Teacher Recruitment: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಅಪ್ಡೇಟ್ ಕೊಟ್ಟ ಸಚಿವ ಮಧು ಬಂಗಾರಪ್ಪ
Teacher Recruitment: ರಾಜ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಅನುಕೂಲವಾಗುವಂತಹ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುತ್ತದೆ. ಹಾಗೆಯೇ ಇದೀಗ ಕೆಪಿಎಸ್ ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (ಕೆಪಿಎಸ್) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆ: ಈ ಮಹತ್ವದ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. 1995ರಿಂದ ಹತ್ತು ವರ್ಷಗಳ ಕಾಲ ಅನುದಾನ ಇಲ್ಲದೆ, ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿ ಆಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.
ಪೂರ್ವಸಭೆಯಲ್ಲಿನ ನಿರ್ಧಾರಗಳ ವಿವರ: ಕರ್ನಾಟಕ ಬಜೆಟ್-2026 ಅನ್ನು ಮಂಡಿಸುವ ಮುನ್ನ ಸರ್ಕಾರ ನಡೆಸುವ ಪೂರ್ವಸಭೆಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿ, ಜನಕಲ್ಯಾಣ ಯೋಜನೆಗಳ ಪರಿಣಾಮ ಹಾಗೂ ಮುಂದಿನ ಹಣಕಾಸು ವರ್ಷದ ಆದ್ಯತೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ಸಮಗ್ರ ಚರ್ಚೆ: ಈ ಸಭೆಯಲ್ಲಿ ಮುಖ್ಯಮಂತ್ರಿ, ಹಣಕಾಸು ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಚಿವರು ಭಾಗವಹಿಸಿ, ಬಜೆಟ್‌ನ ನೀತಿ ರೂಪುರೇಷೆಯನ್ನು ಅಂತಿಮಗೊಳಿಸಲಿದ್ದಾರೆ. ರಾಜ್ಯದ ಆದಾಯ-ವೆಚ್ಚ ಸಮತೋಲನ, ಸಾಲದ ಸ್ಥಿತಿ ಮತ್ತು ಕೇಂದ್ರದಿಂದ ದೊರೆಯುವ ಅನುದಾನಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.
ಜನಕಲ್ಯಾಣದ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಹಾಗೂ ಅವುಗಳ ಹಣಕಾಸು ನಿರ್ವಹಣೆ ಪ್ರಮುಖ ಅಂಶವಾಗಿರಲಿದೆ. ಮಹಿಳೆಯರು, ರೈತರು, ಯುವಕರು ಮತ್ತು ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಕೃಷಿ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳು, ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ ಹಾಗೂ ರೈತರಿಗೆ ತಂತ್ರಜ್ಞಾನ ಆಧಾರಿತ ನೆರವು ನೀಡುವ ಕುರಿತು ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಗ್ರಾಮೀಣ ಅಭಿವೃದ್ಧಿ, ಕುಡಿಯುವ ನೀರು, ರಸ್ತೆ ಹಾಗೂ ಮೂಲಸೌಕರ್ಯಗಳ ಬಲವರ್ಧನೆಗೂ ಆದ್ಯತೆ ನೀಡುವ ಸಾಧ್ಯತೆಯಿದೆ.
ಬೆಂಗಳೂರು ಯೋಜನೆಗಳ ಬಗ್ಗೆ ಚರ್ಚೆ: ನಗರ ಪ್ರದೇಶಗಳ ದೃಷ್ಟಿಯಿಂದ ಬೆಂಗಳೂರಿನ ಸಂಚಾರ ಸಮಸ್ಯೆ, ಮೆಟ್ರೋ ವಿಸ್ತರಣೆ, ಬಿಬಿಎಂಪಿ ಆರ್ಥಿಕ ಸ್ಥಿರತೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಅಲ್ಲದೆ, ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲು ಹೊಸ ಹೂಡಿಕೆ ನೀತಿ, ಸ್ಟಾರ್ಟ್‌ಅಪ್‌ಗಳಿಗೆ ಪ್ರೋತ್ಸಾಹ ಮತ್ತು ಐಟಿ-ಬಿಟಿ ಕ್ಷೇತ್ರದ ವಿಸ್ತರಣೆಗೆ ಸಂಬಂಧಿಸಿದ ನಿರ್ಧಾರಗಳು ಬಜೆಟ್‌ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.
ಜೊತೆಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ವೃದ್ಧಿ, ಸರ್ಕಾರಿ ಶಾಲೆ-ಆಸ್ಪತ್ರೆಗಳ ಗುಣಮಟ್ಟ ಸುಧಾರಣೆ ಕುರಿತು ತೀರ್ಮಾನಗಳನ್ನು ಪೂರ್ವಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆಯಿದೆ. ಒಟ್ಟಾರೆ, ಕರ್ನಾಟಕ ಬಜೆಟ್ 2026 ಪೂರ್ವಸಭೆ ರಾಜ್ಯದ ಆರ್ಥಿಕ ಶಿಸ್ತು ಕಾಪಾಡುತ್ತಾ ಜನಮುಖಿ ಹಾಗೂ ಅಭಿವೃದ್ಧಿ ಆಧಾರಿತ ಬಜೆಟ್ ರೂಪಿಸಲು ಮಾರ್ಗದರ್ಶಿಯಾಗುವ ಮಹತ್ವದ ವೇದಿಕೆ ಆಗಲಿದೆ.
-
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications