ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ, ವೆಚ್ಚ ನಿಗದಿ

|
Google Oneindia Kannada News

ಮೈಸೂರು, ಜನವರಿ 04 : ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಫೆಬ್ರವರಿ 2 ಅಥವ 3ನೇ ವಾರದಲ್ಲಿ ಚುನಾವಣೆ ನಡೆಯಲಿದ್ದು, ಸೋಮವಾರ ಚುನಾವಣಾ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಮೈಸೂರಿನಲ್ಲಿ ಸೋಮವಾರ ಮಾತನಾಡಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು, 'ಎರಡು ಹಂತಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ನಡೆಸಲಾಗುತ್ತದೆ. ಜನವರಿ 2ನೇ ವಾರದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು' ಎಂದು ಹೇಳಿದರು. [ವಿಧಾನಪರಿಷತ್ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]

pn srinivasachari

'ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ 1 ಲಕ್ಷ ರೂ. ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ 50 ಸಾವಿರ ವೆಚ್ಚ ನಿಗದಿಪಡಿಸಲಾಗಿದೆ. ಚುನಾವಣೆಯಲ್ಲಿ ನೋಟಾ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ' ಎಂದರು. [ಚುನಾವಣೆ ಮೈತ್ರಿ ಬಗ್ಗೆ ದೇವೇಗೌಡರು ನೀಡಿದ ಸುಳಿವೇನು?]

ಸದ್ಯ, ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಅವಧಿ ಜನವರಿ ಅಂತ್ಯದಲ್ಲಿ ಕೊನೆಗೊಳ್ಳಲಿದೆ. ಜನವರಿ 10ರೊಳಗೆ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಸಹ ಚುನಾವಣೆಗಾಗಿ ತಯಾರಿಯನ್ನು ಆರಂಭಿಸಿವೆ. [ಪಂಚಾಯತ್ ಪ್ರತಿನಿಧಿಗಳಿಗೆ ಸರ್ಕಾರದ ಬಂಪರ್ ಕೊಡುಗೆ]

ರಾಜ್ಯದ ಒಟ್ಟು 176 ತಾಲೂಕು ಪಂಚಾಯಿತಿಯ 3,902 ಸ್ಥಾನಗಳಿಗೆ ಹಾಗೂ 30 ಜಿಲ್ಲಾ ಪಂಚಾಯಿತಿಗಳ 1,083 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

English summary
State Election Commissioner P.N.Srinivasachari announced expenditure limit for Taluk and Zilla panchayat election scheduled to be held on February 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X