ಅ.4 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು, ಆ. 17: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅಕ್ಟೋಬರ್ 4ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
Recommended Video
Lakshmi Hebbalkar ಪುತ್ರನ ನಿಶ್ಚಿತಾರ್ಥಕ್ಕೆ ಎಲ್ಲಾ ಪಕ್ಷದವರಿಗೂ ಆಮಂತ್ರಣ | Oneindia Kannada
ಕೊರೋನಾ ಸಾಂಕ್ರಾಮಿಕ ಪ್ರಸರಣದ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತದೆ. ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಹಿಂದೆ ಜು. 12ಕ್ಕೆ ನಿಗದಿಯಾಗಿದ್ದ ಟಿಇಟಿ ಪರೀಕ್ಷೆಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೊಸ ದಿನಾಂಕವನ್ನು ಪ್ರಕಟಿಸಿದ್ದಾರೆ. ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.












Click it and Unblock the Notifications