ವಿಶ್ವಕಪ್ ಕ್ರಿಕೆಟ್ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ದರಾಮಯ್ಯ!
Recommended Video
ಬೆಂಗಳೂರು, ಜುಲೈ 05 : 'ಆಸ್ಟ್ರೇಲಿಯಾ ತಂಡಕ್ಕಿಂತ ಭಾರತ ಬಲಿಷ್ಠವಾಗಿದೆ. ನಾನು ಹಾಕಿರುವ ಲೆಕ್ಕಾಚಾರದ ಪ್ರಕಾರ ಭಾರತ ವಿಶ್ವಕಪ್ ಗೆಲ್ಲಲಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನಾನು ಸಹ ಕ್ರಿಕೆಟ್ ಆಡುತ್ತಿದ್ದೆ. 5ನೇ ತರಗತಿಯಿಂದಲೇ ನನಗೆ ಕ್ರೀಡೆ ಬಗ್ಗೆ ಹೆಚ್ಚು ಆಸಕ್ತಿ. ಕಬ್ಬಡಿ ಎಂದರೆ ನನಗೆ ತುಂಬಾ ಇಷ್ಟ' ಎಂದು ಹೇಳಿದರು.
'ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ. ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಭಾರತ ಬಲಿಷ್ಠವಾಗಿದೆ. ನಾನು ಹಾಕಿರುವ ಲೆಕ್ಕಾಚಾರದ ಪ್ರಕಾರ ಭಾರತ ಕಪ್ ಗೆಲ್ಲಲಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.

ಈಗಾಗಲೇ ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ವಿಶ್ವಕಪ್ ಸೆಮಿ ಫೈನಲ್‌ಗೆ ಪ್ರವೇಶ ಪಡೆದಿವೆ. ಮತ್ತೊಂದು ತಂಡ ಯಾವುದು ಎಂಬುದು ಶುಕ್ರವಾರ ತೀರ್ಮಾನವಾಗಲಿದೆ.
ಜುಲೈ 9, ಜುಲೈ 11ರಂದು ಎರಡು ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು, ಜುಲೈ 14ರಂದು ಫೈನಲ್ ಪಂದ್ಯ ನಡೆಯಲಿದೆ. ಯಾರು ಕಪ್ ಗೆಲ್ಲಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications