ಕರ್ನಾಟಕದಲ್ಲಿ 'ತಾಲಿಬಾನೀಕರಣ': ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ
ಬೆಂಗಳೂರು, ಮೇ 16: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ರಾಜ್ಯದಲ್ಲಿ ತಾಲಿಬಾನೀಕರಣವು ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಹೇಳಿದರು.
'ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಮತ್ತೆ ಶಕ್ತಿಯನ್ನು ಸಾಧಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ' ಎಂದು ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಮ್ಮ ಮನೆಯ ಹೊರಗೆ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ವ್ಯಕ್ತಿಯ ಮೇಲೆ ದಾಳಿ ನಡೆಸಲಾಯಿತು. ಈ ದಾಳಿಯಲ್ಲಿ ಪತ್ನಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಹತ್ಯೆಗೀಡಾದ್ದಾನೆ. ಈತ ಬಿಜೆಪಿ ಕಾರ್ಯಕರ್ತ. ಆತನ ಕುಟುಂಬವನ್ನು ಭೇಟಿ ಮಾಡಿದ ಬಳಿಕ ನಳೀನ್ ಕುಮಾರ್ ಕಟೀಲ್ ಅವರು ಈ ಹೇಳಿಕೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ.
'ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ಜನರು ತೊಡಗಿಕೊಂಡಿದ್ದಾರೆ. ಇಲ್ಲಿನ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಈ ರೀತಿಯ ಜನರನ್ನು ಆಶ್ರಯಿಸಿ ಪ್ರಚಾರ ಮಾಡಿದ್ದರಿಂದ ಇದು ನಡೆಯುತ್ತಿದೆ. ಹಾಗಾಗಿ ಕಾಂಗ್ರೆಸ್‌ನಿಂದ ಉತ್ತಮವಾದದ್ದನ್ನು ನಿರೀಕ್ಷಿಸಲು ಸಾಧ್ಯವಿಲ್ಲ' ಎಂದು ಕಟೀಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಘಟನೆಯನ್ನು ಖಂಡಿಸಿದ ಅವರು, ಕರ್ನಾಟಕವನ್ನು ಮಿನಿ ಬಿಹಾರ ಮಾಡಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದರು.
'ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಈ ಸರ್ಕಾರ ಮುಂದುವರಿದರೆ ರಾಜ್ಯಕ್ಕೆ ಏನಾಗುತ್ತದೆ ಎಂಬ ಸಂದೇಶವನ್ನು ಇದು ರವಾನಿಸುತ್ತದೆ. ಇದು ಇಲ್ಲಿ ಜಂಗಲ್ ರಾಜ್ ಸ್ಥಾಪನೆಯಾಗುವ ಸಂಕೇತವಾಗಿದೆ' ಎಂದು ಕಟೀಲು ಹೇಳಿದರು.
ನಾವು ಬಿಜೆಪಿ ಇದನ್ನು ಖಂಡಿಸುತ್ತೇವೆ ಮತ್ತು ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ. ನಾವು ಅದನ್ನು ಎದುರಿಸುತ್ತೇವೆ ಮತ್ತು ಹೋರಾಡುತ್ತೇವೆ. ನಾವು ತಕ್ಕ ಉತ್ತರವನ್ನು ನೀಡುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ ಎಂದರು.
'ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸಲು ಎಲ್ಲರೂ (ಕಾಂಗ್ರೆಸ್ ಉನ್ನತ ನಾಯಕರು) ದೆಹಲಿಯಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ಮುಂದುವರಿಸಿದ್ದಾರೆ' ಎಂದು ಕಟೀಲು ಹೇಳಿದರು.
ಯಾದಗಿರಿ, ಶಿವಮೊಗ್ಗ, ಭಟ್ಕಳ ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ (ಚುನಾವಣೆ ಫಲಿತಾಂಶ ಪ್ರಕಟವಾದ ನಂತರ) ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ಅವರು ಆರೋಪಿಸಿದರು.
ಇದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡರೆ ಒಳ್ಳೆಯದು. ಪೊಲೀಸ್ ಅಧಿಕಾರಿಗಳಿಗೆ ಹೇಳಿದ್ದೇನೆ. ಇಂತಹ ಘಟನೆಗಳು ನಡೆದಾಗ ಸುಮ್ಮನಿರಬಾರದು. ಇಂತಹ ಘಟನೆಗಳ ಹಿಂದಿರುವ ಎಲ್ಲರನ್ನೂ ಬಂಧಿಸಬೇಕು ಎಂದು ಕಟೀಲು ಹೇಳಿದರು.
224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದೆ. ಬಿಜೆಪಿ 66 ಸ್ಥಾನಗಳನ್ನು ಪಡೆದುಕೊಂಡಿದೆ.












Click it and Unblock the Notifications