ಬೆಂಗಳೂರು ಕಾಲ್ತುಳಿತ: ಸರ್ಕಾರದ ವಿರುದ್ಧ ಸಿಡಿದೆದ್ದ ಮಠಾಧೀಶರು; ಕರ್ನಾಟಕ ಬಂದ್...
ಬೆಂಗಳೂರು, ಜೂನ್ 08: ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ವಿವಿಧ ಸಂಘಟನೆಗಳು ಸಹ ಕರ್ನಾಟಕ ಬಂದ್‌ಗೆ ಮುಂದಾಗಿವೆ ಎನ್ನಲಾಗಿದ್ದು, ಮಠಾಧೀಶರುಗಳು ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಆರ್ಸಿಬಿಯ 11 ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಈ ಮಧ್ಯೆ ಮಠಾಧೀಶರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲು ಸ್ವಾಮೀಜಿಗಳ ತಂಡ ಮುಂದಾಗಿದೆ. ಈಗಾಗಲೇ ಬೆಂಗಳೂರು ತಲುಪಿರುವ ಸ್ವಾಮೀಜಿಗಳ ತಂಡ ಇಂದು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಿದೆ. ಬಳಿಕ ಆರ್‌ಸಿಬಿ ವಿರುದ್ಧ ಇಡಿಗೂ ದೂರು ದಾಖಲಿಸಲಿದ್ದಾರೆ.

ಕಲಬುರಗಿಯ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ, ಕುಂಬಾರ ಮಹಾಸಂಸ್ಥಾನ ಪೀಠ ಬಸವಮೂರ್ತಿ ಕುಂಬಾರ ಗುಂಡಯ್ಯಶ್ರೀ ಮತ್ತು ಛಲವಾದಿ ಜಗದ್ಗುರು ಪೀಠದ ಬಸವನಾಗಿದೇವಶ್ರೀ ಸೇರಿ ಹಲವರಿಂದ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಲಾಗುತ್ತಿದೆ. 11 ಜೀವಗಳ ಬಲಿ ಕುರಿತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದು, ಆರ್‌ಸಿಬಿ ತಂಡಕ್ಕೆ ಅಂತಾರಾಷ್ಟ್ರೀಯ ಮಟ್ಟದ ಹಣದ ವ್ಯವಹಾರವಿದೆ. ಹೊರ ದೇಶದವರು ಈ ತಂಡದ ಮೇಲೆ ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಇ.ಡಿ ಅಧಿಕಾರಿಗಳು ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದು, ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸಲು ಶ್ರೀಗಳು ತಂಡವು ಚಿಂತನೆ ನಡೆಸಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 3ಮಾನವ ಹಕ್ಕು ಆಯೋಗ ಇದೀಗ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಮಾನವ ಹಕ್ಕು ಶಿಫಾರಸಿನಲ್ಲಿ ದೂರಿನ ಮೇರೆಗೆ 6 ರಂದು ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ಮಾಡಲಾಗಿತ್ತು. ಘಟನೆಯಲ್ಲಿ 11 ಜನ ಮೃತಪಟ್ಟಿದ್ದರು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಲ್ಲದೇ ಪ್ರಜಾಪ್ರಭುತ್ವ ಮತ್ತು ನಾಗರೀಕ ಸಮಾಜದಲ್ಲಿ ಮಾನವನಿಗೆ ಮೂಲಭೂತ ಸೌಕರ್ಯಗಳನ್ನು ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಲ್ಪಿಸುವುದು ಅತ್ಯಂತ ಪ್ರಮುಖವಾದ ವಿಷಯವಾಗಿದೆ.
ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಆಯೋಗವು ಭೇಟಿ ಮಾಡಿ ಅವರನ್ನು ವಿಚಾರಿಸುವುದರೊಂದಿಗೆ ವೈದ್ಯಾಧಿಕಾರಿಗಳಿಗೆ ಎಲ್ಲ ವೈದ್ಯಕೀಯ ನೆರವು ನೀಡಲು ಸೂಚಿಸಿದೆ. ಕಾಲ್ತುಳಿತದಲ್ಲಿ ಮರಣಹೊಂದಿದ 11 ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ಈಗಾಗಲೇ ಘೋಷಿಸಿರುವುದನ್ನು ಪರಿಗಣಿಸಿ ಇನ್ನೂ 15 ಲಕ್ಷ ರೂ. ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ (ಒಟ್ಟು 25 ಲಕ್ಷ ರೂಗಳನ್ನು) ನೀಡುವಂತೆ ತಿಳಿಸಿದೆ.












Click it and Unblock the Notifications