ರಾಜ್ಯದಲ್ಲಿ ಬಿಸಿಲೇರುತ್ತಿದೆ, ಮಳೆ ಸಾಧ್ಯತೆಯೂ ಇದೆ!

Posted By: Nayana
Subscribe to Oneindia Kannada

ಬೆಂಗಳೂರು, ಮಾರ್ಚ್ 12: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದರ ಪ್ರಭಾವದಿಂದಾಗಿ ಮಾ.14-15ರ ವೇಳೆಗೆ ತಮಿಳುನಾಡು, ಕೇರಳ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಕರ್ನಾಟಕದಲ್ಲೂ ಅಲ್ಲಲ್ಲಿ ಮಳೆಯನ್ನು ನಿರೀಕ್ಷಿಸಬಹುದಾಗಿದೆ.

ದಿನ ಕಳೆದಂತೆ ರಾಜ್ಯದಲ್ಲಿ ಬಿಸಿಲಿನ ಬೇಗೆ ಗಣನೀಯ ಪ್ರಮಾಣದಲ್ಲಿ ಏರುತ್ತಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಏಪ್ರಿಲ್ ಗೂ ಮೊದಲೇ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉಷ್ಣಾಂಶ ಏರಿಕೆಯಿಂದಾಗಿ ಗಂಭೀರ ತರದ ಆರೋಗ್ಯ ಸಮಸ್ಯೆಗಳ ಆತಂಕ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ರಾಜಧಾನಿಯಲ್ಲಿ ಬಿಸಿಲ ಝಳಕ್ಕೆ ಹೊರಬೀಳುತ್ತಿವೆ ಹಾವುಗಳು

ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 1.6ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೂ ಅಧಿಕ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಮಂಗಳೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಬದಲಾಗಿ 36 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ.

Temperature high in coastal and north Karnataka

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ವಿಜಯಪುರ ಹಾಗೂ ಬಳ್ಳಾರಿಯಲ್ಲಿ ತಲಾ 38ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ವಾಡಿಕೆಗಿಂತ 1.7 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದೆ. ಏಪ್ರಿಲ್ ಮೊದಲ ವಾರದಲ್ಲಿ ಉಷ್ಣಾಂಶದ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Coastal and northern part of karnataka have witnessed 38 degree celsius temperature in middle of march and it was 1.6 degree celsius higher than normal temperature.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ