Teacher Recruitment: ರಾಜ್ಯದಲ್ಲಿ 10,000ಕ್ಕೂ ಅಧಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Teacher Recruitment: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಲಿರುತ್ತದೆ. ಇದೀಗ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಶಿಚಮೊಗ್ಗದಲ್ಲಿ ಜನವರಿ 26ರ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವರು, ಮುಂದಿನ ಶೈಕ್ಷಣಿಕ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಹೇಳಿದರು.

ಶಿಕ್ಷಕರ ನೇಮಕಾತಿ: ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಮಧು ಬಂಗಾರಪ್ಪ ಅವರು ಹೇಳಿದರು.
160 ಕೋಟಿ ರೂಪಾಯಿ ಅನುದಾನ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಯೋಜನೆಗಳಿಗೆ ಸರ್ಕಾರವು 160 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದೆ ಎಂದು ಹೇಳಿದರು.
ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗೂಡವಿ ಪಕ್ಷಿಧಾಮವನ್ನು 'ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್' ಯೋಜನೆಯಡಿ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲಾಗುವುದು. ಜೊತೆಗೆ, ಶ್ರೀ ಚಂದ್ರಗುಟ್ಟಿ ರೇಣುಕಾಂಬಾದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಯಾತ್ರಾಕೇಂದ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ಅವರು ಹೇಳಿದರು.
ಕೆಪಿಎಸ್ ಶಾಲೆಗಳಿಗೆ ಶಿಕ್ಷಕ ನೇಮಕಾತಿ: ಕೆಪಿಎಸ್ ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (ಕೆಪಿಎಸ್) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಮಹತ್ವದ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. 1995ರಿಂದ ಹತ್ತು ವರ್ಷಗಳ ಕಾಲ ಅನುದಾನ ಇಲ್ಲದೆ, ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿ ಆಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.












Click it and Unblock the Notifications