ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಜನವರಿ 18 : ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ನಡುವೆಯೇ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಎದುರಾಗಿದೆ. ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ಬೆಂಗಳೂರಿನಲ್ಲಿ ಸೋಮವಾರ ಪ್ರತಿಕಾಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಅವರು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಫೆ.13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಫೆ.23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. [ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ವೆಚ್ಚ ನಿಗದಿ]

Srinivasachari

'ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 1 ಲಕ್ಷ ರೂ. ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 50 ಸಾವಿರ ವೆಚ್ಚ ನಿಗದಿಪಡಿಸಲಾಗಿದೆ. ಚುನಾವಣೆಯಲ್ಲಿ ನೋಟಾ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ' ಎಂದು ಶ್ರೀನಿವಾಸಚಾರಿ ಹೇಳಿದರು. [ಉಪ ಚುನಾವಣೆಗೆ ದಿನಾಂಕ ಘೋಷಣೆ]

ಮೊದಲ ಹಂತ : ಮೊದಲ ಹಂತದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಕಾರವಾರ, ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಎರಡನೇ ಹಂತ : ಎರಡನೇ ಹಂತದಲ್ಲಿ ಹಾಸನ, ಮಂಡ್ಯ, ಯಾದಗಿರಿ, ಚಾಮರಾಜನಗರ, ಬಳ್ಳಾರಿ, ಕೊಡಗು, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಬೀದರ್ ಜಿಲ್ಲೆಯ 4 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಮತದಾನ ನಡೆಯಲಿದೆ.

4 ಜಿಲ್ಲೆಗಳಲ್ಲಿ ಚುನಾವಣೆ ಇಲ್ಲ : ಹೈಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಕಲಬುರಗಿ, ರಾಯಚೂರು, ಬೀದರ್ ಹಾಗೂ ವಿಜಯಪುರ ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಯುತ್ತಿಲ್ಲ.

3 ಕ್ಷೇತ್ರಗಳ ಉಪ ಚುನಾವಣೆ : ಕೇಂದ್ರ ಚುನಾವಣಾ ಆಯೋಗ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ವೇಳಾಪಟ್ಟಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಹೆಬ್ಬಾಳ ಶಾಸಕ ಜಗದೀಶ್ ಕುಮಾರ್ (ಬಿಜೆಪಿ), ಬೀದರ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ (ಕೆಜೆಪಿ) ಮತ್ತು ದೇವದುರ್ಗ ಶಾಸಕ ವೆಂಕಟೇಶ ನಾಯಕ್ (ಕಾಂಗ್ರೆಸ್) ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಫೆಬ್ರವರಿ 13ರಂದು ಚುನಾವಣೆ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+