ತಬ್ಲಿಘಿ ಜಮಾತ್; ಭಾರತಕ್ಕೆ 10 ವರ್ಷ ಬರದಂತೆ ನಿರ್ಬಂಧ
ಬೆಂಗಳೂರು, ಆಗಸ್ಟ್ 09: ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 9 ವಿದೇಶಿ ಪ್ರಜೆಗಳಿಗೆ ಭಾರತಕ್ಕೆ 10 ವರ್ಷ ಬರದಂತೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ಹೇರಿದೆ. 9 ಜನರ ವಿರುದ್ಧ ಕರ್ನಾಟಕದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲಾಗಿದೆ.
ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣಕ್ಕೆ ತುಮಕೂರು ಪೊಲೀಸರು 9 ವಿದೇಶಿ ಪ್ರಜೆಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದರು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಎಫ್‌ಐಆರ್ ರದ್ದುಗೊಳಿಸಿದರು ಮತ್ತು 10 ವರ್ಷ ಭಾರತಕ್ಕೆ ಬರದಂತೆ ನಿರ್ಬಂಧ ವಿಧಿಸಿದರು. 10 ವರ್ಷ ದೇಶಕ್ಕೆ ಭೇಟಿ ನೀಡುವುದಿಲ್ಲ ಎಂದು ಎಲ್ಲರೂ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿದೆ.

ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಪ್ರಾಧಿಕಾರ ವಿಧಿಸುವ ದಂಡ ಮೊತ್ತವನ್ನು ಪಾವತಿ ಮಾಡಿದರೆ ವಿದೇಶಿ ಪ್ರಜೆಗಳಿಗೆ ನಿರ್ಗಮನ ಪರವಾನಗಿ ನೀಡುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 960 ಜನರನ್ನು ಕೇಂದ್ರ ಸರ್ಕಾರ ಕಪ್ಪುಪಟ್ಟಿಗೆ ಸೇರಿಸಿದೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ವ್ಯಕ್ತಿಗಳ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.












Click it and Unblock the Notifications