ಬೆಂಗಳೂರಿಗರೇ ಎಚ್ಚರ ಎಚ್ಚರ; 'ಡೆಂಘಿ ಜ್ವರದಿಂದ ಸಾವುಗಳಾಗದಂತೆ ಮುನ್ನೆಚ್ವರಿಕೆ ವಹಿಸಿʼ
ಬೆಂಗಳೂರು, ಜೂನ್ 26: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ 5374 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಡೆಂಘಿ ನಿಯಂತ್ರಣ ಕುರಿತಂತೆ ಬೆಂಗಳೂರಿನಲ್ಲಿ ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.
ಈ ವೇಳೆ ಡೆಂಘಿ ಜ್ವರ ವಿಚಾರದಲ್ಲಿ ಹೆಚ್ಚು ಮುಂಜಾಗೃತೆ ವಹಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಸಭೆಗು ಮುನ್ನ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಟೆಸ್ಟಿಂಗ್ ಕಡಿಮೆ ಮಾಡುವುದು ಬೇಡ. ಟೆಸ್ಟಿಂಗ್ ಹೆಚ್ಚು ಮಾಡಿ ಸಾಧ್ಯವಾದಷ್ಟು ಡೆಂಘಿ ಪ್ರಕರಣಗಳನ್ನ ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವ ಕಾರ್ಯ ನಡೆಯಬೇಕು ಎಂದು ಸೂಚನೆ ನೀಡಿದರು.

ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ಪಡುವುದು ಬೇಡ. ಡೆಂಘಿ ಜ್ವರದಿಂದ ಸಾವುಗಳಾಗದಂತೆ ಮುನ್ನೆಚ್ವರಿಕೆ ವಹಿಸುವುದು ಮುಖ್ಯ. ಡೆಂಘಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ವಿನ ಜಾಗೃತಿ ಮೂಡಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಹಾಗೂ ಆರೋಗ್ಯ ಸಚಿವರು ಸೂಚನೆ ನೀಡಿದರು.
ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ಆದರೆ ಮರ, ಪ್ರಮಾಣವನ್ನ ಝೀರೋ ಇರುವಂತೆಯೇ ನೋಡಿಕೊಳ್ಳುವತ್ತು ಅಗತ್ಯ ಮುಂಜಾಗೃತೆ ವಹಿಸವೇಕು. ರಾಜ್ಯದಲ್ಲಿ ಮರಣ ಪ್ರಮಾಣ 0.09% ಇದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಘಿ ಬಗ್ಗೆ ಅರಿವು ಮೂಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ರಾಜ್ಯದಲ್ಲಿ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ, ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ.ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಲಾಗಿದೆ.
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.












Click it and Unblock the Notifications