ಶಿಕ್ಷಕರ ನೇಮಕಾತಿ ಶುರು, ಕರ್ನಾಟಕದಲ್ಲಿ ಅರ್ಜಿ ಹಾಕುವುದು ಹೇಗೆ ಗೊತ್ತಾ? Teachers Recruitment 2025
ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಆಗಬೇಕು, ಈ ಮೂಲಕ ಕರ್ನಾಟಕದಲ್ಲಿ ಹೊಸ ಶಿಕ್ಷಕರಿಗೆ ಕೆಲಸ ಸಿಗಬೇಕು ಅನ್ನೋ ಒತ್ತಾಯ ಕೂಡ ಕೇಳಿ ಬರುತ್ತಲೇ ಇತ್ತು. ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಒತ್ತಡ ಕೂಡ ಹೆಚ್ಚಾಗಿತ್ತು. ಅದರಲ್ಲೂ ಕಳೆದ ಹಲವು ವರ್ಷಗಳಿಂದ ಶಿಕ್ಷಕರ ನೇಮಕಾತಿ ಆಗಿಲ್ಲ, ಶಿಕ್ಷಕರ ನೇಮಕಾತಿ ಆಗಿಲ್ಲ... ಅಂತಾನೇ ಮಾತುಕತೆ ನಡೆಯುತ್ತಾ ಇತ್ತು. ಇಂತಹ ಸಮಯದಲ್ಲೇ, ಶಿಕ್ಷಕರ ನೇಮಕಾತಿ ಶುರು, ಕರ್ನಾಟಕದಲ್ಲಿ ಅರ್ಜಿ ಹಾಕುವುದು ಹೇಗೆ ಗೊತ್ತಾ?
ಹೌದು, ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಪಡೆಯಲು ಲಕ್ಷಾಂತರ ಯುವಕರು & ಯುವತಿಯರು ಕಾಯ್ತಾ ಇದ್ದಾರೆ. ಅದರಲ್ಲೂ ಶಿಕ್ಷಕರಾಗಿ ಕೆಲಸ ಮಾಡಲು ಸಾಕಷ್ಟು ಅಭ್ಯರ್ಥಿಗಳು ತಪಸ್ಸು ಮಾಡ್ತಾ ಇದ್ದಾರೆ. ಹೀಗೆ ಇದ್ದಾಗ ಸರ್ಕಾರ ಕೂಡ ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ ಮಾಡುವ ಬಗ್ಗೆ ಮಾತು ಕೊಟ್ಟಿತ್ತು. ಇಷ್ಟೆಲ್ಲದರ ನಡುವೆ ಇದೀಗ ಶಿಕ್ಷಕರ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಇದ್ದು, ವಿವರ ಪಡೆಯಲು ಮುಂದೆ ಓದಿ.

ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆ...
ಯೆಸ್, ಸರ್ಕಾರಿ ವೀಕ್ಷಣಾಲಯದಿಂದ ಇದೀಗ 2025-26ನೇ ಸಾಲಿಗೆ ಬೆಂಗಳೂರು ನಗರ ಸಂಸ್ಥೆಯಲ್ಲಿರುವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರಿಗೆ ದೈಹಿಕ ಶಿಕ್ಷಣ, ಎಜುಕೇಟರ್ ಮತ್ತು ಸಂಗೀತ / ಆರ್ಟ್ ಕ್ರಾಫ್ಟ್ ತರಬೇತಿ ನೀಡಲು ಅರ್ಹ ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ನು ಅಭ್ಯರ್ಥಿಗಳು ದೈಹಿಕ ಕಂ ಯೋಗ ಶಿಕ್ಷಕರ ಹುದ್ದೆಗೆ ಡಿಪ್ಲೋಮ್ ಇನ್ ದೈಹಿಕ ಶಿಕ್ಷಣ / CP.Ed ನಲ್ಲಿ ಉತ್ತೀರ್ಣ ಆಗಿರಬೇಕು ಎಂದು ತಿಳಿಸಲಾಗಿದೆ. ಎಜುಕೇಟರ್ ಹುದ್ದೆಗೆ D.Ed ನಲ್ಲಿ ತೇರ್ಗಡೆ ಹೊಂದಿರಬೇಕು ಎಂದು ತಿಳಿಸಲಾಗಿದೆ. ಸಂಗೀತ / ಆರ್ಟ್ ಕ್ರಾಫ್ಟ್ ಹುದ್ದೆಗೆ ಸಂಗೀತ ಕ್ಷೇತ್ರದಲ್ಲಿ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ ಇಲ್ಲಿದೆ
ಇನ್ನು ಈ ಹುದ್ದೆಗೆ ಅರ್ಜಿ ಹಾಕಲು ಇಚ್ಛಿಸುವ ಅಭ್ಯರ್ಥಿಗಳು, ಜುಲೈ 19 ಶನಿವಾರ ಸಂಜೆ 4 ಗಂಟೆ ಒಳಗೆ ಸ್ವವಿವರ ಒಳಗೊಂಡ ಅರ್ಜಿಯನ್ನ & ಅಗತ್ಯ ದಾಖಲಾತಿಗಳ ಜೊತೆಗೆ ತ್ರಿಪ್ರತಿಯಲ್ಲಿ ಸರ್ಕಾರಿ ವೀಕ್ಷಣಾಲಯ, ಬೆಂಗಳೂರು ನಗರ ಜಿಲ್ಲೆ, ಸಂತೆಬೀದಿ, ಸಿದ್ದಾರ್ಥ ಬಡಾವಣೆ, ಮಡಿವಾಳ, ಬೆಂಗಳೂರು-68 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಇನ್ನು ಈ ಕುರಿತು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆಯಾದ 080-2552 1342 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸರ್ಕಾರಿ ವೀಕ್ಷಣಾಲಯ ಅಧೀಕ್ಷಕರು ಈಗ ಪ್ರಕಟಣೆಯಲ್ಲಿ ತಿಳಿಸುವ ಮೂಲಕ ಮಾಹಿತಿ ನೀಡಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications