ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಲವು ಗೊಂದಲ; ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ಗೆ ತಡೆ

|
Google Oneindia Kannada News

ಬೆಂಗಳೂರು, ಆಗಸ್ಟ್ 28 : ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಕೌನ್ಸಿಲಿಂಗ್ ಸ್ಥಗಿತಗೊಳಿಸಲಾಗಿದೆ.

ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಗೊಂದಲಗಳಾಗಿವೆ. ಆದ್ದರಿಂದ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ಎದುರೇ ಶಿಕ್ಷಕಿಯ ಬರ್ಬರ ಕೊಲೆಶಾಲೆಯಲ್ಲಿ ವಿದ್ಯಾರ್ಥಿಗಳ ಎದುರೇ ಶಿಕ್ಷಕಿಯ ಬರ್ಬರ ಕೊಲೆ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ತೀರ್ಮಾನಿಸಲಾಗಿದೆ. 10 ವರ್ಷ ಸೇವೆ ಪೂರೈಸಿರುವ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುವುದು ಇದರಲ್ಲಿ ಸೇರಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಿಕ್ಷಕರ ಪ್ರತಿಭಟನೆವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಿಕ್ಷಕರ ಪ್ರತಿಭಟನೆ

Teachers Transfer Counseling Stopped

ಆದರೆ, ಕೆಲವರ ಒತ್ತಡದಿಂದಾಗಿ ವರ್ಗಾವಣೆ ಮಾರ್ಗಸೂಚಿ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಇದರಿಂದಾಗಿ ಕಡ್ಡಾಯ ವರ್ಗಾವಣೆಯಲ್ಲಿ ಸಲವತ್ತು ಪಡೆಯುವವರು ಹೆಚ್ಚಾಗಿದ್ದಾರೆ. ಇನ್ನೂ ಹಲವಾರು ಗೊಂದಲಗಳು ಇರುವ ಕಾರಣ ಕೌನ್ಸಿಲಿಂಗ್ ಸ್ಥಗಿತಗೊಂಡಿದೆ.

ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರ ನೇಮಕಾತಿ : 22,150 ಹುದ್ದೆಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರ ನೇಮಕಾತಿ : 22,150 ಹುದ್ದೆ

ಸುರೇಶ್ ಕುಮಾರ್ ಫೇಸ್ ಬುಕ್ ಪೋಸ್ಟ್ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಫೇಸ್‌ ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ಅದರಲ್ಲಿಯೂ ಶಿಕ್ಷಕಿಯರು ಮನವಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿ ಕೆಲವು ನ್ಯಾಯಯುತ ಪ್ರಸ್ತಾವನೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ.

ಈ ವರ್ಗಾವಣೆ ವ್ಯವಸ್ಥೆಯಲ್ಲಿರುವ ಕೆಲವ ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಈ ಕೆಲವು ಗೊಂದಲಗಳನ್ನು ನಿವಾರಿಸಿ, ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ಕುರಿತು ಚಿಂತನೆ ಮತ್ತು ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ' ಎಂದು ಹೇಳಿದ್ದಾರೆ.

ಆದ್ದರಿಂದ ಕೇವಲ ಕೆಲದಿನಗಳ ಮಟ್ಟಿಗೆ ಹಾಲಿ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಮಾತ್ರ. ಬಹಳ ಬೇಗ ಸುಧಾರಿತ ವರ್ಗಾವಣೆ ಪ್ರಕ್ರಿಯೆ ಜಾರಿ ತರಲು ಕ್ರಮ ಕೈಗೊಳ್ಳಲಾಗುತ್ತದೆ.‌ ಯಾರಿಗೂ ಆತಂಕ ಬೇಡ.

ಪರಸ್ಪರ ವರ್ಗಾವಣೆ (Mutual Transfer) ಕುರಿತು ಯಾರಿಗೂ ಗೊಂದಲ, ಭಿನ್ನಾಭಿಪ್ರಾಯ ಇರದಿರುವುದರಿಂದ ಅದನ್ನು ಕೂಡಲೇ ಮುಂದುವರಿಸಬಹುದಾಗಿದೆ ಎಂಬುದು ಎಲ್ಲರ ಅಭಿಪ್ರಾಯವಾಗಿರುವುದರಿಂದ ಈ ಕುರಿತು ಕೂಡಲೇ ಸೂಚನೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

English summary
Karnataka education minister S.Suresh Kumar ordered to stop teachers transfer counseling with immediate effect. There is a lot of confusions in the counseling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X