• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಕೊರೊನಾ 3ನೇ ಅಲೆ ಸಿದ್ಧತೆ: ವಾರದಲ್ಲಿ ಕಾರ್ಯಪಡೆ ವರದಿ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಜೂನ್ 02: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಕೊರೊನಾ 3ನೇ ಅಲೆ ಸಂಬಂಧ ಪೂರ್ವ ಸಿದ್ಧತೆ ಕುರಿತು ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಕೋವಿಡ್ 3ನೇ ಅಲೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಔಷಧಗಳು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಒಂದು ವಾರದೊಳಗೆ ಕಾರ್ಯಪಡೆಯು ತನ್ನ ವರದಿ ಸಲ್ಲಿಸುವುದು ಎಂದು ಡಾ. ದೇವಿ ಪ್ರಸಾದ್ ಶೆಟ್ಟಿ ತಿಳಿಸಿದರು.

 ಅನ್ ಲಾಕ್ ಮೂಡ್ ನಲ್ಲಿದ್ದ ರಾಜ್ಯಕ್ಕೆ ಶಾಕ್: 3 ಷರತ್ತು ಹಾಕಿದ ಕೇಂದ್ರ? ಅನ್ ಲಾಕ್ ಮೂಡ್ ನಲ್ಲಿದ್ದ ರಾಜ್ಯಕ್ಕೆ ಶಾಕ್: 3 ಷರತ್ತು ಹಾಕಿದ ಕೇಂದ್ರ?

ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.

   Karnataka Lockdown ನಿಯಮಗಳಲ್ಲಿ ಕೊಂಚ ಬದಲಾವಣೆ | Oneindia Kannada
   English summary
   Task force formerd over preparations for corona 3rd wave in karnataka to submit its report within a week. CM Yediyurappa held meeting on wednesday,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X