Best Legislator Award: 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಯಾರಿಗೆ?
ಬೆಳಗಾವಿ, ಡಿಸೆಂಬರ್ 18: ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು.
ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ ಅವರು ತೊಡಗಿಸಿಕೊಳ್ಳುವ ರೀತಿಯ ಬಗ್ಗೆ ಕೊಂಡಾಡಿದರು. ಸದನದಲ್ಲಿ ಹಾಜರಿದ್ದು ಸಭೆಯ ಗಾಂಭೀರ್ಯತೆ ಕಾಪಾಡುವುದರ ಮೂಲಕ ಕಿರಿಯ ಶಾಸಕರಿಗೆ ತೋರಿದ ಮಾರ್ಗದರ್ಶನ ಮೆಚ್ಚುವಂತದ್ದು ಎಂದು ಅಭಿಪ್ರಾಯಪಟ್ಟರು.

ಟಿ.ಬಿ. ಜಯಚಂದ್ರ ಅವರು ಕಳ್ಳಂಬೆಳ್ಳ ಮತ್ತು ಶಿರಾದಿಂದ ಒಟ್ಟು 7 ಬಾರಿ ಶಾಸಕರಾಗಿದ್ದು, ಅವರು ರಾಜ್ಯದಲ್ಲಿ ಸಚಿವರಾಗಿ ಕೃಷಿ, ಸಂಸದೀಯ ವ್ಯವಹಾರ ಖಾತೆಗಳನ್ನ ನಿರ್ವಹಿಸಿದ್ಧಾರೆ. ವಿವಿಧ ನಿಗಮ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.
ಪ್ರಸ್ತುತ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸದನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಉಪಸಭಾಪತಿ ರುದ್ರಮಪ್ಪ ಲಮಾಣಿ ಅವರು ಸಾಕ್ಷಿಯಾದರು. ಸದನದಲ್ಲಿ ಉಪಸ್ಥಿತರಿದ್ದ ಸದನದ ಸರ್ವ ಸದಸ್ಯರು ಮೇಜುಕುಟ್ಟಿ ಅಭಿನಂದಿಸಿದರು.
ಕ್ರೀಡಾಪಟುಗಳಿಗೆ ನೀಡಲಾಗುವ ಸಹಾಯಧನ ಪರಿಷ್ಕರಣೆಗೆ ಕ್ರಮ
ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಾಯಧನ ಮೊತ್ತವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಮಂಗಳೂರು ನಗರ(ಉತ್ತರ) ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿದರು.
ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೇರವಾಗಿ ಸಹಾಯಧನ ನೀಡುವ ಯಾವುದೇ ಕಾರ್ಯಕ್ರಮವಿರುವುದಿಲ್ಲ. ಆದರೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ಪಡೆದ ರಾಜ್ಯ ಕ್ರೀಡಾ ಸಂಸ್ಥೆಗಳು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಿಗೆ ಕಳುಹಿಸುವ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ರಾಜ್ಯದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಈ ಸಂಸ್ಥೆಗಳ ಮುಖಾಂತರ 2ನೇ ದರ್ಜೆ ರೈಲು/ಬಸ್ ಪ್ರಯಾಣ ದರದ ಪ್ರಯಾಣಭತ್ಯೆ, 200 ರೂ. ದಿನಭತ್ಯೆ, 1000 ರೂ. ಗಳ ಕ್ರೀಡಾಗಂಟು, ಸ್ಥಳೀಯ ಪ್ರಯಾಣ ಶುಲ್ಕ ರೂ. 20 ನೀಡಲಾಗುತ್ತಿದ್ದು, ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಭಾಗವಹಿಸಿವವರಿಗೂ 200 ರೂ. ಸಹಾಯಧನ ನೀಡಲಾಗುತ್ತಿದೆ.
ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಮಾನ್ಯತೆ ಪಡೆದ ರಾಷ್ಟಿçÃಯ ಕ್ರೀಡಾ ಫೆಡರೇಷನ್‌ಗಳಿಗೆ ಭಾರತ ಸರ್ಕಾರ ಅನುದಾನ ಒದಗಿಸುತ್ತಿದೆ. ಮಾನ್ಯತೆ ಪಡೆದ ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ಗರಿಷ್ಟ 5000 ರೂ. ಮಿತಿಗೆ ಒಳಪಟ್ಟು ಶೈಕ್ಷಣಿಕ ಶುಲ್ಕ ಮರುಪಾವತಿ ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಹಾಗೂ ಹೆಚ್ಚುವರಿಯಾಗಿ ಇಲಾಖೆಯ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿ/ತರಬೇತುದಾರರಿಗೆ ವಿಶೇಷ ನಗದು ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಉತ್ತರ ನೀಡಿದರು.
ಕ್ರೀಡಾಪಟುಗಳಿಗೆ ಉತ್ತಮ ಪ್ರಯಾಣ ಭತ್ಯೆ ಸೇರಿದಂತೆ ಸಹಾಯಧನ ಹೆಚ್ಚಿಸಿದಲ್ಲಿ ನಮ್ಮ ರಾಜ್ಯದ ಮಕ್ಕಳು ಕ್ರೀಡೆಯಲ್ಲಿ ಇನ್ನಷ್ಟು ಸಾಧನೆ ಮಾಡಿ ಹೆಚ್ಚು ಹೆಚ್ಚು ಪದಕ ಗಳಿಸಲು ಸಾಧ್ಯವಾಗಲಿದೆ ಎಂದು ಶಾಸಕ ಭರತ್ ಶೆಟ್ಟಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಭತ್ಯೆ ಹಾಗೂ ಸಹಾಯಧನ ಐದು ವರ್ಷಗಳ ಹಿಂದೆ ನಿಗದಿ ಮಾಡಿದ್ದು, ಈವರೆಗೆ ಪರಿಷ್ಕರಣೆಗೊಂಡಿಲ್ಲ ಹೀಗಾಗಿ ಈ ಬಾರಿ ಕ್ರೀಡಾಪಟುಗಳ ಭತ್ಯೆ ಹಾಗೂ ಸಹಾಯಧನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications