ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 18ರಿಂದ ಆರಂಭ
ಬೆಂಗಳೂರು, ಜೂನ್ 16: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಜೂ.18ರಿಂದ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ವಿಧಾನಸಭೆ ಹಾಗೂ ವಿಧಾನ ಪಡಿಷತ್ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಶಿಕ್ಷಕರು ಹಾಗೂ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತಕ್ಷಣ ಕ್ರಮ ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಸೂಚಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ವರ್ಗಾವಣೆ ನಡೆಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ವೇಳಾಪಟ್ಟಿಯಂತೆ ಮೇ ತಿಂಗಳಲ್ಲೇ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ, ನೀತಿ ಸಂಹಿತೆಯಿಂದ ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಈಗಾಗಲೇ ವರ್ಗಾವಣೆಗೆ ಶಿಕ್ಷಕರು ಅನ್‌ಲೈನ್‌ನಲ್ಲಿ ಅಜಿ ಸಲ್ಲಿಸಿದ್ದಾರೆ. ಆಯಾ ಡಿಡಿಪಿಐಗಳ ಹಂತದಲ್ಲಿ ವರ್ಗಾವಣೆ ನಡೆಯಲಿರುವುದರಿಂದ 20 ರಿಂದ 30 ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ ಎಂದು ಸಚಿವ ಎನ್. ಮಹೇಶ್ ಹೇಳಿದ್ದಾರೆ.












Click it and Unblock the Notifications