬಿಡುಗಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ
ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯವರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸಿ ₹ 600 ಕೋಟಿ ಮೊತ್ತದ ಎಂಜಿಎನ್ಆರ್ಇಜಿಎ (ನರೇಗ) ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಚಾಲ್ತಿಯಲ್ಲಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಂಎನ್ಆರ್ಇಜಿಎ ಅಡಿಯಲ್ಲಿ ಕೆಲಸದ ಖಾತರಿಯ ಮಾನವ ದಿನಗಳ ಸಂಖ್ಯೆಯನ್ನು ಪ್ರಸ್ತುತ 13 ಕೋಟಿಯಿಂದ 18 ಕೋಟಿಗೆ ಹೆಚ್ಚಿಸಬೇಕೆಂದು ಸಚಿವರು ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಮಂಜೂರಾದ 13 ಕೋಟಿ ಮಾನವ ದಿನಗಳ ಪೈಕಿ 10 ಕೋಟಿಯನ್ನು ಈಗಾಗಲೇ ಬಳಸಿಕೊಳ್ಳಲಾಗಿದ್ದು, ಬರಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳ ಜೀವನಾಂಶಕ್ಕಾಗಿ ಹೆಚ್ಚುವರಿ ಕೆಲಸದ ದಿನಗಳು ಅತ್ಯಗತ್ಯ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂದಿನ 2-3 ತಿಂಗಳ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲ, ಬರಪೀಡಿತ ತಾಲೂಕುಗಳಲ್ಲಿ ತುರ್ತು ನೀರಿನ ಅಗತ್ಯತೆಗಳಿಗೆ ಹಣದ ಅಗತ್ಯವಿದೆ ಎಂದು ಖರ್ಗೆ ಹೇಳಿದರು.
ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯವರೊಂದಿಗೆ ಪ್ರತ್ಯೇಕ ಸಭೆಯಲ್ಲಿ ₹ 600 ಕೋಟಿ ಮೊತ್ತದ ಎಂಜಿಎನ್‌ಆರ್‌ಇಜಿಎ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಚಾಲ್ತಿಯಲ್ಲಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಂಎನ್ಆರ್ಇಜಿಎ ಅಡಿಯಲ್ಲಿ ಕೆಲಸದ ಖಾತರಿಯ ಮಾನವ ದಿನಗಳ ಸಂಖ್ಯೆಯನ್ನು ಪ್ರಸ್ತುತ 13 ಕೋಟಿಯಿಂದ 18 ಕೋಟಿಗೆ ಹೆಚ್ಚಿಸುವಂತೆ ಅವರು ಕರೆ ನೀಡಿದರು.
ಮಂಜೂರಾದ 13 ಕೋಟಿ ಮಾನವ ದಿನಗಳ ಪೈಕಿ 10 ಕೋಟಿಯನ್ನು ಈಗಾಗಲೇ ಬಳಸಿಕೊಳ್ಳಲಾಗಿದ್ದು, ಬರಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳ ಜೀವನಾಂಶಕ್ಕಾಗಿ ಹೆಚ್ಚುವರಿ ಕೆಲಸದ ದಿನಗಳು ಅತ್ಯಗತ್ಯ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂದಿನ 2-3 ತಿಂಗಳ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲ, ಬರಪೀಡಿತ ತಾಲೂಕುಗಳಲ್ಲಿ ತುರ್ತು ನೀರಿನ ಅಗತ್ಯತೆಗಳಿಗೆ ಹಣದ ಅಗತ್ಯವಿದೆ ಎಂದು ಖರ್ಗೆ ಹೇಳಿದರು.












Click it and Unblock the Notifications