ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್‌ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು
ನವದೆಹಲಿ: ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ಸಂಪುಟ ಪುನರ್‌ರಚನೆಯ ಕೂಗು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದೆಹಲಿಯಲ್ಲಿರುವ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರು, ಸಂಪುಟ ಪುನರ್‌ರಚನೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಹಿರಿಯ ಶಾಸಕರ ಪರವಾಗಿ ದನಿ ಎತ್ತುವುದಾಗಿ ತಿಳಿಸಿದ್ದಾರೆ.
ಸಂಪುಟ ಪುನರ್‌ರಚನೆಯ ಬೇಡಿಕೆಯ ಕುರಿತು ಮಾತನಾಡಿದ ಜಯಚಂದ್ರ, "ನಾನು ರಾಜ್ಯದ ಪ್ರತಿನಿಧಿಯಾಗಿ ದೆಹಲಿಯಲ್ಲಿದ್ದೇನೆ. ಅನೇಕ ಶಾಸಕರು ದೆಹಲಿಗೆ ಆಗಮಿಸುತ್ತಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೈಕಮಾಂಡ್ ಅನ್ನು ಭೇಟಿ ಮಾಡಿ ಸಂಪುಟ ಪುನರ್‌ರಚನೆಯ ಬಗ್ಗೆ ಮನವರಿಕೆ ಮಾಡಿಕೊಡಲಿದ್ದೇವೆ. ಇದು ಅನೇಕ ಹಿರಿಯ ಶಾಸಕರ ಬಹುದಿನಗಳ ಬೇಡಿಕೆಯಾಗಿದೆ. ಸರ್ಕಾರಕ್ಕೆ ಐದು ವರ್ಷಗಳ ಅಧಿಕಾರವಧಿಯ ಪೈಕಿ ಈಗಾಗಲೇ ಮೂರು ವರ್ಷಗಳು ಕಳೆದಿವೆ. ಇನ್ನು ಕೇವಲ ಎರಡು ವರ್ಷಗಳಷ್ಟೇ ಬಾಕಿ ಇರುವುದರಿಂದ, ಈಗ ಬದಲಾವಣೆ ಮಾಡುವುದು ಅನಿವಾರ್ಯ ಎಂದಿದ್ದಾರೆ.

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ
ಇದೇ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ (ಮುಖ್ಯಮಂತ್ರಿ ಬದಲಾವಣೆ) ಕುರಿತು ಕೇಳಲಾದ ಪ್ರಶ್ನೆಗೆ ಜಯಚಂದ್ರ ಅವರು ಸ್ಪಷ್ಟನೆ ನೀಡಿದರು. ನಮ್ಮ ಮುಂದೆ ನಾಯಕತ್ವ ಬದಲಾವಣೆಯ ಯಾವುದೇ ವಿಷಯವಿಲ್ಲ. ಅದು ಹೈಕಮಾಂಡ್, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ರಾಹುಲ್ ಗಾಂಧಿ ಅವರ ನಡುವಿನ ವಿಚಾರ. ಆ ಚರ್ಚೆ ನಾಲ್ಕು ಗೋಡೆಗಳ ಮಧ್ಯೆ ನಡೆಯುತ್ತದೆ. ನಮ್ಮ ಉದ್ದೇಶ ಕೇವಲ ಸಂಪುಟ ಪುನರ್‌ರಚನೆಗೆ ವರಿಷ್ಠರಲ್ಲಿ ವಿನಂತಿಸುವುದು ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.
ಹಿರಿಯ ಶಾಸಕರ ಮನವಿಗೆ ಬಲ
ಸರ್ಕಾರದಲ್ಲಿ ಹೊಸ ಮುಖಗಳಿಗೆ ಅಥವಾ ಹಿರಿಯ ಶಾಸಕರಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದೆ. ಜಯಚಂದ್ರ ಅವರ ಈ ದೆಹಲಿ ಭೇಟಿಯು, ಸಂಪುಟದಲ್ಲಿ ಸ್ಥಾನ ಸಿಗದ ಅತೃಪ್ತ ಅಥವಾ ಆಕಾಂಕ್ಷಿ ಶಾಸಕರ ನಿಯೋಗಕ್ಕೆ ಬಲ ತುಂಬಿದಂತಾಗಿದೆ. ಹೈಕಮಾಂಡ್ ಈ ಮನವಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಯಲ್ಲಿ ಬೀಡುಬಿಟ್ಟ 30 ಶಾಸಕರು
ಸಂಪುಟ ಪುನರ್‌ರಚನೆಗೆ ಒತ್ತಾಯಿಸಿ ಸುಮಾರು 30ಕ್ಕೂ ಹೆಚ್ಚು ಶಾಸಕರು ಸದ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ಪಕ್ಷದ ವರಿಷ್ಠರಿಗೆ ಅವರು ನೀಡಿದ್ದ ಹಳೆಯ ಭರವಸೆಯನ್ನು ನೆನಪಿಸಿದ್ದಾರೆ. ಶಾಸಕರ ದೆಹಲಿ ಭೇಟಿಯ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅಶೋಕ್ ಪಟ್ಟಣ್,"ನಾವಿಲ್ಲಿ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರ ಬಣಗಳಾಗಿ ಬಂದಿಲ್ಲ. ಸುಮಾರು 30 ಶಾಸಕರು ಒಟ್ಟಾಗಿ ಬಂದಿದ್ದೇವೆ. ನಮ್ಮೆಲ್ಲರ ಬೇಡಿಕೆ ಇರುವುದು ಕೇವಲ ಸಂಪುಟ ಪುನರ್‌ರಚನೆಯ ಬಗ್ಗೆ ಮಾತ್ರ. ಇಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ" ಎಂದಿದ್ದಾರೆ.
ಸಂಪುಟ ರಚನೆಯ ಸಂದರ್ಭದಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಭರವಸೆಯನ್ನು ಪಟ್ಟಣ್ ನೆನಪಿಸಿದರು. ಸಚಿವರನ್ನು ನೇಮಕ ಮಾಡುವಾಗ ಸುರ್ಜೇವಾಲಾ ಅವರು ಎಲ್ಲರಿಗೂ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಈಗಲೂ ಅದೇ ವ್ಯಕ್ತಿಗಳು ನಾಲ್ಕನೇ ಬಾರಿಗೆ ಅದೇ ಸಚಿವ ಸ್ಥಾನಗಳಲ್ಲಿ ಮುಂದುವರಿಯುತ್ತಿದ್ದಾರೆ. ಹೈಕಮಾಂಡ್‌ಗೆ ಆ ಮಾತನ್ನು ನೆನಪಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕರು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಖಂಡಿತವಾಗಿಯೂ ನಮಗೆ ಅಸಮಾಧಾನವಿದೆ. ಆದರೆ ನಾವು ಯಾರನ್ನೂ ಬ್ಲ್ಯಾಕ್‌ಮೇಲ್ ಮಾಡುತ್ತಿಲ್ಲ. ನಮಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಿ ಎಂದು ಕೇಳುತ್ತಿದ್ದೇವೆ ಅಷ್ಟೆ. ಎಲ್ಲರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂಬುದು ನಮ್ಮ ನ್ಯಾಯಯುತ ಬೇಡಿಕೆ ಎಂದಿದ್ದಾರೆ.
ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳಾಗಿರುವುದರಿಂದ ಹಳೆಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅಥವಾ ಹಿರಿಯ ಆಕಾಂಕ್ಷಿಗಳಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಈಗ ದೆಹಲಿ ಅಂಗಳದಲ್ಲಿದೆ. 30 ಶಾಸಕರ ಗುಂಪು ಹೈಕಮಾಂಡ್ ಭೇಟಿಯಾಗಿ ಯಾವ ರೀತಿಯ ತೀರ್ಮಾನ ಹೊರಬೀಳಲಿದೆ ಎಂಬುದು ಈಗ ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
Peenya Flyover: ಏಪ್ರಿಲ್ 13ರಿಂದ ಪೀಣ್ಯ ಫ್ಲೈಓವರ್ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್‌ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Tamilnadu Election 2026: ಮಹಿಳೆಯರಿಗೆ 2 ಸಾವಿರ: ತಮಿಳುನಾಡಿನ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications