10,611 ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ಏಪ್ರಿಲ್ 26 : 10,611 ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕಾಲಾವಕಾಶವನ್ನು ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಏಪ್ರಿಲ್ 30ರ ತನಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಪ್ರಾಥಮಿಕ ಶಿಕ್ಷಣ ಇಲಾಖೆ 3ನೇ ಬಾರಿಗೆ ಅರ್ಜಿ ಸಲ್ಲಿಸಲು ಇದ್ದ ದಿನಾಂಕವನ್ನು ವಿಸ್ತರಣೆ ಮಾಡಿದೆ. ಏಪ್ರಿಲ್ 30ರ ತನಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.
ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ 10,611 ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿ ಆದೇಶದಲ್ಲಿ ಏಪ್ರಿಲ್ 10 ಕೊನೆಯ ದಿನ ಎಂದು ಹೇಳಿತ್ತು.

ನಂತರ ಕೊನೆಯ ದಿನಾಂಕವನ್ನು ಏಪ್ರಿಲ್ 18ರ ತನಕ ವಿಸ್ತರಣೆ ಮಾಡಲಾಗಿತ್ತು. ಬಳಿಕ ಲೋಕಸಭಾ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಅವಧಿಯನ್ನು ಏಪ್ರಿಲ್ 25ರ ತನಕ ವಿಸ್ತರಣೆ ಮಾಡಲಾಯಿತು. ಈಗ ಏಪ್ರಿಲ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಹೈದರಾಬಾದ್-ಕರ್ನಾಟಕ ಭಾಗದವರಿಗೆ ಮೀಸಲು ಪಡೆಯಲು ಆರ್‌ಡಿ (ರೆಸಿಡೆನ್ಸಿ ಡೊಮಿಸಿಲ್) ನಂಬರ್ ಕಡ್ಡಾಯಗೊಳಿಸಿರುವ ನಿಯಮವನ್ನು ಸಡಿಲಿಸಲಾಗಿತ್ತು.
ಆರ್‌ಡಿ ನಂಬರ್ ಇಲ್ಲದ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಈ ಬದಲಾವಣೆ ಬಳಿಕ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಮಾಡುವುದು ಅನಿವಾರ್ಯವಾಗಿತ್ತು.












Click it and Unblock the Notifications