ಕಾಂಗ್ರೆಸ್ ಸೇರುವ ವದಂತಿಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತ ಕುಮಾರ್!
ಬೆಂಗಳೂರು, ಜುಲೈ 17; ಕೇಂದ್ರ ಸಚಿವರಾಗಿದ್ದ ದಿ. ಅನಂತ ಕುಮಾರ್ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿಯೊಬ್ಬರು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
2024ರ ಲೋಕಸಭೆ ಚುನಾವಣೆ ಹತ್ತಿರವಿರುವ ಕಾರಣ ಈ ಪೋಸ್ಟ್ ಕರ್ನಾಟಕ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮೂಲಕ ಸೋಮವಾರ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಯಲ್ಲಿ ತೇಜಸ್ವಿನಿ ಅನಂತಕುಮಾರ್‌ಗೆ ಸರಿಯಾದ ಸ್ಥಾನ ನೀಡಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಬೇಕಿತ್ತು ಎಂಬ ಹಲವು ಲೆಕ್ಕಾಚಾರಗಳ ನಡುವೆಯೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಸಂಚಲನ ಮೂಡಿಸಿತ್ತು. ಅದಕ್ಕೆ ಟ್ವೀಟ್ ಮೂಲಕ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ತೇಜಸ್ವಿನಿ ಅನಂತಕುಮಾರ್ ಟ್ವೀಟ್; ಸೋಮವಾರ ತೇಜಸ್ವಿನಿ ಅನಂತಕುಮಾರ್, 'ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ' ಎಂದು ಹೇಳಿದ್ದಾರೆ.
'ಇಂಗ್ಲಿಷಿನಲ್ಲಿ ಹೇಳಬಹುದಾದರೆ, " I am wedded to the party and ideology - no compromise" ಎಂದು ಅವರು ಟ್ವೀಟ್ ಮಾಡಿದ್ದು, @BJP4India ಮತ್ತು @BJP4Karnataka ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿದ್ದಾರೆ.
ಬಸವನಗುಡಿಯಿಂದ ಕಣಕ್ಕೆ?; ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ತೇಜಸ್ವಿನಿ ಅನಂತಕುಮಾರ್ ಬೆಂಗಳೂರಿನ ಬಸವನಗುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
ಬಳಿಕ ಕೆಲವು ಹಿರಿಯ ನಾಯಕರು ಅವರಿಗೆ ಟಿಕೆಟ್ ತಪ್ಪಿಸಿದರು ಎಂದು ಮಾತುಗಳು ಕೇಳಿಬಂದವು. ಆಗ ತೇಜಸ್ವಿನಿ ಅನಂತಕುಮಾರ್, 'ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?' ಎಂದು ಟ್ವೀಟ್ ಮಾಡಿದ್ದರು.
ತೇಜಸ್ವಿನಿ ಅನಂತಕುಮಾರ್‌ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಲ್ಲಿ ಟಿಕೆಟ್ ನೀಡಲಿಲ್ಲ ಎಂಬುದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿತ್ತು. ಬಳಿಕ ಪಕ್ಷದಲ್ಲಿ ಅವರಿಗೆ ಸರಿಯಾದ ಸ್ಥಾನಮಾನ ನೀಡಲಿಲ್ಲ ಎಂದು ಸಹ ಚರ್ಚೆಗಳು ನಡೆದವು.
ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಅಥವ ಬಸವನಗುಡಿಯಲ್ಲಿ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತು. ಆದರೆ ಜಯನಗರಲ್ಲಿ ಬಿಜೆಪಿ ಸಿ. ಕೆ. ರಾಮಮೂರ್ತಿ ಮತ್ತು ಬಸವನಗುಡಿಯಲ್ಲಿ ಹಾಲಿ ಶಾಸಕ ರವಿ ಸುಬ್ರಮಣ್ಯಗೆ ಟಿಕೆಟ್ ನೀಡಿತು. ಇಬ್ಬರು ಗೆಲುವು ಸಾಧಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾದರಿಯಲ್ಲಿ ತೇಜಸ್ವಿನಿ ಅನಂತಕುಮಾರ್ ಬಿಜೆಪಿ ಬಿಟ್ಟುಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಶನಿವಾರದಿಂದ ಟ್ವಿಟರ್‌ನಲ್ಲಿ ಹರಿದಾಡುತ್ತಿದ್ದವು. ಈ ಸುದ್ದಿಗಳಿಗೆ ಅವರು ಈಗ ಸ್ಪಷ್ಟನೆ ನೀಡಿದ್ದಾರೆ.
2019ರಲ್ಲಿ ಬಿಜೆಪಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರ್ನಾಟಕ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಲೋಕಸಭೆ ಚುನಾವಣೆಗೆ ತೇಜಸ್ವಿನಿ ಅನಂತಕುಮಾರ್ ಹೆಸರನ್ನು ರಾಜ್ಯ ಘಟಕ ಶಿಫಾರಸು ಮಾಡಿತ್ತು. ಆದರೆ ತೇಜಸ್ವಿಸೂರ್ಯಗೆ ಟಿಕೆಟ್ ಸಿಕ್ಕಿದ ಕಾರಣ ಅವರಿಗೆ ಟಿಕೆಟ್ ಕೈತಪ್ಪಿತ್ತು. ಬಳಿಕ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಅಸಮಾಧಾನ ಬಗೆಹರಿಸುವ ಪ್ರಯತ್ನ ಮಾಡಲಾಗಿತ್ತು.
{dment1}
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ












Click it and Unblock the Notifications