SWR: ಗಣೇಶ ಹಬ್ಬ ಪ್ರಯುಕ್ತ ಹುಬ್ಬಳ್ಳಿ-ಕರಾವಳಿಗೆ ವಿಶೇಷ ರೈಲು ಕಾರ್ಯಾಚರಣೆ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು, ಆಗಸ್ಟ್ 20: ಪ್ರಸಕ್ತ ಸಾಲಿನ ಗೌರಿ ಗಣೇಶ ಹಬ್ಬವು ಇದೇ ಆಗಸ್ಟ್ 27ರಂದು ಬುಧವಾರ ಇದೆ. ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲೂ ಸಂಭ್ರಮ ಸಡಗರ ಮನೆ ಮಾಡಿದೆ. ಈ ವೇಳೆ ತಮ್ಮ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ರೈಲು ನಿಲ್ದಾಣಗಳಲ್ಲಿ ದಟ್ಟಣೆ ಹೆಚ್ಚಿರಲಿದ್ದು, ಅದರ ನಿವಾರಣೆಗೆ ನೈಋತ್ಯ ರೈಲ್ವೆಯು (SWR) ಉತ್ತರ ಕರ್ನಾಟಕದಿಂದ ಕರಾವಳಿ ಭಾಗಕ್ಕೆ ವಿಶೇಷ ರೈಲು ಕಾರ್ಯಾಚರಣೆ ಮಾಡಲಿದೆ. ಮಾರ್ಗ, ನಿಲುಗಡೆ, ಸಮಯ ಒಟ್ಟಾರೆ ವೇಳಾಪಟ್ಟಿ ವಿವರ ಇಲ್ಲಿದೆ.

ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಿದೆ. ಅದರ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

SWR Special Train for Ganesh Festival Hubballi Mangaluru Service Announced

SWR ಪ್ರಕಾರ, ಎಸ್‌ಎಸ್‌ಎಸ್ ಹುಬ್ಬಳ್ಳಿ-ಮಂಗಳೂರು ಸೆಂಟ್ರಲ್ ಮಧ್ಯೆ ಎಕ್ಸ್‌ಪ್ರೆಸ್ ವಿಶೇಷ ರೈಲು (07341) ಆಗಸ್ಟ್ 26 ಮಂಗಳವಾರ ಸಂಜೆ 4 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ ತಲುಪುತ್ತದೆ. ಮರಳಿ ಅದೇ ದಿಕ್ಕಿನಲ್ಲಿ ಮಂಗಳೂರು ಸೆಂಟ್ರಲ್ -ಹುಬ್ಬಳ್ಳಿ ರೈಲು (07342) ಆಗಸ್ಟ್ 27 ರಂದು ಬುಧವಾರ ಮಧ್ಯಾಹ್ನ 2:15 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 09:45 ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಬಂದು ಸೇರಲಿದೆ.

ಈ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ SMM ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆ ನೀಡಲಿದೆ.

ಒಟ್ಟು 17 ಬೋಗಿಗಳೊಂದಿಗೆ ಹೊಂದಿರುವ ಈ ರೈಲಿನಲ್ಲಿ 01 ಎಸಿ ಎರಡು ಶ್ರೇಣಿ, 01 ಎಸಿ ಮೂರು ಶ್ರೇಣಿ, 10 ಸ್ಲೀಪರ್ ವರ್ಗ, 03 ಸಾಮಾನ್ಯ ಎರಡನೇ ವರ್ಗ ಮತ್ತು 02 ಎರಡನೇ ದರ್ಜೆಯ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳನ್ನು ಅಂಗವಿಕಲ ಸ್ನೇಹಿ ವಿಭಾಗದೊಂದಿಗೆ ಒಳಗೊಂಡಿದೆ. ಪ್ರಯಾಣಿಕರು ಹೆಚ್ಚಿನ ಮಾಹಿತಿಗೆ ಅಧಿಕೃತ ಭಾರತೀಯ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ರೈಲ್ವೆ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಬಹುದು.

ಇದಷ್ಟೇ ಅಲ್ಲದೇ ಗೌರಿ ಗಣೇಶ ಹಬ್ಬ, ದಸರಾ ಹಾಗೂ ಛತ್ ಹಬ್ಬಗಳ ಪ್ರಯುಕ್ತ ಬೆಂಗಳೂರಿನ ಯಶವಂತಪುರ ಹಾಗೂ ಬೆಂಗಳೂರು ಎಸ್‌ಎಂವಿಟಿ ರೈಲು ನಿಲ್ದಾಣಗಳಿಂದ ವಿವಿಧ ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ಅದರಲ್ಲಿ ಆಗಸ್ಟ್ 26-27 ರಂದು ಹೊರಟು ಬರುವ ರೈಲುಗಳ ಪೈಕಿ SMVT ಬೆಂಗಳೂರು-ಬೀದರ್ (06549/06550), ಮೈಸೂರು-ತಿರುನೆಲ್ವೇಲಿ (06241/06242) , SMVT ಬೆಂಗಳೂರು-ಮಡ್ಗಾಂವ್ (06569/06570) ರೈಲುಗಳು ಸೇರಿವೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+