ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗಿಲ್ಲವೇ?, ಪರಿಹಾರವೇನು?
ಬೆಂಗಳೂರು, ಆಗಸ್ಟ್ 08: ಕರ್ನಾಟಕದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದು 'ಗೃಹಲಕ್ಷ್ಮಿ'. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಕೈಗೊಂಡ ಪ್ರಮುಖ ಯೋಜನೆ ಇದೆ. ಆದರೆ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯಡಿ ಹಣ ಬ್ಯಾಂಕ್ ಖಾತೆಗೆ ಬರುತ್ತಿಲ್ಲ ಎಂಬ ಆರೋಪವಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಹಣ ಬರುತ್ತಿಲ್ಲ ಎಂಬುದಕ್ಕೆ ಕೆಲವು ತಾಂತ್ರಿಕ ಕಾರಣಗಳು ಇವೆ.
'ಗೃಹಲಕ್ಷ್ಮಿ' ಯೋಜನೆ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಯೋಜನೆಯಡಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಸಿಕ ರೂ. 2000 ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗುತ್ತಿಲ್ಲ ಎಂದು ಮಾಹಿತಿಗಳು ಬರತ್ತಿವೆ. ಆದಾಯ ತೆರಿಗೆ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಈ ಕುರಿತು ಮಹಿಳೆಯರು ಗೊಂದಲಗೊಂಡಿದ್ದಾರೆ.
ಸಮಸ್ಯೆ ಪರಿಹಾರ ಹೇಗೆ?: ಅಧಿಕಾರಿಗಳೂ ಈ ಸಮಸ್ಯೆಯನ್ನು ಗಮನಿಸಿದ್ದು, ಪರಿಹಾರವನ್ನು ಹೇಳಿದ್ದಾರೆ. ಆದಾಯ ತೆರಿಗೆ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.
ಈ ವೇಳೆ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ನೋಟರಿಯಿಂದ ಪಡೆದ ಪತ್ರ, ಆಡಿಟರ್ ಅವರಿಂದ ಪಡೆದ ಪತ್ರ, ಅರ್ಜಿದಾರರ ಮನವಿ ಪತ್ರವನ್ನು ನೀಡಬೇಕು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕ ಮಾಡಿ ಎಂದು ಮನವಿ ಮಾಡಿದ್ದಾರೆ.
ಎರಡು ತಿಂಗಳ ಹಣ ಬಿಡುಗಡೆ: ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣವನ್ನು ಜಮೆ ಮಾಡಲಾಗುತ್ತದೆ ಎಂದು ಖಾತೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸಚಿವರು, "ತಾಂತ್ರಿಕ ಕಾರಣಗಳಿಂದ 2-3 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ತಲಾ 2 ಸಾವಿರ ರೂ. ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ. ಆಗಸ್ಟ್ 6ರಿಂದಲೇ ಜೂನ್, ಜುಲೈ ತಿಂಗಳ ಹಣ ಜಮೆ ಆಗಲಿದೆ" ಎಂದು ಸ್ಪಷ್ಟಪಡಿಸಿದರು.
"ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಪಾವತಿಯಾಗಲಿದೆ" ಎಂದು ಸಚಿವರು ಹೇಳಿದ್ದಾರೆ.
ಹಣ ಬಿಡುಗಡೆ ವಿಳಂಬದ ಬಗ್ಗೆ ಮಾತನಾಡಿರುವ ಸಚಿವರು, "ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಜೂನ್ ಮತ್ತು ಜುಲೈ ತಿಂಗಳು ವಿಳಂಬವಾಗಿತ್ತು. ಹಣಕಾಸು ಇಲಾಖೆ ಹಣ ಬಿಡುಗಡೆಗೆ ಸಮ್ಮತಿಸಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ" ಎಂದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications