ಸಂಧಾನ ವಿಫಲ, ಜುಲೈ 25ರಿಂದ ಸಾರಿಗೆ ನೌಕರರ ಮುಷ್ಕರ

Posted By:
Subscribe to Oneindia Kannada

ಬೆಂಗಳೂರು, ಜುಲೈ 22 : ಸಾರಿಗೆ ಸಂಸ್ಥೆಗಳ ನೌಕರರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದುಬಿದ್ದಿದೆ. ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿರುವ ನೌಕರರು ಜುಲೈ 25ರ ಮಧ್ಯರಾತ್ರಿಯಿಂದ ಮುಷ್ಕರ ನಡೆಸಲಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಸ್ಆರ್‌ಟಿಸಿ ವರ್ಕರ್ಸ್ ಫೇಡರೇಷನ್ ಪ್ರಧಾನ ಕಾರ್ಯದರ್ಶಿ ಅನಂತ ಸುಬ್ಬರಾವ್ ಅವರ ಜೊತೆ ನಡೆಸಿದ ಸಂಧಾನ ಸಭೆ ಮುರಿದುಬಿದ್ದಿದೆ. ಆದ್ದರಿಂದ ಜುಲೈ 25ರಿಂದ ಮುಷ್ಕರ ನಡೆಸಲಾಗುತ್ತದೆ.[ಸಾರಿಗೆ ಸಂಸ್ಥೆ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ]

ksrtc

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ವೇತನ ಪರಿಷ್ಕರಣೆ ಬಗ್ಗೆ ಸರ್ಕಾರದ ಏಕಪಕ್ಷೀಯ ನಿರ್ಧಾರ ಖಂಡಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.[ಜುಲೈ 25ರಿಂದ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ]

ಇಂದು ನಡೆದ ಸಭೆಯಲ್ಲಿಯೂ ಶೇ 30ರಷ್ಟು ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಯಿತು. ಆದರೆ, ಶೇ 10ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ಹೇಳಿತು. ಆದ್ದರಿಂದ ಸಂಧಾನ ಸಭೆ ಮುರಿದುಬಿದ್ದಿದ್ದು, ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ.

ramalinga reddy

2016ರ ಜನವರಿ 1ರಿಂದಲೇ ಅನ್ವಯವಾಗುವಂತೆ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ನಿರ್ಧಾರದಿಂದ ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಎನ್‌ಇಕೆಆರ್‌ಟಿಸಿ ಸೇರಿ ಎಲ್ಲಾ ನಿಗಮಗಳ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah meeting with transport corporations employee union leaders failed. Employees of Karnataka transport corporations decided to go on strike from July 25, 2016.
Please Wait while comments are loading...