ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದುಳಿದ ವರ್ಗದ ಪಟ್ಟಿಯಿಂದ ತಳವಾರ, ಪರಿವಾರ ಕೈ ಬಿಟ್ಟ ಸರ್ಕಾರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30; ಕರ್ನಾಟಕ ಸರ್ಕಾರವು ತಳವಾರ ಮತ್ತು ಪರಿವಾರ ಜಾತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಿಂದ ತೆಗೆದು ಹಾಕಿದೆ. ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಿದೆ.

ಶನಿವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಈ ಹಿಂದೆ ಹೊರಡಿಸಿದ ಅಧಿಸೂಚನೆಯಲ್ಲಿ ರಾಜ್ಯದ ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಯಲ್ಲಿನ ಕ್ರಮ ಸಂಖ್ಯೆ 38ರಲ್ಲಿ ತಳವಾರ ಮತ್ತು ಪರಿವಾರ ಜಾತಿಗಳನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರ್ಪಡೆಗೊಳಿಸಿತ್ತು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ

Talavara And Parivara Communities From List Of Backward Classes Reservation

ಕರ್ನಾಟಕ ಸರ್ಕಾರ ಸಹ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲು ಆದೇಶಿಸಿತ್ತು. ಈಗ ಅಧಿಕೃತವಾಗಿ ತಳವಾರ ಮತ್ತು ಪರಿವಾರ ಜಾತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಿಂದ ತೆಗೆದು ಹಾಕಿದೆ.

ಮೀಸಲಾತಿ ಪ್ರಮಾಣ ಹೆಚ್ಚಳ: ಕಾಯ್ದೆ ರೂಪಿಸಲು ಕಾಂಗ್ರೆಸ್‌ ಒತ್ತಾಯಮೀಸಲಾತಿ ಪ್ರಮಾಣ ಹೆಚ್ಚಳ: ಕಾಯ್ದೆ ರೂಪಿಸಲು ಕಾಂಗ್ರೆಸ್‌ ಒತ್ತಾಯ

ತಳವಾರ ಮತ್ತು ಪರಿವಾರ ಜಾತಿಗಳಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಲಭ್ಯವಾಗುವುದರಿಂದ ಸಮುದಾಯಕ್ಕೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಲಾಭವಾಗಲಿದೆ. ಹಲವು ನಾಯಕರು ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿದ್ದಾರೆ.

 SCST ಮೀಸಲಾತಿ ಹೆಚ್ಚಳ, ಹಲವು ದಶಕಗಳ ಬೇಡಿಕೆ ಇಡೇರಿಸಿದ್ದೇವೆ: ಬಸವರಾಜ ಬೊಮ್ಮಾಯಿ SCST ಮೀಸಲಾತಿ ಹೆಚ್ಚಳ, ಹಲವು ದಶಕಗಳ ಬೇಡಿಕೆ ಇಡೇರಿಸಿದ್ದೇವೆ: ಬಸವರಾಜ ಬೊಮ್ಮಾಯಿ

ಸರ್ಕಾರದ ಆದೇಶ; ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಯಾಗಿರುವ 'ತಳವಾರ' ಮತ್ತು 'ಪರಿವಾರ' ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ಕೈಬಿಡುವ ಕುರಿತು.

ಭಾರತ ಸಂವಿಧಾನದ ಅನುಚ್ಛೇಧ 15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಛೇಧ 16(4)ರ ಮೇರೆಗೆ ನೇಮಕಾತಿಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿ ಸರ್ಕಾರದ ಆದೇಶಿಸಿರುತ್ತದೆ.

ಭಾರತ ಸರ್ಕಾರದ ದಿನಾಂಕ: 20-03-2020ರ The Gazette of India ಅಧಿಸೂಚನೆಯನ್ವಯ, THE CONSTITUTION (SCHEDULED TRIBES) ORDERS (AMENDMENT) ACT, 2020 de). ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿನ ಕ್ರ.ಸಂ: 38ರಲ್ಲಿ Parivara ಮತ್ತು Talawar ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪುಮಾಣಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ/ ತಹಶೀಲ್ದಾರ್‌ಗೆ ನಿರ್ದೇಶಿಸಲಾಗಿರುತ್ತದೆ.

ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ದಿ: 17-05-2022ರಂದು ಜರುಗಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ 221ನೇ ಸಭೆಯಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಿಂದ ಪ್ರವರ್ಗ-1ರ ಕ್ರಮ ಸಂಖ್ಯೆ 88 (ಹೆಚ್) ರಲ್ಲಿರುವ ತಳವಾರ ಜಾತಿಯನ್ನು ಹಾಗೂ ಕ್ರಮ ಸಂಖ್ಯೆ 88(ಕೆ) ರಲ್ಲಿರುವ ಪರಿವಾರ ನಾಯಕ (Parivara Nayaka) ಜಾತಿಗಳನ್ನು ತೆಗೆದುಹಾಕಲು ಸರ್ವಾನುಮತದಿಂದ ತೀರ್ಮಾನಿಸಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ: 30-03-2002ರ ಪ್ರವರ್ಗ-1ರ 88 (ಹೆಚ್)ನಲ್ಲಿನ ತಳವಾರ (Talawara) ಜಾತಿ ಹಾಗೂ ಪುವರ್ಗ-1ರ 88 (ಕೆ)ನಲ್ಲಿನ ಪರಿವಾರ ನಾಯಕ (Parivara Nayaka) ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ಆದೇಶಿಸಿದೆ.

ಸರ್ಕಾರದ ನಡೆಗೆ ಸ್ವಾಗತ; ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ.

ಫೇಸ್‌ ಬುಕ್ ಪೋಸ್ಟ್ ಹಾಕಿರುವ ಅವರು, 'ರಾಜ್ಯ ಸರ್ಕಾರವು ತಳವಾರ ಮತ್ತು ಪರಿವಾರ ಜಾತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಿಂದ ತೆಗೆದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ. ಕೇಂದ್ರ ಸರ್ಕಾರವು ಈ ಹಿಂದೆ ದಿನಾಂಕ 20.03.2020 ರಂದು The Gazette of India ಅಧಿಸೂಚನೆಯಲ್ಲಿ ಸಂವಿಧಾನದ ಪ್ರಕಾರ ರಾಜ್ಯದ ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಯಲ್ಲಿನ ಕ್ರಮ ಸಂಖ್ಯೆ 38 ರಲ್ಲಿ ತಳವಾರ ಮತ್ತು ಪರಿವಾರ ಜಾತಿಗಳನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರವು ಕೂಡ ಆಯಾ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ST ಪ್ರಮಾಣಪತ್ರ ನೀಡಲು ಆದೇಶಿಸಿತ್ತು' ಎಂದು ಹೇಳಿದ್ದಾರೆ.

'ಇಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಳವಾರ ಮತ್ತು ಪರಿವಾರ ಜಾತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಿಂದ ತೆಗೆದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ. ಪರಿಶಿಷ್ಟ ಪಂಗಡದ ಮೀಸಲಾತಿ ಲಭ್ಯವಾಗುವುದರಿಂದ ತಳವಾರ ಮತ್ತು ಪರಿವಾರದ ಸಮುದಾಯಕ್ಕೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಇದು ಲಾಭವಾಗಲಿದೆ' ಎಂದು ತಿಳಿಸಿದ್ದಾರೆ.

'ಈ ಮಹತ್ವದ ನಿರ್ಧಾರ ಕೈಗೊಂಡಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆಗಳನ್ನು ನಾನು ಈ ಸಂದರ್ಭದಲ್ಲಿ ಸಲ್ಲಿಸುತ್ತೇನೆ' ಎಂದು ಪೋಸ್ಟ್ ಹಾಕಿದ್ದಾರೆ.

English summary
Karnataka government ordered to withdraw Talavara and Parivara tribal communities from the list of backward classes reservation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X