ಹಾಸ್ಟೆಲ್‌ಗಳಿಗೆ ತಹಶೀಲ್ದಾರ್ ಭೇಟಿ ಕಡ್ಡಾಯ; ಆದೇಶ
ಬೆಂಗಳೂರು, ಸೆಪ್ಟೆಂಬರ್ 21; ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಬಗ್ಗೆ ಆಗಾಗ ವರದಿಗಳು ಬರುತ್ತವೆ. ಹಾಸ್ಟೆಲ್‌ಗಳಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡುವುದು ನಡೆಯುತ್ತದೆ. ಈಗ ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ನರಸಿಂಹಮೂರ್ತಿ, ಸರ್ಕಾರದ ಅಧೀನ ಕಾರ್ಯದರ್ಶಿ-1, ಸಮಾಜ ಕಲ್ಯಾಣ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶ 20/01/2012 ಮತ್ತು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರ ಏಕ ಕಡತವನ್ನು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳನ್ನು ತಪಾಸಣೆ ಮಾಡಲು ಸೂಚನೆ ನೀಡಲಾಗಿತ್ತು.
ರಾಜ್ಯದ ಆಯಾ ತಾಲ್ಲೂಕಿನ ತಹಶೀಲ್ದಾರರು, ಆಯಾ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ತಮ್ಮ ಭೌಗೋಳಿಕ/ ಅಧಿಕಾರ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳ ತಪಾಸಣೆ ನಡೆಸಲು ಮತ್ತು ಹೀಗೆ ತಪಾಸಣೆ ಮಾಡಲಾದ ತಪಾಸಣಾ ವರದಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಂದಿನ ಅಗತ್ಯ ಕ್ರಮಕ್ಕಾಗಿ ಸಲ್ಲಿಸಲು ಹಾಗೂ ಸಂಬಂಧಪಟ್ಟ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಪಾಸಣಾ ವರದಿಯನ್ನು ಪರಿಶೀಲಿಸಿ ತಪ್ಪಿತಸ್ಥ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳ ವಾರ್ಡನ್‌ಗಳ ವಿರುದ್ಧ ನಿಯಮಾನುಸಾರ ಕ್ರಮಿಕೈಗೊಳ್ಳಲು ಅಧಿಕಾರ ನೀಡಿ ಆದೇಶಿಸಲಾಗಿದೆ.
ದಿನಾಂಕ 16/08/2023ರಂದು ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಚರ್ಚಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿನ ಅವ್ಯವಸ್ಥೆ ಮತ್ತು ವಿದ್ಯಾರ್ಥಿನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ವಿದ್ಯಾರ್ಥಿನಿಲಯಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಪ್ರತಿ ದಿನ ಮಧ್ಯಮಗಳಲ್ಲಿ ಹಾಗೂ ದಿನ ಪತ್ರಿಕೆಗಳಲ್ಲಿ ವರದಿಗಳು ಪಕಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿನ ಸಮರ್ಪಕ ನಿರ್ವಹಣೆ ಬಗ್ಗೆ ಅಲ್ಲಿನ ಕಂದಾಯ ವಿಭಾಗದ ಉಪವಿಭಾಗಧಿಕಾರಿಗಳು ಹಾಗೂ ತಾಲ್ಲೂಕಿನ ತಹಶೀಲ್ದಾರ್ ಅವರು ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪತಿ ತಿಂಗಳು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲು ಸರ್ಕಾರದ ಆದೇಶ ದಿನಾಂಕ 20/01/2012ರಲ್ಲಿನ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಕುರಿತು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆರವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಆದೇಶವೇನು?; ಎಲ್ಲಾ ಅಂಶಗಳನ್ನು ಪರಿಶೀಲಿಸಿ ಸರ್ಕಾರವು ರಾಜ್ಯದ ಆಯಾ ತಾಲ್ಲೂಕಿನ ತಹಶೀಲ್ದಾರರು, ಆಯಾ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ಭೌಗೋಳಿಕ/ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ/ ತಪಾಸಣೆ ನೀಡಿ ಸರ್ಕಾರಕ್ಕೆ ವರದಿ ಮಾಡುವಂತೆ ಆದೇಶಿಸಿದೆ.
* ಉಪವಿಭಾಗಾಧಿಕಾರಿಗಳು ಕಂದಾಯ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಕ್ಕೆ ಪ್ರತಿ ತಿಂಗಳು ಕನಿಷ್ಟ 1 ಬಾರಿ ಅನಿರಿಕ್ಷಿತವಾಗಿ ಭೇಟಿ ನೀಡಿ ವರದಿಯನ್ನು ಸರ್ಕಾರಕ್ಕೆ ನೇರವಾಗಿ ಸಲ್ಲಿಸುವುದು.
* ತಾಲ್ಲೂಕಿನ ತಹಶೀಲ್ದಾರ್ ತಾಲ್ಲೂಕು ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ನಿಲಯಗಳಿಗೆ ಪ್ರತಿ ತಿಂಗಳು ಕನಿಷ್ಟ 2 ಬಾರಿ ಅನಿರಿಕ್ಷಿತವಾಗಿ ಭೇಟಿ ನೀಡಿ ವರದಿಯನ್ನು ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವುದು.
-
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications