Get Updates
Get notified of breaking news, exclusive insights, and must-see stories!

Breaking: ದೇವೇಗೌಡರನ್ನು ಭೇಟಿ ಮಾಡಿದ ತೆಲಂಗಾಣ ಸಿಎಂ ಕೆಸಿಆರ್: ತೃತೀಯ ರಂಗದ ಕನಸು

ಬೆಂಗಳೂರು, ಮಾ.26: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದರು.

ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಕೆಸಿಎಆ್ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ವಾಗತ ಮಾಡಿದರು. ಕೆಸಿಎಆ್ ಆಗಮನದ ಹಿನ್ನೆಲೆಯಲ್ಲಿ ಪದ್ಮನಾಭನಗರ ಸುತ್ತಮುತ್ತ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್‌ಗೆ ಭೇಟಿ ನೀಡಿದ್ದಾರೆ. ಆದರೆ, ಪ್ರಧಾನಿ ಕಾರ್ಯಕ್ರಮಕ್ಕೆ ಈಗ ಎರಡನೇ ಬಾರಿಯೂ ಗೈರು ಆಗಿರುವ ಕೆಸಿಆರ್ ದೇವೇಗೌಡರನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದಾರೆ.

Telangana CM K Chandrasekhar rao Meet HD Devegowda

Recommended Video

      ಪಾಕಿಸ್ತಾನದ ಆರ್ಥಿಕ ಸ್ಥಿತಿ ಮುಂದಿನ ದಿನಗಳಲ್ಲಿ ಶ್ರೀಲಂಕಾ ಥರಾ ಬಿಗಡಾಯಿಸೋದು ಗ್ಯಾರೆಂಟಿ | #Pakistan | Oneindia

      ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಹಿಡಿತವನ್ನು ಬಲಪಡಿಸಲು ಮತ್ತು ತೃತೀಯ ರಂಗದ ಕನಸಿನೊಂದಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾದ ನಾಯಕರುಗಳನ್ನು ಕೆಸಿಆರ್ ಭೇಟಿ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ದೇಶದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜೊತೆ ಪಂಜಾಬ್ ಪ್ರವಾಸ ಕೈಗೊಂಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಎಚ್‌ಡಿ ದೇವೇಗೌಡ ಅವರೊಂದಿಗೆ ಚರ್ಚೆ ನಡೆಸಿದ್ದು, ಮೇ 27ರಂದು ಮಹಾರಾಷ್ಟ್ರಕ್ಕೆ ತೆರಳಿ ಅಣ್ಣಾ ಹಜಾರೆ ಅವರನ್ನು ಭೇಟಿ ಮಾಡುವ ಕಾರ್ಯಕ್ರಮ ಹಾಕಿಕೊಂಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+