Teachers: ಕರ್ನಾಟಕದ ಶಿಕ್ಷಕರಿಗೆ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್: ಇನ್ಮುಂದೆ ಈ ಜವಾಬ್ದಾರಿಗಳಿಂದ ರಿಲೀಫ್!

ಕರ್ನಾಟಕದ ಸರ್ಕಾರಿ ಶಿಕ್ಷಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಸರ್ಕಾರಿ ಶಿಕ್ಷಕರನ್ನು ಜನಗಣತಿ, ಜಾತಿ ಗಣತಿ, ಮನೆ ಮನೆ ಸರ್ವೇ ಇದೀಗ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸೇರಿದಂತೆ ಹಲವು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸರ್ವೇ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅನ್ಯಕಾರ್ಯಗಳಿಗೆ ಶಿಕ್ಷಕರ ಬಳಕೆ ತಡೆಗೆ ಮಸೂದೆ ಮಂಡನೆಗೆ ಮುಂದಾಗಿದೆ. ಈ ವಿಷಯದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಕಾರ್ಯ ವಿಳಂಬವಾಗುತ್ತಲೇ ಇದ್ದು, ಶಾಲೆಗಳಲ್ಲಿ ಸರಿಯಾಗಿ ಪಾಠ ನಡೆಯುತ್ತಿಲ್ಲ. ಹೀಗಾಗಿ ಶಿಕ್ಷಕರನ್ನು ಎಸ್‌ಐಆರ್‌ ಸೇರಿದಂತೆ ಇತರ ಸರ್ವೇ ಕಾರ್ಯಗಳಿಂದ ಹೊರಗಿಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಒತ್ತಾಯಿಸಿದ್ದಾರೆ.

Teachers Good News for Karnataka Govt Teachers New Bill Free Them from SIR Non Teaching Duties

ನಮ್ಮ ಶಿಕ್ಷಕರನ್ನು ಎಸ್‌ಐಆರ್‌ ಪ್ರಕ್ರಿಯೆಯಿಂದ ಹೊರಗಿಡಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆಯಾಗುತ್ತಿದೆ ಎಂದು ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಚುನಾವಣಾ ಆಯೋಗ ಮಾನವೀಯತೆ ಇಲ್ಲದಂತೆ ವರ್ತಿಸುತ್ತಿದೆ. ಎಸ್‌ಐಆರ್‌ ಕಾರ್ಯದ ಹೊರೆಯಿಂದಾಗಿ ಶಿಕ್ಷಕರು ಬಳಲಿದ್ದಾರೆ.

ಈ ಕಾರ್ಯ ವಿಳಂಬವಾಗುತ್ತಲೇ ಇದ್ದು, ಶಾಲೆಗಳಲ್ಲಿ ಸರಿಯಾಗಿ ಶೈಕ್ಷಣಿಕ ಚಟುವಟಿಕೆಗಳು ನಡೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳ ಫಲಿತಾಂಶದ ಮೇಲೂ ಪರಿಣಾಮ ಬೀರುವ ಆತಂಕವಿದೆ ಎಂದು ಸಚಿವರು ಹೇಳಿದರು. ಇದೇ ಕಾರಣಕ್ಕೆ ಜಾತಿ ಗಣತಿ, ವಿವಿಧ ಸಮೀಕ್ಷೆಗಳು ಹಾಗೂ ಆಡಳಿತಾತ್ಮಕ ಸರ್ವೇ ಕಾರ್ಯಗಳಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಬಳಸಿಕೊಳ್ಳದಂತೆ ಹೊಸ ಮಸೂದೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಿಕ್ಷಕರಿಗೆ ಪಾಠ ಬೋಧನೆಯೇ ಪ್ರಮುಖ ಜವಾಬ್ದಾರಿ

ಶಿಕ್ಷಕರು ನಮಗೆ ಬಹಳ ಸಹಕಾರಿಯಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮಕ್ಕಳಿಂದ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಪರಿಣಾಮಕಾರಿ ಬೋಧನೆಯೇ ಪ್ರಮುಖ ಕಾರಣ. ಆದರೆ ಜಾತಿ ಗಣತಿ, ವಿವಿಧ ಸರ್ವೇ ಸೇರಿದಂತೆ ಹಲವು ಕೆಲಸಗಳಿಗೆ ಶಿಕ್ಷಕರನ್ನೇ ಬಳಸಿಕೊಳ್ಳುವ ವ್ಯವಸ್ಥೆ ನಿರ್ಮಾಣವಾಗಿದೆ. ಇದನ್ನು ಬದಲಾಯಿಸಲೇಬೇಕಿದೆ. ಎಸ್‌ಐಆರ್‌ ಕರ್ತವ್ಯದಿಂದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಲಾ ಮಕ್ಕಳು ಮತ್ತು ಪೋಷಕರಿಂದ ದೂರುಗಳು ಬರುತ್ತಿವೆ. ಶಾಲೆಯಲ್ಲಿ ಶಿಕ್ಷಕರೇ ಇಲ್ಲ, ಮಧ್ಯಾಹ್ನದ ಊಟದ ಬಳಿಕ ಮಕ್ಕಳನ್ನು ಮನೆಗೆ ಕಳುಹಿಸಲಾಗುತ್ತಿದೆ ಎಂಬಂತಹ ದೂರುಗಳೂ ಬಂದಿವೆ. ಇಂತಹ ಪರಿಸ್ಥಿತಿ ಮುಂದುವರಿಯಬಾರದು ಎಂದಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ಕೂಡ ಈ ವಿಚಾರವನ್ನು ಹಲವು ಬಾರಿ ಪ್ರಸ್ತಾಪಿಸಿ, ಮೇಲ್ಮನೆಯಲ್ಲಿ ಶಿಕ್ಷಕರನ್ನು ಎಸ್‌ಐಆರ್‌ ಸೇರಿದಂತೆ ಇತರೆ ಕೆಲಸಗಳಿಂದ ಮುಕ್ತಗೊಳಿಸುವಂತೆ ಒತ್ತಡ ಹಾಕಿದ್ದಾರೆ. ನನ್ನನ್ನು ಭೇಟಿಯಾದ ಪೋಷಕರು, ಶಿಕ್ಷಕರು, ಶಾಸಕರು ಹಾಗೂ ಇತರ ಜನ ಪ್ರತಿನಿಧಿಗಳು ʻಇದು ಅನ್ಯಾಯ, ಶಿಕ್ಷಕರಿಗೆ ಪಾಠ ಮಾಡುವ ಕೆಲಸ ಮಾತ್ರ ಕೊಡಿʼ ಎನ್ನುತ್ತಿದ್ದಾರೆ. ಆದರೆ ನಾವು ಎಷ್ಟೇ ಮನವಿ ಮಾಡಿದರೂ ಚುನಾವಣಾ ಆಯೋಗ ಕೇಳಿಸಿಕೊಳ್ಳುತ್ತಿಲ್ಲ. ಮಾನವೀಯತೆ ಮರೆತು ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರಿಗಾಗಿ ಪ್ರತ್ಯೇಕ ವಿಧೇಯಕ

ಈ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನು ಮುಂದೆ ಈ ರೀತಿ ಆಗಬಾರದು. ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಶಿಕ್ಷಕರನ್ನು ಅನ್ಯ ಕೆಲಸಗಳಿಗೆ ಬಳಸಿಕೊಳ್ಳುವುದು ನಿಲ್ಲಬೇಕು. ಇದಕ್ಕಾಗಿ ಹೊಸ ವಿಧೇಯಕ ಸಿದ್ಧಪಡಿಸುತ್ತಿದ್ದೇನೆ. ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಧೇಯಕವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ಚರ್ಚಿಸಿದ್ದೇನೆ. ಸಚಿವ ಸಂಪುಟದ ಮುಂದೆ ತಂದು, ಮುಂದಿನ ದಿನಗಳಲ್ಲಿ ಅಧಿವೇಶನದಲ್ಲಿ ಬಿಲ್‌ ಜಾರಿಗೆ ತರುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಂಗಾರಪ್ಪ ಅವರು ಹೇಳಿದ್ದಾರೆ.

ಚುನಾವಣೆ ಕಾರ್ಯಕ್ಕೆ ಕೆಲವೊಮ್ಮೆ ಸರ್ಕಾರಿ ನೌಕರರನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಬಹುದು. ಆದರೆ ಶಾಲೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಶಿಕ್ಷಕರನ್ನು ನಿರಂತರವಾಗಿ ಎಸ್‌ಐಆರ್‌ನಂತಹ ಸರ್ವೇ ಕಾರ್ಯಗಳಿಗೆ ನಿಯೋಜಿಸುವುದರಿಂದ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಮಧ್ಯವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಪೂರ್ವಭಾವಿ ಪರೀಕ್ಷೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ಶಿಕ್ಷಕರು ಶಾಲೆಗಳಲ್ಲಿ ಲಭ್ಯವಿಲ್ಲದಿದ್ದರೆ ಮಕ್ಕಳು ಉತ್ತಮವಾಗಿ ಪರೀಕ್ಷೆ ಎದುರಿಸುವುದು ಹೇಗೆ ಎಂಬ ಆತಂಕವಿದೆ. ಎಸ್‌ಐಆರ್‌ ಕಾರ್ಯ ಇದೇ ರೀತಿ ಮುಂದುವರಿದರೆ ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಶೂ-ಸಾಕ್ಸ್‌ ಗುಣಮಟ್ಟ ಕಳಪೆ ಎಂಬುದು ಸುಳ್ಳು

ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಶೂ-ಸಾಕ್ಸ್‌ ಗುಣಮಟ್ಟ ಕಳಪೆ ಎಂಬುದು ಸುಳ್ಳು. ಆದರೆ ಸೈಜ್‌ನಲ್ಲಿ ವ್ಯತ್ಯಾಸವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವ ಎರಡು ದಿನಗಳ ಮುನ್ನವೇ ತಾವು ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ ಅವರು, ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ, ಶಾಲೆಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಯಾವ ಮಕ್ಕಳಿಗೆ ಸೈಜ್‌ ಸಮಸ್ಯೆ ಇದೆಯೋ ಅಂತಹ ಮಕ್ಕಳಿಗೆ ಬೇರೆ ಶೂ ಮತ್ತು ಸಾಕ್ಸ್‌ ವಿತರಿಸುವಂತೆ ಸೂಚಿಸಲಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+