ಗ್ರಾಮೀಣ ವಿದ್ಯಾರ್ಥಿಗಳಿಗೆ ಟಿಸಿಎಸ್ ಐಟಿ ಕ್ವಿಜ್
ಬೆಂಗಳೂರು, ಸೆಪ್ಟಂಬರ್ 02: ಮಾಹಿತಿ ತಂತ್ರಜ್ಞಾನ ಸೇವೆ, ಕನ್ಸಲ್ಟಿಂಗ್, ಕಂಪನಿಗಳಿಗೆ ಪರಿಹಾರಗಳನ್ನು ಪೂರೈಕೆ ಮಾಡುವ ಪ್ರಮುಖ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಗ್ರಾಮೀಣ ಶಾಲಾ ಮಕ್ಕಳಿಗೆ ಗ್ರಾಮೀಣ ಐಟಿ ಕ್ವಿಜ್ ಆಯೋಜಿಸಿದೆ
ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ದೇಶದ 6 ರಾಜ್ಯಗಳ 8 ರಿಂದ 12 ವರ್ಷ ವಯೋಮಾನದ ಗ್ರಾಮೀಣ ಶಾಲಾ ಮಕ್ಕಳಿಗೆ ಗ್ರಾಮೀಣ ಐಟಿ ಕ್ವಿಜ್ ಆಯೋಜಿಸಲಾಗಿದೆ.
ರೂರಲ್ ಐಟಿ ಕ್ವಿಜ್ ಉದ್ದೇಶ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಅವರಲ್ಲಿ ಈ ಕ್ಷೇತ್ರದ ಪ್ರಾಮುಖ್ಯತೆ ಏನು? ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿಯ ಕುರಿತು ಮನವರಿಕೆ ಮಾಡಿಕೊಡುವುದು. [ಟಿಸಿಎಸ್ ಐಟಿ ಕ್ವಿಜ್ ಗೆದ್ದ ಪ್ರೆಸಿಡೆನ್ಸಿ ಶಾಲೆ ವಿದ್ಯಾರ್ಥಿಗಳು]
ಯಾವ ಯಾವ ರಾಜ್ಯಗಳಲ್ಲಿ :ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಈ ಐಟಿ ಕ್ವಿಜ್ ನಡೆಯಲಿದೆ. ಸೆಪ್ಟಂಬರ್ ಮತ್ತು ನವೆಂಬರ್ ನಡುವೆ ಈ ರಾಜ್ಯಗಳಲ್ಲಿ ಪ್ರಾದೇಶಿಕ ಹಂತದ ಕ್ವಿಜ್ ನಡೆಯಲಿದೆ.

ಕರ್ನಾಟಕದಲ್ಲಿ ಸೆಪ್ಟಂಬರ್ 14 ರಂದು ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದ್ದು, ಸೆಪ್ಟಂಬರ್ 24 ರಂದು ಜಿಲ್ಲಾ ಮಟ್ಟದ ಸ್ಪರ್ಧೆ ಇರಲಿದೆ. 3 ವಲಯವಾರು ಸ್ಪರ್ಧೆಗಳು ಇರಲಿದ್ದು, ಧಾರವಾಡ ವಲಯದಲ್ಲಿ ಅಕ್ಟೋಬರ್ 18, ಮೈಸೂರು ವಲಯದÀಲ್ಲಿ ಅಕ್ಟೋಬರ್ 20 ಮತ್ತು ತುಮಕೂರಿನಲ್ಲಿ ರಾಜ್ಯಮಟ್ಟದ ಫೈನಲ್ ಅಕ್ಟೋಬರ್ 22 ರಂದು ನಡೆಯಲಿದೆ.
ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವೆಂಬರ್ 28 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಬೆಂಗಳೂರು ಐಟಿ.ಬಿಜ್ ಸಂದರ್ಭದಲ್ಲಿ ಗ್ರಾಮೀಣ ಐಟಿ ಕ್ವಿಜ್‍ನ ರಾಷ್ಟ್ರೀಯ ಫೈನಲ್ ನಡೆಯಲಿದೆ.
ಯಾವುದೇ ಪ್ರವೇಶ ಶುಲ್ಕ ಇಲ್ಲ:ಈ ಕ್ವಿಜ್ ನಲ್ಲಿ ಪಾಲ್ಗೊಳ್ಳಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. 8 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳು ಈ ಕ್ವಿಜ್ ನಲ್ಲಿ ಪಾಲ್ಗೊಳ್ಳಬಹುದಾಗಿದೆ. ಆದರೆ, ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ನಗರ ಪ್ರದೇಶಗಳು ಮತ್ತು ಪಾಲಿಕೆಗಳ ವ್ಯಾಪ್ತಿಯ ವಿದ್ಯಾರ್ಥಿಗಳು ಈ ಕ್ವಿಜ್‍ನಲ್ಲಿ ಪಾಲ್ಗೊಳ್ಳುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ www.bangaloreitbt.in ಸಂಪರ್ಕಿಸಬಹುದು.
ಪ್ರಾದೇಶಿಕ ವಲಯದಲ್ಲಿ ವಿಜೇತರಾದವರಿಗೆ 10,000 ರೂಪಾಯಿ ಮತ್ತು ರನ್ನರ್ ಅಪ್ ಗಳಿಗೆ 7,000 ರೂಪಾಯಿಗಳ ಶೈಕ್ಷಣಿಕ ವೇತನ ಸಿಗಲಿದೆ. ರಾಷ್ಟ್ರೀಯ ಮಟ್ಟದಲ್ಲಿ ಗೆದ್ದವರಿಗೆ 1,00,000 ರೂಪಾಯಿ ಮತ್ತು ರನ್ನರ್ ಅಪ್ ಗೆ 50,000 ರೂಪಾಯಿ ನಗದು ಬಹುಮಾನವನ್ನು ಟಿಸಿಎಸ್ ನೀಡಲಿದ್ದು, ಇದರೊಂದಿಗೆ ಇನ್ನೂ ಕೆಲವು ಆಕರ್ಷಕ ಬಹುಮಾನಗಳನ್ನು ವಿತರಿಸಲಿದೆ.
ಕ್ವಿಜ್ ನ ವಿಷಯ: ತಂತ್ರಜ್ಞಾನ ವಾತಾವರಣ, ವ್ಯವಹಾರ, ತಂತ್ರಜ್ಞಾನ ಕ್ಷೇತ್ರದ ತಜ್ಞರು, ಈ ಕ್ಷೇತ್ರದಲ್ಲಿನ ಟ್ರೆಂಡ್ ಗಳು, ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಅಳವಡಿಕೆ ಸೇರಿದಂತೆ ಒಟ್ಟಾರೆ ತಂತ್ರಜ್ಞಾನದ ಬೆಳವಣಿಗೆ, ಅಭಿವೃದ್ಧಿ ಮೇಲೆ ಬೆಳಕು ಚೆಲ್ಲುತ್ತದೆ ಈ ಗ್ರಾಮೀಣ ಐಟಿ ಕ್ವಿಜ್. ಇಂಟರ್ನೆಟ್ ಜಗತ್ತು, ವಿನೂತನವಾದ ವೆಬ್‍ಸೈಟ್ ಗಳು, ಐಟಿ ಬಜ್ ವರ್ಡ್ಸ್, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವ್ಯಕ್ತಿಗಳು, ದೂರ ಸಂಪರ್ಕ ಕಂಪನಿಗಳು, ಸಾಫ್ಟ್‍ವೇರ್ ಉತ್ಪನ್ನಗಳು ಮತ್ತು ಮಾಹಿತಿ ತಂತ್ರಜ್ಞಾನದ ಇತಿಹಾಸದ ಕುರಿತು ಕ್ವಿಜ್ ನಲ್ಲಿ ಪ್ರಶ್ನಾವಳಿಗಳಿರುತ್ತವೆ.
ಶಿಕ್ಷಣ, ಮನೋರಂಜನೆ, ಪುಸ್ತಕ, ಮಲ್ಟಿಮೀಡಿಯಾ, ಸಂಗೀತ, ಸಿನೆಮಾ, ಇಂಟರ್ನೆಟ್, ಬ್ಯಾಂಕಿಂಗ್, ಜಾಹೀರಾತು, ಕ್ರೀಡೆ, ಗೇಮಿಂಗ್, ಸಾಮಾಜಿಕ ಜಾಲ ಮತ್ತು ಮೊಬೈಲ್ ಕ್ಷೇತ್ರದಲ್ಲಿ ಐಟಿಯ ಬಳಕೆ ಕುರಿತಾದ ವಿಚಾರಗಳೂ ಕ್ವಿಜ್ ನಲ್ಲಿ ಅಡಕವಾಗಿರುತ್ತವೆ. ವಿದ್ಯಾರ್ಥಿಗಳು ಐಟಿ ಕಂಪನಿಗಳ ಬಗ್ಗೆ ವೆಬ್‍ಸೈಟ್ ನಲ್ಲಿ ತಿಳಿದುಕೊಳ್ಳಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications