ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಹೈಕಮಾಂಡ್ ನಾಯಕರು ಕೊಟ್ಟ ಸಂದೇಶ ಏನು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಏಪ್ರಿಲ್ 12 : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಹುದ್ದೆ ನೀಡಿದ ಹೈಕಮಾಂಡ್ ನಾಯಕರು ಎರಡು ಸಂದೇಶಗಳನ್ನು ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.

2018ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ರಾಜ್ಯ ಬಿಜೆಪಿಯ ಪ್ರಬಲ ನಾಯಕ ಯಡಿಯೂರಪ್ಪ ಅವರಿಗೆ ಪಕ್ಷದ ನಾಯಕರು ಎರಡು ಮಹತ್ವದ ಜವಾಬ್ದಾರಿಗಳನ್ನು ನೀಡಿದ್ದಾರೆ. [ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಪಟ್ಟ : ಯಾರು, ಏನು ಹೇಳಿದರು?]

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮೂರು ವರ್ಷಗಳಲ್ಲಿ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸಲು ವಿರೋಧ ಪಕ್ಷವಾದ ಬಿಜೆಪಿ ಸಮಾಧಾನಕರವಾಗಿ ಕೆಲಸ ಮಾಡಿಲ್ಲ ಎಂಬುದು ರಾಷ್ಟ್ರೀಯ ನಾಯಕರ ವಾದ. ಅದಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಬಲ್ಲ ಶಕ್ತಿ ಇರುವ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲಾಗಿದೆ. [ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ, ಬಿಜೆಪಿಯಲ್ಲಿ ದೀಪಾವಳಿ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತ್ವತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಮತ್ತು ಪಕ್ಷದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಹೋಗಬೇಕು ಎಂದು ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ನಾಯಕರು ಸಂದೇಶ ನೀಡಿದ್ದಾರೆ. ವಿವರಗಳು ಚಿತ್ರಗಳಲ್ಲಿವೆ.......

ಆಯ್ಕೆ ಹಿಂದಿದೆ ಲೆಕ್ಕಾಚಾರ

ಆಯ್ಕೆ ಹಿಂದಿದೆ ಲೆಕ್ಕಾಚಾರ

ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ ಹಿಂದೆ ಹಲವು ಲೆಕ್ಕಾಚಾರಗಳಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮೂರು ವರ್ಷದಲ್ಲಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯತೆಗಳನ್ನು ಜನರ ಮುಂದಿಡಲು ವಿಫಲವಾಗಿದೆ. ಆದ್ದರಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಬಲ್ಲ ಪ್ರಬಲ ನಾಯಕ ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಪ್ರಬಲ ವಿರೋಧ ಪಕ್ಷವಾಗಿ ಬೆಳೆಯಬೇಕು

ಪ್ರಬಲ ವಿರೋಧ ಪಕ್ಷವಾಗಿ ಬೆಳೆಯಬೇಕು

ಬಿಜೆಪಿಯನ್ನು ಪ್ರಬಲ ವಿರೋಧ ಪಕ್ಷವಾಗಿ ಕಟ್ಟಬೇಕು ಎಂದು ಬಿಜೆಪಿ ನಾಯಕರು ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಸರ್ಕಾರ ಪ್ರಮುಖ ವೈಫಲ್ಯಗಳ ಕುರಿತು ಧ್ವನಿ ಎತ್ತಬೇಕು. ರಾಜ್ಯ ಪ್ರವಾಸ ಮಾಡುವಾಗ ಜನರಿಗೆ ಸರ್ಕಾರದ ವೈಫಲ್ಯಗಳನ್ನು ತಲುಪಿಸಬೇಕು ಎಂಬುದು ರಾಷ್ಟ್ರೀಯ ನಾಯಕರ ಸಂದೇಶವಾಗಿದೆ.

ಪಕ್ಷದಲ್ಲಿ ಭಿನ್ನಮತವಿರಬಾರದು

ಪಕ್ಷದಲ್ಲಿ ಭಿನ್ನಮತವಿರಬಾರದು

ಕಳೆದ ವಾರ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದಲ್ಲಿ ಭಿನ್ನಮತದ ಕುರಿತು ರಾಷ್ಟ್ರೀಯ ನಾಯಕರು ಚರ್ಚೆ ನಡೆಸಿದ್ದಾರೆ. ಕೆಲವು ವರ್ಷಗಳ ಹಿಂದೆ ನಡೆದಂತೆ ಪಕ್ಷದಲ್ಲಿ ಭಿನ್ನಮತ ಉಂಟಾಗಬಾರದು. ಎಲ್ಲಾ ನಾಯಕರನ್ನು ಒಗ್ಗಟ್ಟಾಗಿ ಕರೆದುಕೊಂಡು ಹೋಗಬೇಕು ಎಂದು ನಾಯಕರು ಸಲಹೆ ನೀಡಿದ್ದಾರೆ.

ಪ್ರಬಲ ನಾಯಕತ್ವ ಮಾತ್ರ ಸಾಕಾಗೋದಿಲ್ಲ

ಪ್ರಬಲ ನಾಯಕತ್ವ ಮಾತ್ರ ಸಾಕಾಗೋದಿಲ್ಲ

2018ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಬಲ ನಾಯಕತ್ವ ಮಾತ್ರ ಸಾಕಾಗುವುದಿಲ್ಲ ಎಂಬುದು ರಾಷ್ಟ್ರೀಯ ನಾಯಕರಿಗೂ ತಿಳಿದಿದೆ. ಪಕ್ಷದ ನಾಯಕರಲ್ಲಿ ಒಗ್ಗಟ್ಟಿದ್ದರೆ ಗೆಲುವು ಸುಲಭವಾಗುತ್ತದೆ ಎಂಬುದು ಪಕ್ಷಕ್ಕೂ ತಿಳಿಸಿದೆ. ಆದ್ದರಿಂದ, ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಯಡಿಯೂರಪ್ಪ ಅವರಿಗೆ ಪಟ್ಟ ಕಟ್ಟಲಾಗಿದೆ.

ಎಲ್ಲಾ ನಾಯಕರೂ ಒಪ್ಪುವಂತಿರಬೇಕು

ಎಲ್ಲಾ ನಾಯಕರೂ ಒಪ್ಪುವಂತಿರಬೇಕು

ಅಪಾರ ಅನುಭವ ಹೊಂದಿರುವ ಯಡಿಯೂರಪ್ಪ ಅವರು ಉತ್ತಮ ನಿರ್ಧಾರಗಳನ್ನು ತಗೆದುಕೊಳ್ಳುತ್ತಾರೆ. ಆ ನಿರ್ಧಾರಗಳು ಎಲ್ಲಾ ನಾಯಕರು ಒಪ್ಪುವಂತಿರಬೇಕು. ನಿರ್ಧಾರಗಳು ಪಕ್ಷದ ನಾಯಕರಲ್ಲೇ ಭಿನ್ನಮತ ಉಂಟುಮಾಡಬಾರದು ಎಂಬುದು ಪಕ್ಷದ ಆಶಯವಾಗಿದೆ.

English summary
The BJP last week appointed former Chief Minister of Karnataka, B S Yeddyurappa as the party president in the state. While there is a lot of optimism in the BJP, Karnataka, the strongman of the party has two messages from the top leadership- take on the Congress party and ensure collective decisions are taken.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X