ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10,611 ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 26 : 10,611 ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕಾಲಾವಕಾಶವನ್ನು ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಏಪ್ರಿಲ್ 30ರ ತನಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆ 3ನೇ ಬಾರಿಗೆ ಅರ್ಜಿ ಸಲ್ಲಿಸಲು ಇದ್ದ ದಿನಾಂಕವನ್ನು ವಿಸ್ತರಣೆ ಮಾಡಿದೆ. ಏಪ್ರಿಲ್ 30ರ ತನಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

10,611 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ10,611 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ 10,611 ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿ ಆದೇಶದಲ್ಲಿ ಏಪ್ರಿಲ್ 10 ಕೊನೆಯ ದಿನ ಎಂದು ಹೇಳಿತ್ತು.

NIOS ನೇಮಕಾತಿ 90 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನNIOS ನೇಮಕಾತಿ 90 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Teachers recruitment : Application submission date extended

ನಂತರ ಕೊನೆಯ ದಿನಾಂಕವನ್ನು ಏಪ್ರಿಲ್ 18ರ ತನಕ ವಿಸ್ತರಣೆ ಮಾಡಲಾಗಿತ್ತು. ಬಳಿಕ ಲೋಕಸಭಾ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಅವಧಿಯನ್ನು ಏಪ್ರಿಲ್ 25ರ ತನಕ ವಿಸ್ತರಣೆ ಮಾಡಲಾಯಿತು. ಈಗ ಏಪ್ರಿಲ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು

ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಹೈದರಾಬಾದ್-ಕರ್ನಾಟಕ ಭಾಗದವರಿಗೆ ಮೀಸಲು ಪಡೆಯಲು ಆರ್‌ಡಿ (ರೆಸಿಡೆನ್ಸಿ ಡೊಮಿಸಿಲ್) ನಂಬರ್ ಕಡ್ಡಾಯಗೊಳಿಸಿರುವ ನಿಯಮವನ್ನು ಸಡಿಲಿಸಲಾಗಿತ್ತು.

ಆರ್‌ಡಿ ನಂಬರ್‌ ಇಲ್ಲದ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಈ ಬದಲಾವಣೆ ಬಳಿಕ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಮಾಡುವುದು ಅನಿವಾರ್ಯವಾಗಿತ್ತು.

English summary
Karnataka primary education department extended the last date to submit application for the 10,611 teachers post. Candidates can apply online till April 30, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X