ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಿನಿ ರಜನೀಶ್ ವರ್ಗಾವಣೆಗೆ ತನ್ವೀರ್ ಸೇಠ್ ಪತ್ರ!

|
Google Oneindia Kannada News

ಬೆಂಗಳೂರು, ಮಾರ್ಚ್ 15 : ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ತನ್ವೀರ್ ಸೇಠ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

ಶಿಕ್ಷಣ ಸಚಿವ ತನ್ವೀರ್ ಸೇಠ್ ಶಾಲಿನಿ ರಜನೀಶ್ ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಶಾಲಿನಿ ರಜನೀಶ್ ಅವರು ಕಳೆದ 10 ದಿನಗಳಿಂದ ರಜೆ ಮೇಲೆ ತೆರಳಿದ್ದಾರೆ. ಈ ಸಂದರ್ಭದಲ್ಲಿಯೇ ಸಚಿವರು ವರ್ಗಾವಣೆ ಮಾಡುವಂತೆ ಪತ್ರ ಬರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Tanveer Sait wants principal secretary changed

ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನು ಖಾಸಗಿ ಸಂಸ್ಥೆಗೆ ನೀಡುವ ಕುರಿತು ಎಂಓಯು ಮಾಡಿಕೊಂಡಿದ್ದು ಸೇರಿದಂತೆ ಹಲವು ವಿಚಾರಗಳಲ್ಲಿ ಶಾಲಿನಿ ರಜನೀಶ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ಸಚಿವರು ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಮಾ.21ರ ತನಕ ರೋಹಿಣಿ ಸಿಂಧೂರಿ ವರ್ಗಾವಣೆ ಇಲ್ಲಮಾ.21ರ ತನಕ ರೋಹಿಣಿ ಸಿಂಧೂರಿ ವರ್ಗಾವಣೆ ಇಲ್ಲ

ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತನ್ವೀರ್ ಸೇಠ್ ಅವರು ಹಿಂದೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಜಯ್ ಸೇಠ್ ಅವರನ್ನು ಪ್ರಭಾರಿಯಾಗಿ ಕಾರ್ಯ ನಿರ್ವಹಿಸಲು ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.

English summary
Primary and Secondary Education Minister Tanveer Sait has requested Chief Minister Siddaramaiah to transfer his department's principal secretary Shalini Rajneesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X