• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಮುಂದೂಡಿಕೆ: ಮಂಜೂರು ಹುದ್ದೆ ಪರಿಗಣನೆ

|
Google Oneindia Kannada News

ಬೆಂಗಳೂರು, ನ.24: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಬುಧವಾರದಿಂದ (ನ.24) ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.25ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದನ್ನು ತೀವ್ರವಾಗಿ ವಿರೋಧಿಸಿ, ತಾಲ್ಲೂಕಿಗೆ ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ.25ರಷ್ಟು ಹುದ್ದೆಗಳಿಗೆ ವರ್ಗಾವಣೆ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ಮಾಡುತ್ತಿತ್ತು.

ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸಹಿತ ಹಲವು ಪದಾಧಿಕಾರಿಗಳು ನ.22ರಿಂದ ಎರಡು ದಿನ ನಿರಂತರವಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರೊಂದಿಗೆ ಸಭೆಗಳನ್ನು ನಡೆಸಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಾಡಬೇಕಾದ ಬದಲಾವಣೆಗಳ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ.

ಸರ್ಕಾರದ ಪರಿಷ್ಕೃತ ಆದೇಶ:

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಇಲಾಖಾ ಪ್ರಧಾನ ಕಾರ್ಯದರ್ಶಿ ನ.23ರಂದು ಸಂಜೆ ಆದೇಶವೊಂದನ್ನು ಹೊರಡಿಸಿದ್ದು, "ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಆಧಾರದ ಮೇಲೆ ಶೇಕಡಾವಾರು ಮಿತಿಯನ್ನು ಲೆಕ್ಕಾಚಾರ ಮಾಡಬೇಕು" ಎಂದು ಆದೇಶ ಹೊರಡಿಸಿದ್ದಾರೆ. ಅಂದರೆ, ಶಿಕ್ಷಕರ ವರ್ಗಾವಣೆ ಮಾಡಬೇಕಾದರೆ, ಆ ತಾಲ್ಲೂಕಿಗೆ ಎಷ್ಟು ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ ಎಂಬುದನ್ನು ಪರಿಗಣಿಸಿ, ಅದರಲ್ಲಿ ಶೇ.25ರಷ್ಟು ಹುದ್ದೆಗಳಿಗೆ ವರ್ಗಾವಣೆ ಪ್ರಕ್ರಿಯೆ ನಡೆಸಬೇಕು ಎಂದು ಸೂಚಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ 72,000 ಶಿಕ್ಷಕರ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ನ.24ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ, ಸರ್ಕಾರದ ಪರಿಷ್ಕೃತ ಆದೇಶದಿಂದ ವರ್ಗಾವಣೆ ಮಾಡಬಹುದಾದ ಹುದ್ದೆಗಳ ಸಂಖ್ಯೆ ಹೆಚ್ಚಾಗಲಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಷ್ಕೃತ ಆದೇಶ ಹೊರಡಿಸಿ, ವರ್ಗಾವಣೆ ದಿನಾಂಕ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Teachers Transfer process temporary Postponed

ಹೋರಾಟಕ್ಕೆ ಸಂದ ಜಯ:

ಶಿಕ್ಷಣ ಇಲಾಖೆ ಸಚಿವರು ಮತ್ತು ಆಯುಕ್ತರ ಜೊತೆ ಎರಡು ದಿನ ನಿರಂತರವಾಗಿ ಸಭೆಗಳನ್ನು ನಡೆಸಲಾಯಿತು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತ ಆರ್. ವಿಶಾಲ್ ಅವರೊಂದಿಗೆ 24 ತಾಸು ನಿರಂತರವಾಗಿ ಬೇರೆ ಬೇರೆ ಸಭೆಗಳನ್ನು ನಡೆಸಲಾಯಿತು. ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪದಾಧಿಕಾರಿಗಳು ನಡೆಸಿದ ಹೋರಾಟಕ್ಕೆ ಇದು ಜಯ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ 'ಒನ್ ಇಂಡಿಯಾ ಕನ್ನಡ'ಕ್ಕೆ ತಿಳಿಸಿದರು.

ತಾಲ್ಲೂಕಿಗೆ ಮಂಜೂರಾದ ಒಟ್ಟು ಶಿಕ್ಷಕರ ಹುದ್ದೆಗಳ ಪೈಕಿ ಶೇ. 25ರಷ್ಟು ಹುದ್ದೆಗಳಿಗೆ ವರ್ಗಾವಣೆ ನೀಡಬೇಕು ಮತ್ತು ತಾಲ್ಲೂಕಿನೊಳಗೆ ಶೇ 25ರಷ್ಟು ವರ್ಗಾವಣೆ ಮಾಡಲು ಮೊದಲ ಆಧ್ಯತೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದು, ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಹೇಳಿದರು.

   ಕೆಂಚಪ್ಪ ಗೌಡರ ಮನದಾಳದ ಮಾತು | Oneindia Kannada
   English summary
   The state government has issued a revised order on the transfer of teachers, which has been temporarily postponed from Wednesday (Nov. 24).
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X