Karnataka: ಉದ್ಯೋಗ ಸೃಷ್ಟಿ 'ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆ' ಮಾ,23ಕ್ಕೆ ಚಾಲನೆ, ಏನಿದು?
ಕರ್ನಾಟಕದ ಯುವಕರಿಗೆ ಸ್ವ ಉದ್ಯೋಗ ಕಲ್ಪಿಸಬಹುದಾದ ಇದೇ ಮೊದಲ ಬಾರಿಗೆ ರೂಪಿಸಲಾದ ಮಹತ್ವದ 'ಯೋಜನೆ'ಯೊಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಮಾರ್ಚ್ 23ರಂದು ಚಾಲನೆ ನೀಡಲಿದ್ದಾರೆ.
ಬೆಂಗಳೂರು, ಮಾರ್ಚ್ 19: ಕರ್ನಾಟಕದ ಯುವಕರಿಗೆ ಸ್ವ ಉದ್ಯೋಗ ಕಲ್ಪಿಸಬಹುದಾದ ಇದೇ ಮೊದಲ ಬಾರಿಗೆ ರೂಪಿಸಲಾದ ಮಹತ್ವದ 'ಯೋಜನೆ'ಯೊಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಮಾರ್ಚ್ 23ರಂದು ಚಾಲನೆ ನೀಡಲಿದ್ದಾರೆ.
ಭಾನುವಾರ ಉದ್ಘಾಟನೆ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಸರ್ಕಾರ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಯೋಜನೆಗೆ ಚಾಲನೆ ನೀಡುವ ಕುರಿತು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿವೆ. ಅದೇ ರೀತಿ ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರ ರೂಪಿಸಿರುವ 'ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ' ಯೋಜನೆ ಜಾರಿಗೊಳ್ಳಲಿದೆ.
ಯೋಜನೆ ಸಂಬಂಧ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹೆಚ್ಚಿನ ಆದ್ಯತೆಯೊಂದಿಗೆ ಕೆಲಸ ನಿರ್ವಹಿಸಬೇಕು. ಜಂಟಿ ಬಾಧ್ಯತಾ ಗುಂಪುಗಳ ರಚನೆಯಾಗಿ, ಸುತ್ತು ನಿಧಿ ಹಂಚಿಕೆಯೊಂದಿಗೆ ನಿಮ್ಮ ಕಾರ್ಯ ಮುಗಿಯಲ್ಲ. ಈ ಗುಂಪುಗಳು ಯೋಜನೆಯನ್ನು ಗುರುತಿಸಿ, ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆದು, ತಮ್ಮ ಉದ್ದಿಮೆಯನ್ನು ಸ್ಥಾಪಿಸಿ, ಉತ್ಪಾದನೆ ಪ್ರಾರಂಭಿಸುವ ವರೆಗೂ ನೀವು ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಗಳನ್ನು ಗುರುತಿಸಲು ನಿಯೋಜಿಸಿರುವ ಸಮಾಲೋಚಕರು, ಯುವಕರು ಕೈಗೊಳ್ಳುವ ಯೋಜನೆಗೆ ಅನುಗುಣವಾಗಿ, ಆಯಾ ಕ್ಷೇತ್ರದ ಪರಿಣತರಿಂದಲೇ ತರಬೇತಿ ನೀಡಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ. ಯುವಶಕ್ತಿ ಸಂಘಗಳಿಗೆ ಸಾಲ ನೀಡುವಾಗ, ಸಾಲ ವಿತರಣೆ ಹೆಚ್ಚಾಗಿದ್ದು, ಅದು ಲಾಭದಾಯಕ ಯೋಜನೆ ಆದರರಷ್ಟೇ ಬ್ಯಾಂಕುಗಳು ಸರ್ಕಾರ ನಿಗದಿಪಡಿಸಿದ 5 ಲಕ್ಷ ರೂ. ಮಿತಿಗಿಂತ ಹೆಚ್ಚಿನ ಮೊತ್ತದ ಸಾಲ ಮಂಜೂರು ಮಾಡಬೇಕು ಎಂದು ಮುಖ್ಯಮಂತ್ರಿಗಳು ಬ್ಯಾಂಕ್ ಮುಖ್ಯಸ್ಥರಿಗೆ ಸಲಹೆ ನೀಡಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ಮತ್ತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಎಸ್. ಸೆಲ್ವಕುಮಾರ್ ಹಾಗೂ ಮತ್ತಿತರರು ಪಾಳ್ಗೊಂಡಿದ್ದರು.
ಈ ಯೋಜನೆಯ ವಿಶೇಷ/ಮಹತ್ವ ಏನು?: ಅಂಶಗಳು
* ಕರ್ನಾಟಕದಲ್ಲಿ ಒಟ್ಟು 5,951 ಗ್ರಾಮ ಪಂಚಾಯತಿಗಳಿವೆ. ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿ, ಪ್ರತಿಯೊಂದು ಗ್ರಾಮ ಪಂಚಾಯತಿಗೆ ಎರಡು ಜಂಟಿ ಬಾಧ್ಯತಾ ಗುಂಪು ರಚಿಸಲು ಆರ್ಥಿಕ ಇಲಾಖೆಯ ಸಹಮತಿಯನ್ವಯ ಮಾರ್ಚ್ 08 ಆದೇಶಿಸಲಾಗಿದೆ.
* ಯೋಜನೆಯ ಬ್ಯಾಂಕ್ ಲಿಂಕೇಜ್, ಖಾತೆ ತೆರೆಯುವಿಕೆ ಮತ್ತು ಬ್ಯಾಂಕ್ ಸಾಲಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಮಾನ್ಯ ಸರ್ವಿಸ್ ಸೆಂಟರ್, ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಎನ್‌ಎಲ್‌ಎಂ ನಿಂದ ಹಾಗೂ ಬ್ಯಾಂಕರ್ಸ್ ಗಳಿಂದ ಒಟ್ಟು 7,300 ಬಿಸಿ ಸಖಿಗಳ ಸೇವೆ ಪಡೆಯಲಾಗಿದೆ. ಸದರಿಯವರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಿಂದ 2000ರೂಪಾಯಿ ಮತ್ತು ಸಹಕಾರಿ ಬ್ಯಾಂಕ್ ಗಳು 4000ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡುತ್ತಿವೆ.
* 100 ಮಾದರಿ ಪ್ರಸ್ತಾವನೆಗಳನ್ನು ಬ್ಯಾಂಕ್‌ಗಳಿಗೆ ಸಲ್ಲಿಸಲಾಗಿದೆ. ಆ ಪೈಕಿ ಸುಮಾರು 551 ಯೋಜನೆಗಳನ್ನು ಬ್ಯಾಂಕುಗಳ ಅನುಮೋದನೆ ಮತ್ತು ಸಾಲ ಮಂಜೂರಾತಿಗಾಗಿ ಸಲ್ಲಿಸಲಾಗಿದೆ.
* ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟೀ ಯೋಜನೆ (NCGTC) ಅಡಿಯಲ್ಲಿ ಸ್ವ-ಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಬಾಧ್ಯತಾ ಗುಂಪುಗಳನ್ನು ಒಳಪಡಿಸಲು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಯವರಿಂದ ಮಾನ್ಯ ಕೇಂದ್ರ ವಿತ್ತೀಯ ಸಚಿವರೊಂದಿಗೆ ಪ್ರಸ್ತಾಪ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
* ಮಾರ್ಚ್ 18ರ ಶನಿವಾರ ಅಂತ್ಯಕ್ಕೆ ಒಟ್ಟು 6,509 ಜಂಟಿ ಬಾಧ್ಯತಾ ಗುಂಪುಗಳು ರಚನೆ. ಬಾಕಿ ಉಳಿದ 5,393 ಜಂಟಿ ಬಾಧ್ಯತಾ ಗುಂಪು ರಚನೆ ಆಗಬೇಕಿದೆ. ಈಗಾಗಲೇ 1,754 ಜಂಟಿ ಭಾದ್ಯತಾ ಗುಂಪುಗಳಿಗೆ ತಲಾ ರೂ.10,000 ಗಳಂತೆ ಒಟ್ಟು ರೂ.1.75ಕೋಟಿಗಳ ವೆಚ್ಚದಲ್ಲಿ ಸುತ್ತು ನಿಧಿ ಪಾವತಿ ಆಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications