Tejasvi Surya: ವಕ್ಫ್‌ ಬೋರ್ಡ್‌ ವಿವಾದದ ಬಗ್ಗೆ ತೇಜಸ್ವಿ ಸೂರ್ಯ ಸ್ಫೋಟಕ ಹೇಳಿಕೆ!

Waqf Board controversy: ರಾಜ್ಯದಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ವಿಚಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಲಾಗಿದೆ ಎನ್ನುವ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ವಕ್ಫ್‌ ಕಾಯ್ದೆಯ ಬಗ್ಗೆ ಸಂಸದ ಹಾಗೂ ಜಂಟಿ ಸಂಸದೀಯ ಸಮಿತಿಯ ಸದಸ್ಯ ತೇಜಸ್ವಿ ಸೂರ್ಯ ಅವರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಉಪ ಚುನಾವಣೆಗೆ ಒಂದು ವಾರವೂ ಬಾಕಿ ಇಲ್ಲ. ಈ ಸಂದರ್ಭದಲ್ಲಿ ವಕ್ಫ್‌ ಬೋರ್ಡ್‌ ವಿವಾದ ತಾರಕಕ್ಕೆ ಹೋಗಿದೆ. ಇದೀಗ ತೇಜಸ್ವಿ ಸೂರ್ಯ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ವಕ್ಫ್‌ ಬೋರ್ಡ್‌ ವಿವಾದ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ತಾರಕಕ್ಕೆ ತಲುಪಿದೆ. ನೆರೆಯ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲೂ ಈ ವಕ್ಫ್‌ ಬೋರ್ಡ್‌ ವಿವಾದ ನಡೆಯುತ್ತಿದೆ. ತಮಿಳುನಾಡಿನಲ್ಲಿ ಈ ವಿಷಯ ಹೆಚ್ಚು ಚರ್ಚೆಯಾಗುತ್ತಿತ್ತಾದರೂ, ಅಲ್ಲಿನ ಸರ್ಕಾರ ಇದನ್ನು ವಿವಾದ ಮಟ್ಟಕ್ಕೆ ಹೋಗದಂತೆ ನಿಭಾಯಿಸುತ್ತಿದೆ ಎನ್ನಲಾಗಿದೆ.

Tejasvi Surya Explosive Statement on Waqf Board Controversy

ಈ ನಡುವೆ ವಕ್ಫ್‌ ವಿವಾದದ ಬಗ್ಗೆ ಮಾತನಾಡಿರುವ ತೇಜಸ್ವಿ ಸೂರ್ಯ, ವಕ್ಫ್‌ ಬೋರ್ಡ್‌ನ ಆಟೋಟಗಳಿಗೆ ಬ್ರೇಕ್‌ ಹಾಕುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ ಎಂದಿದ್ದಾರೆ. ವಕ್ಫ್‌ ಮಂಡಳಿಗೆ ಸಂಬಂಧಿಸಿಂತೆ ಯಾವ ರೀತಿಯ ನಿರ್ದಿಷ್ಟ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇದೆ ಎನ್ನುವುದನ್ನು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವ ಉದ್ದೇಶದಿಂದ 3 ತಿಂಗಳ ಹಿಂದೆಯೇ ಜಂಟಿ ಸಂಸದೀಯ ಸಮಿತಿಯನ್ನು ರಚಿಸಿರುವುದಾಗಿ ಹೇಳಿದ್ದಾರೆ.

ಈ ಸಮಿತಿಯು ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕರಿಸುತ್ತಿದೆ ಎಂದು ಹೇಳಿದ್ದಾರೆ.

ವಕ್ಫ್‌ ಕಾಯ್ದೆಗೆ ತಿದ್ದುಪಡಿ: ಇನ್ನು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ತೇಜಸ್ವಿ ಸೂರ್ಯ ಅವರು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 20 ಜನರ ಸಮಿತಿಯನ್ನು ರಚಿಸಿದ್ದಾರೆ. ಅದರಲ್ಲಿ ನಾನು ಸಹ ಇದ್ದೇನೆ. ನಾವೆಲ್ಲ ಜನರಿಂದ ಅಹವಾಲು, ಅವರ ಸಮಸ್ಯೆಗಳ ಅರ್ಜಿಯನ್ನು ಸ್ವೀಕರಿಸಿ ದೆಹಲಿಗೆ ತಲುಪಿಸಲಿದ್ದೇವೆ. ನಂತರ ಸುದೀರ್ಘ ಚರ್ಚೆ ಮಾಡಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Tejasvi Surya Explosive Statement on Waqf Board Controversy

ಹುಬ್ಬಳ್ಳಿಯಲ್ಲಿ ಮಾಹಿತಿ ಸಂಗ್ರಹ: ವಕ್ಫ್‌ ಬೋರ್ಡ್‌ಗೆ ಸಂಬಂಧಿಸಿದಂತೆ ಜನರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಕ್ಫ್ ಬೋಡ್೯ ಆಸ್ತಿ ಕಬಳಿಸುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ, ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ಪೀಕರಗೆ ನೀಡಲಾಗುವುದು ಎಂದು ವಕ್ಫ್ ಬೋಡ್೯ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ ಹೇಳಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಲಾಗ್ತಿದೆ ಅಂತ ಹೇಳಿದ್ದಾರೆ. ಹೀಗಾಗಿ, ಅಹವಾಲು ಸ್ವೀಕರಿಸಲು ಬಂದಿದ್ದೇನೆ ಎಂದರು. ಉತ್ತರ ಕರ್ನಾಟಕ ಭಾಗದ ಸುಮಾರು 50 ವರ್ಷಗಳಿಂದ ಉಳಿಮೆ‌ ಮಾಡಿದ ಜಮೀನು, ಐತಿಹಾಸಿ ದೇವಸ್ಥಾನಗಳ ಕಂಬಳಿಸಲಾಗಿದೆ‌ ಎನ್ನಲಾಗುತ್ತಿದೆ. ಆದ್ದರಿಂದ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

ವಕ್ಫ್‌ ಬೋರ್ಡ್‌ ವಿವಾದ ಗುಡುಗಿದ ಬಿಜೆಪಿ: ಇನ್ನು ವಕ್ಫ್‌ ಬೋರ್ಡ್‌ ವಿವಾದದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ವಕ್ಫ್‌ ಬೋರ್ಡ್‌ ವಿವಾದದ ಬಗ್ಗೆ ರಾಜ್ಯ ಕಾಂಗ್ರೆಸ್‌ನ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಪ್ರತಿಭಟನೆ ಮುಂದುವರಿದಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+