Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಬಡ್ತಿ ಕುರಿತು ಗುಡ್‌ ನ್ಯೂಸ್‌

ಬೆಂಗಳೂರು, ಜನವರಿ 25: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಆಗಾಗ ಮಹತ್ವದ ಬದಲಾವಣೆಗಳನ್ನು ಮಾಡಲಾಗುತ್ತದೆ. ಇದೀಗ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, 4000 ಬೋಧಕರಿಗೆ ಬಡ್ತಿ ಸಿಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು 1-5 ನೇ ತರಗತಿಗೆ ಮಾತ್ರ ಪಾಠ ಮಾಡಬೇಕು. ಪದವೀಧರ ಶಿಕ್ಷಕರು 7ನೇ ತರಗತಿವರೆಗೆ ಪಾಠ ಮಾಡಬೇಕು ಎಂಬ ನಿಯಮ ತಂದಿದ್ದರಿಂದ ಸಮಸ್ಯೆಯಾಗಿ ಬಡ್ತಿ ವಿಚಾರಗಳಿಗೆ ತಡೆ ಆಗಿತ್ತು. ಶಿಕ್ಷಕರು ನ್ಯಾಯಾಲಯಕ್ಕೆ ಹೋಗಿದ್ದರು. 2017ರ ಹಿಂದೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರು 7ನೇ ತರಗತಿಯವರೆಗೆ ಪಾಠ ಮಾಡಬಹುದು ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Teachers Promotions Karnataka Education Department Announces Promotion for 4 000 Govt Teachers

ಬಡ್ತಿ ನೀಡಲು ತೀರ್ಮಾನ: ಸೇವಾ ಜೇಷ್ಠತೆಯ ಅನುಸಾರ ಒಂದು ಅನುಪಾತ ನಿರ್ದಿಷ್ಟಪಡಿಸಿ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಯವರೆಗೆ, ಪಿಯು ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಶಿಕ್ಷಕರಿಗೆ ಅನುಕೂಲ ಆಗುವ ರೀತಿ ಬಡ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ. ಹೀಗೆ ಶಿಕ್ಷಕರಿಗೆ ಅನುಕೂಲವಾಗುವಂತೆ ಸರ್ಕಾರ ಆಗಾಗ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ.

ಸದನ ಸಮಿತಿ ರಚನೆ: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆ ಸರಳೀಕರಣಗೊಳಿಸಲು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ನೀಡುವ ವರದಿ ಆಧರಿಸಿ ಸುಧಾರಣೆ ಕ್ರಮಗಳನ್ನು ತರಲಾಗುವುದು. ಶಿಕ್ಷಣ ಸಂಸ್ಥೆಯಲ್ಲಿ ಅನಗತ್ಯ ವಿಚಾರದಿಂದ ತೊಂದರೆ ಮಾಡಬಾರದು ಎನ್ನುವುದು ನಮ್ಮ ಉದ್ದೇಶ ಆಗಿದೆ ಎಂದು ಹೇಳಿದರು.

5,000 ವಿಶೇಷ ಶಿಕ್ಷಕರು ಮತ್ತು ಇತರೆ ವಿಷಯಗಳ ಒಂದಷ್ಟು ಶಿಕ್ಷಕರ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಶೈಕ್ಷಣಿಕ ವರ್ಷ ಆರಂಭದ ವೇಳೆಗೆ ನೇಮಕಾತಿ, ಬಡ್ತಿ ಪ್ರಕ್ರಿಯೆ, ಮಾನ್ಯತೆ ನವೀಕರಣ ಸೇರಿದಂತೆ ಯಾವುದೇ ಇತರೆ ಗೊಂದಲ ಇದ್ದರೂ ಸರಿಪಡಿಸಲು ಪ್ರಯತ್ನಿಸಲಾಗುವುದ ಎಂದು ಹೇಳಿದರು.

ಉಚಿತವಾಗಿ ಪಠ್ಯಪುಸ್ತಕ ವಿತರಣೆ: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು ಹಾಗೂ ಎಲ್‌ಕೆಜಿ, ಯುಕೆಇ ಮಕ್ಕಳಿಗೂ ಸರ್ಕಾರದಿಂದ ಉಚಿತವಾಗಿ ಪಠ್ಯಪುಸ್ತಕ ವಿತರಣೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈಗಾಗಲೇ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ ನೀಡಲಾಗುತ್ತಿದೆ. ಜೊತೆಗೆ ಬರುವ ಶೈಕ್ಷಣಿಕ ಸಾಲಿನಿಂದ ಉಚಿತವಾಗಿ ನೋಟ್‌ ಪುಸ್ತಕಗಳನ್ನೂ ನೀಡಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಅನುದಾನರಹಿತ ಖಾಸಗಿ ಕನ್ನಡ ಶಾಲೆಗಳನ್ನು ಸರ್ಕಾರದ ಅನುದಾನಕ್ಕೆ ಒಳಪಡಿಸುವ ಬಗ್ಗೆ ಚರ್ಚೆ ನಡೆದಿದೆ. ಎಷ್ಟು ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬಹುದು, ಇದರಿಂದ ಎಷ್ಟು ಆರ್ಥಿಕ ಹೊರೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಲಾಗಿದೆ. ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಮತ್ತೆ ಚರ್ಚೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಇದೇ ವೇಳೆ ಹೇಳಿದರು.

ಒಟ್ಟಿನಲ್ಲಿ ಹೇಳುವುದಾದಾದರೆ, ವಿದ್ಯಾರ್ಥಿಗಳು, ಶಿಕ್ಷಕರಿಗೆ ಅನುಕೂಲ ಆಗುವಂತೆ ಸರ್ಕಾರ ಆಗಾಗ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಡ್ತಿ ಕುರಿತು ಇದ್ದ ಗೊಂಲದಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+