ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರ ಪತ್ರ

ಬೆಂಗಳೂರು, ಮೇ 22: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಿ ವಿವಾದಾತ್ಮಕ ಅಂಶಗಳನ್ನು ತೆಗೆದು, ಅದರ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆಯು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.

ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆಗ ಬಿಸಿ ನಾಗೇಶ್‌ ಅವರು ಶಿಕ್ಷಣ ಮಂತ್ರಿಯಾಗಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿಯು ಪತ್ರ ಬರೆದಿದೆ.

Take action against Rohith Chakrathirtha: Education experts letter to CM Siddaramaiah

ಈ ಬಗ್ಗೆ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ ಅವರು ಮಾತನಾಡಿ, ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಳೆದ ಬಾರಿ ಅಧಿಕಾರರೂಢರಾಗಿ ಆಡಳಿತ ನಡೆಸಿದ್ದ ಬಿಜೆಪಿ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಳಸಿಕೊಂಡಿದ್ದರು. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಆಗುವವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಪರಿಷ್ಕೃತ ಪಠ್ಯವನ್ನು ಕೈಬಿಟ್ಟು, 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನು ಮುಂದುವರೆಸಬೇಕು. ಅಲ್ಲದೆ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ತ ಮತ್ತು ಸಮಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಅಸಂವಿಧಾನಿಕವಾಗಿದ್ದು, ವಿಧಾನಸಭೆಯಲ್ಲಿ ನಡೆಯುವ ಮೊದಲ ಅಧಿವೇಶನದಲ್ಲೇ ಇದನ್ನು ತಿರಸ್ಕರಿಸಬೇಕು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ತರಲು ಹೊಸ ಶಿಕ್ಷಣ ನೀತಿ ರೂಪಿಸಬೇಕು. ಈಗಾಗಲೇ ಕನ್ನಡ ಮತ್ತು ಇತಿಹಾಸ ಪುಸ್ತಕಗಳು ಮುದ್ರಣಗೊಂಡಿದ್ದು ಅವುಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯ ಮಾಡಲಾಗಿದೆ.

Take action against Rohith Chakrathirtha: Education experts letter to CM Siddaramaiah

ಸರಿಯಾದ ಆದೇಶ ಕೂಡ ಇಲ್ಲದೆ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಪಠ್ಯಪರಿಷ್ಕರಣೆ ಹೆಸರಿನಲ್ಲಿ ರಾಜ್ಯದ ಖಜಾನೆಗೆ ಕೋಟ್ಯಂತರ ನಷ್ಟ ಉಂಟು ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಆ ಹಣವನ್ನು ವಸೂಲು ಮಾಡಬೇಕು ಎಂದು ಆಗ್ರಹಿಸಿರುವುದಲ್ಲದೆ. ರಾಜ್ಯದಲ್ಲಿ 15 ಸಾವಿರ ಶಿಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ಇನ್ನು ಜೂನ್ 15ರ ಒಳಗಾಗಿ ಅತಿಥಿ ಶಿಕ್ಷರನ್ನು ನೇಮಿಸಬೇಕು. ವಿದ್ಯಾರ್ಥಿಗಳ ಪಠ್ಯಪುಸ್ತಕ, ಶೂ, ಸಮವಸ್ತ್ರ ಬಸ್ ಪಾಸ್‌ಗಳನ್ನು ಸರಿಯಾದ ಸಮಯಕ್ಕೆ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಶೇಕಡ 20ರಷ್ಟು ಮೀಸಲಿಡಬೇಕು ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+