Karnataka Weather: ಕನಿಷ್ಠ ತಾಪಮಾನದಿಂದ ಈ ಜಿಲ್ಲೆಗಳಲ್ಲಿ ನಡುಗುವ ಚಳಿ

ರಾಜ್ಯದಲ್ಲಿ ಒಂದೆಡೆ ಬೇಸಿಗೆಯ ವಾತಾವರಣ ಕಂಡುಬಂದರೂ ಚಳಿಯ ಪ್ರಮಾಣ ಕೂಡ ಹೆಚ್ಚಾಗಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದ್ದು, ಚಳಿಗೆ ಜನ ನಡುಗುತ್ತಿದ್ದಾರೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯನಗರ, ತುಮಕೂರು, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Temperature Drops Across Karnataka Cold Wave Intensifies Weather Department

ಸದ್ಯ ಹವಾಮಾನ ವೈಪರೀತ್ಯದಿಂದಾಗಿ ಕೆಲವೆಡೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಖ್ಯವಾಗಿ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲು ಸುಡಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕ್ರಮೇಣವಾಗಿ ಹೆಚ್ಚಾಗುವ ಸಾಧ್ಯತೆ ಕೂಡ ಇದೆ.

ಶಿವಮೊಗ್ಗ ಹಾಗೂ ಧಾರವಾಡದಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇನ್ನು ಹೊನ್ನಾವರದಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಕಂಡುಬಂದಿದೆ. ಅತ್ತ ಕಾರವಾರದಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ವರದಿಯಾಗಿದೆ.

ಬಾಗಲಕೋಟೆಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಗದಗದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಕಲಬುರಗಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಕುಸಿತ ಕಂಡಿದ್ದು, ಚಳಿಯು ತೀವ್ರಗೊಂಡಿದೆ.

Temperature Drops Across Karnataka Cold Wave Intensifies Weather Department

ಬೆಂಗಳೂರಿನ ಎಚ್ಎಎಲ್ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದರೆ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ಫೆಬ್ರವರಿ 10ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ಭಾಗಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಕಂಡುಬರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್‌ನಿಂದ ಮತ್ತು 16 ಡಿಗ್ರಿ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+