ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ಕಣ್ಣಾಮುಚ್ಚಾಲೆ: ವರ್ಗಾವಣೆ ಆರನೇ ಬಾರಿಗೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29: ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಕಣ್ಣಾಮುಚ್ಚಾಲೆ ಆಡುತ್ತಿದೆ. ಸತತ ಆರನೇ ಬಾರಿಗೆ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಅನೇಕ ಕಾರಣಗಳಿಗಾಗಿ ಶಿಕ್ಷಕರ ಕೌನ್ಸೆಲಿಂಗ್ ಮುಂದೂಡಲಾಗುತ್ತಿದೆ ಅಂತಿಮದಲ್ಲಿ ಉಪಚುನಾವಣೆ ನೀತಿ ಸಂಹಿತೆ ನೆಪ ವೊಡ್ಡಿತ್ತು ಆದರೆ ಚುನಾವಣಾ ಆಯೋಗ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರೆಸಿ ಯಾವ ಅಭ್ಯಂತರವೂ ಇಲ್ಲ ಎಂದು ಹೇಳಿತ್ತು. ಎಲ್ಲ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿತ್ತು. ಆದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತೊಮ್ಮೆ ಮುಂದೂಡಿದೆ.

 ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು! ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು!

ವರ್ಗಾವಣೆಗೆ ಅನುಸರಿಸಬೇಕಾದ ಮಾನದಂಡಗಳ ಅಸ್ಪಷ್ಟತೆ, ತಂತ್ರಾಂಶದಲ್ಲಿನ ದೋಷ, ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವಿರೋಧ, ಚುನಾವಣೆ ಸೇರಿದಂತೆ ಹಲವು ಕಾರಣಗಳಿಂದ ಪದೇ ಪದೇ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಲಾಗುತ್ತಿದೆ.

 ಅಕ್ಟೋಬರ್ 6ರಂದು ಹೊಸ ಅಧಿಸೂಚನೆ ಹೊರಡಿಸಿತ್ತು

ಅಕ್ಟೋಬರ್ 6ರಂದು ಹೊಸ ಅಧಿಸೂಚನೆ ಹೊರಡಿಸಿತ್ತು

ಶಿಕ್ಷಣ ಇಲಾಖೆಯು ಅಕ್ಟೋಬರ್ 6ರಂದು ಮತ್ತೆ ವರ್ಗಾವಣೆ ಅಧಿಸೂಚನೆ ಹೊರಡಿಸಿತ್ತು. ಅ.15ರಿಂದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ಕೈಗೆತ್ತಿಕೊಂಡಿತ್ತು. ಆದರೆ ಟಿಡಿಎಸ್ ತಂತ್ರಾಂಶದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು.

58 ವರ್ಷ ಮೀರಿದವರು ವರ್ಗಾವಣೆ ಪಟ್ಟಿಯಲ್ಲಿದ್ದರು

58 ವರ್ಷ ಮೀರಿದವರು ವರ್ಗಾವಣೆ ಪಟ್ಟಿಯಲ್ಲಿದ್ದರು

ಕಾಯಿದೆ ಪ್ರಕಾರ 58 ವರ್ಷವಾದ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ, ಜತೆಗೆ ವಿಧವೆಯರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ ಟಿಡಿಎಸ್ ತಂತ್ರಾಂಶದಲ್ಲಿ ಇಂತಹ ಪ್ರಕರಣಗಳನ್ನು ನಮೂದಿಸಲು ಸ್ಥಳಾವಕಾಶ ಕಲ್ಪಿಸಿರಲಿಲ್ಲ.

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

 8 ಜಿಲ್ಲೆಗಳಿಗೆ ಷರತ್ತು ವಿಧಿಸಲಾಗಿತ್ತು

8 ಜಿಲ್ಲೆಗಳಿಗೆ ಷರತ್ತು ವಿಧಿಸಲಾಗಿತ್ತು

ಉಪ ಚುನಾವಣೆ ನಡೆಯುತ್ತಿರುವ ಎಂಟು ಜಿಲ್ಲೆಗಳಾದ ಬಳ್ಳಾರಿ, ಮಂಡ್ಯ, ಶಿವಮೊಗ್ಗ, ಬಾಗಲಕೋಟೆ, ರಾಮನಗರ, ಮೈಸೂರು, ಉಡುಪಿ, ಶಿವಮೊಗ್ಗ, ದಾವಣೆಗೆರೆ ಜಿಲ್ಲೆಗಳಲ್ಲಿ ಮಾಅದರಿ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಬಾರದು ಹಾಗೂ ಹಾಜರಾತಿ ಪಡೆಯಬಾರದು ಎಂಬ ಷರತ್ತು ವಿಧಿಸಿ ಕೌನ್ಸೆಲಿಂಗ್ ನಡೆಸಲು ಆದೇಶ ನೀಡಲಾಗಿತ್ತು.

 ಶಿಕ್ಷಕರ ನೇಮಕ ಪಟ್ಟಿ ಪ್ರಕಟಕ್ಕೆ ಅನುಮತಿ ದೊರೆತಿತ್ತು

ಶಿಕ್ಷಕರ ನೇಮಕ ಪಟ್ಟಿ ಪ್ರಕಟಕ್ಕೆ ಅನುಮತಿ ದೊರೆತಿತ್ತು

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪದವೀಧರ ಶಿಕ್ಷಕರ ನೇಮಕಕ್ಕೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲು ಕೂಡ ಚುನಾವಣಾ ಆಯೋಗ ಅನುಮತಿ ನೀಡಿತ್ತು.

ನೇಮಕ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಪೂರ್ಣಗೊಳಿಸಿ ಆಯ್ಕೆಗೊಂಡ ಎಲ್ಲಾ ಅಭ್ಯರ್ಥಿಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನೇಮಕ ಆದೇಶ ನೀಡುವಂತೆ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಮುಖ್ಯ ಚುನಾವಣಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದರು.

ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ

English summary
Department of education has postponed government school teachers transfer counseling for the sixth time in the last two years for various reasons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X