ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದಲು ವಿವೇಕಾನಂದರ ಯೋಜನೆ ಜಾರಿ: ಬೊಮ್ಮಾಯಿ

|
Google Oneindia Kannada News

ಹುಬ್ಬಳ್ಳಿ, ಜನವರಿ 12: ಸುಮಾರು ಐದು ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದುವ ಸ್ವಾಮಿ ವಿವೇಕಾನಂದ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಕರ ಸಂಕ್ರಾಂತಿ ವಿಶೇಷ ಪುಟ

ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗುರುವಾರ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ಕರ್ನಾಟಕದ್ದಾಗಿದೆ. ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ನು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Swami Vivekananda scheme will be implemented in Karnataka to provide self-employment

ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದ್ದೇವೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ ಎಂದು ಬೊಮ್ಮಾಯಿ ಸ್ಮರಿಸಿದರು.

ಜನಸಂಖ್ಯೆ ಎಂದರೆ ಹೊರೆಯಲ್ಲ. ಅದು ಮಾನವ ಸಂಪತ್ತು ಅದರ ಸದ್ವಿನಿಯೋಗಪಡಿಸಿಕೊಂಡು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವ ಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿದೆ ಎಂದು ಆಶಿಸಿದರು.

ಜನವರಿ 16ರವರೆಗೆ ಯುವಜನೋತ್ಸವ

ಶಿಕ್ಷಣದ ಕಾಶಿ ಧಾರವಾಡದಲ್ಲಿ ಜನವರಿ 12 ರಿಂದ 16 ರ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದೇಶಿಯ ಕ್ರೀಡೆಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಸಾರ್ವಜನಿಕರಿಗೆ ಆಸಕ್ತಿ ಹುಟ್ಟಿಸಲು ಕ್ರಮ ಕೈಗೊಂಡಿದೆ. ಸದರಿ ಕಾರ್ಯಕ್ರಮವನ್ನು ಗುರುವಾರ ಪ್ರಧಾನಮಂತ್ರಿಗಳು ಉದ್ಘಾಟಿಸಿದ್ದು, ಸಮಾರಂಭಕ್ಕೆ ಮತ್ತಷ್ಟು ಮೆರಗು ಹೆಚ್ಚಿಸಿದೆ.

Swami Vivekananda scheme will be implemented in Karnataka to provide self-employment

ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಯುವಜನರ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೇಂದ್ರ ಸಚಿವ ಅನುರಾಗ್ ಠಾಕೂರ್, ಧಾರವಾಡದ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

English summary
Swami Vivekananda scheme will be implemented in Karnataka to provide self-employment to 5 lakh Youths, Says CM Basavaraj Bommai
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X