Get Updates
Get notified of breaking news, exclusive insights, and must-see stories!

ಶಿಕ್ಷಕರ ನೇಮಕ: ಕೆಲವು ಅಭ್ಯರ್ಥಿಗಳಿಗೆ ಕೆಎಟಿಯಲ್ಲಿ ಹಿನ್ನಡೆ

ಬೆಂಗಳೂರು, ಡಿಸೆಂಬರ್ 03: ಸುಮಾರು 13 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕ ಸಂಬಂಧ ಹೈಕೋರ್ಟ್‌ ನಿರ್ದೇಶನದಂತೆ ಕೆಎಟಿ ಮೊರೆ ಹೋಗಿದ್ದ ಕೆಲವು ಅಭ್ಯರ್ಥಿಗಳಿಗೆ ಹಿನ್ನಡೆಯಾಗಿದೆ. ತಮ್ಮ ತಂದೆಯ ಆದಾಯ ಪ್ರಮಾಣಪತ್ರ ಪರಿಗಣಿಸಬೇಕೆಂದು ಕೋರಿ ಬೆಂಗಳೂರಿನ ಎಎಂಎಸ್‌ ಬಡಾವಣೆಯ ಎಂ. ನಳಿನ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ತಿರಸ್ಕರಿಸಿದೆ.

ಎಂ. ನಳಿನ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯ ನಾರಾಯಣ ಮತ್ತು ಆಡಳಿತ ಸದಸ್ಯ ಎನ್‌. ಸಿವಶೈಲಂ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅವರು ಮತ್ತೆ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆಗಳಿವೆ.

Teachers Appointment Set Back For Few Candidates In KAT

ಆಧಾರವೇ ಇಲ್ಲ: ಪೋಷಕರು ಅಥವಾ ಪತಿಯ ಆದಾಯ ಪ್ರಮಾಣಪತ್ರ ಪರಿಗಣಿಸುವ ಕುರಿತಂತೆ ಸುಪ್ರೀಂಕೋರ್ಟ್‌ ಬಡೆಂಗಾ ತಾಲೂಕುದಾರ್‌ ಮತ್ತು ಟಾಟಾ ಕೆಮಿಕಲ್ಸ್‌ ನಡುವಿನ ಪ್ರಕರಣದಲ್ಲಿ ನೀಡಿರುವ ತೀರ್ಪು ಈ ಪ್ರಕರಣಕ್ಕೆ ಅನ್ವಯವಾಗುತ್ತದೆ. ಅದರಂತೆ ಅರ್ಜಿದಾರರು ತಮ್ಮ ಮನವಿಗಳನ್ನು ಮಾನ್ಯ ಮಾಡಲು ಯಾವುದೇ ಅಗತ್ಯ ಕಾನೂನಾತ್ಮಕ ದಾಖಲೆಗಳನ್ನು ಅಥವಾ ಆಧಾರಗಳನ್ನು ಒದಗಿಸಿಲ್ಲಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಮದುವೆಯಾದವರು ತಮ್ಮ ಪತಿಯ ಜತೆ ಬೇರೆ ಕುಟುಂಬದಲ್ಲಿ ವಾಸಿಸುತ್ತಾರೆಯೇ ಹೊರತು ಪೋಷಕರ ಜತೆ ವಾಸಿಸುವುದಿಲ್ಲ. ಹಾಗಾಗಿ ಅಭ್ಯರ್ಥಿಗಳ ಮನವಿ ಪುರಸ್ಕರಿಸಲಾಗದು ಎಂದು ಕೆಎಟಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ನಿಯಮದಂತೆ ತಂದೆಯ ಆದಾಯ ಪ್ರಮಾಣಪತ್ರವನ್ನು ಮಾತ್ರ ಪರಿಗಣಿಸಬೇಕೇ ಹೊರತು ಪತಿಯ ಆದಾಯವನ್ನಲ್ಲ. ಸುಪ್ರೀಂಕೋರ್ಟ್‌ ಕೂಡ ಎಲ್ಲಾಅಂಶಗಳನ್ನು ಪರಿಗಣಿಸಿ ಸುರೇಂದ್ರಸಿಂಗ್‌ ವರ್ಸಸ್‌ ಪಂಜಾಬ್‌ ಎಲೆಕ್ಟ್ರಿಕ್‌ಸಿಟಿ ಬೋರ್ಡ್‌ ಅಂಡ್‌ ಅದರ್ಸ್‌ ಪ್ರಕರಣದಲ್ಲಿ ಪೋಷಕರ ಆದಾಯವನ್ನು ಮಾತ್ರ ಪರಿಗಣಿಸಬೇಕು ಎಂದು ಆದೇಶಿಸಿದೆ. ಆದರೆ ಇದಕ್ಕೆ ವಿರುದ್ಧವಾದ ನಿಲುವು ಕೈಗೊಂಡಿದೆ ಎಂದರು.

ಅಲ್ಲದೆ, ಹುಟ್ಟಿನಿಂದ ಜಾತಿ ನಿರ್ಧಾರವಾಗುತ್ತದೆ. ಒಂದು ಜಾತಿಯ ಅಭ್ಯರ್ಥಿ ಬೇರೊಂದು ಜಾತಿಯ ಅಭ್ಯರ್ಥಿ ಮದುವೆಯಾಗುವುದರಿಂದ ಅವರ ಜಾತಿ ಬದಲಾಗುವುದಿಲ್ಲ. ಆಗ ತಂದೆಯ ಆದಾಯವೇ ಪರಿಗಣಿಸ್ಪಡುತ್ತದೆಯೇ ಹೊರತು, ಪತಿಯ ಆದಾಯವಲ್ಲಎಂದು ಅವರು ವಿವರಿಸಿದರು. ಜತೆಗೆ ಕರ್ನಾಟಕ ಹೈಕೋರ್ಟ್‌ ಕೂಡ ಸ್ಟೇಟ್‌ ಆಫ್‌ ಕರ್ನಾಟಕ ವರ್ಸಸ್‌ ಯೋಗೇಶ್ವರಿ ಅಂಡ್‌ ಅದರ್ಸ್‌ ಪ್ರಕರಣದಲ್ಲಿ ಪೋಷಕರ ಆದಾಯ ಪ್ರಮಾಣಪತ್ರವನ್ನೇ ಪರಿಗಣಿಸಬೇಕೆಂದು ಆದೇಶಿಸಿದೆ. ಅದರಂತೆ ಈ ಪ್ರಕರಣದಲ್ಲೂಸಹ ಅರ್ಜಿದಾರರು ಸಲ್ಲಿಸಿರುವ ತಂದೆಯ ಆದಾಯ ಪ್ರಮಾಣಪತ್ರ ಪರಿಗಣಿಸಿ ಅವರ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಕೌನ್ಸೆಲಿಂಗ್‌ ನಲ್ಲಿಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಆದೇಶ ನೀಡಬೇಕೆಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ ನೆನಗುದಿಗೆಗೆ ಬಿದಿದ್ದ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಕಳೆದ ಅ.12. ಹಸಿರು ನಿಶಾನೆ ತೋರಿತ್ತು. ಇದರಿಂದಾಗಿ ಕಳೆದ ಒಂದೂವರೆ ವರ್ಷದಿಂದ ನೆನಗುದಿಗೆ ಬಿದ್ದಿದ್ದ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಇದ್ದ ತೊಡಕು ನಿವಾರಣೆಯಾಗಿದ್ದು, ಸರ್ಕಾರ ನೇಮಕ ಪತ್ರಗಳನ್ನು ವಿತರಿಸಬಹುದಾಗಿದೆ. ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠವು 2023ರ ಜ.20ರಂದು ಹೊರಡಿಸಿದ್ದ ತೀರ್ಪನ್ನು ರದ್ದುಪಡಿಸಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.

ರಾಜ್ಯಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಇದರಿಂದ ಶಿಕ್ಷಕರ ಕೊರತೆ ಉಂಟಾಗಿ, 6 ರಿಂದ 8 ತರಗತಿಗಳ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹುದ್ದೆಗಳ ಭರ್ತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅಗತ್ಯತೆ ಕಂಡುಬಂದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಗಣಿಸಿ, ರಾಜ್ಯ ಸರ್ಕಾರವು 2023ರ ಜೂ.8ರಂದು ಸಿದ್ಧಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಾರ 13,352 ಆಯ್ಕೆಯಾದ ಅಭ್ಯರ್ಥಿಗಳಿಂದ ಶಿಕ್ಷಕರನ್ನು ನೇಮಕ ಮಾಡುವುದನ್ನು ಮುಂದುವರಿಸಲು ಅನುಮತಿ ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಪತಿ ಮತ್ತು ಪೋಷಕರ ಆದಾಯ ಪ್ರಮಾಣಪತ್ರವನ್ನು ಮತ್ತು ಮೆರಿಟ್ ಕಮ್ ರೋಸ್ಟರ್ ಅನ್ನು ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಿ 2023ರ ಜೂ.6ರಂದು ಪ್ರಕಟಿಸಲಾಗಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಅದರಂತೆ ನೇಮಕಾತಿಗೆ ಸರ್ಕಾರ ಹೊರಡಿಸಿದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಬಹುದಾಗಿದೆ.

ಸರ್ಕಾರದ ಅಧಿಸೂಚನೆಯಂತೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣ ಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆ ಅರ್ಜಿ ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ ಎಂದು ಹೇಳಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+