ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳನ್ನೂ ತೆರೆಯುತ್ತೇವೆ'

|
Google Oneindia Kannada News

ಬೆಂಗಳೂರು, ಮೇ 27: ''ನಾಲ್ಕನೇ ಹಂತದ ಲಾಕ್‌ಡೌನ್ ಮುಗಿದ ಮೇಲೆ ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳಿಗೂ ಬಾಗಿಲು ತೆರೆಯಲು ಅವಕಾಶ ಕೊಡಲಾಗುತ್ತದೆ. ಆದರೆ, ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು'' ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಪಂಡಿತ್ ಜವಹರಲಾಲ್ ನೆಹರೂ ಅವರ 56 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇರುವ ನೆಹರು ಅವರ ಪ್ರತಿಮೆಗೆ ಸಿಎಂ‌ ಯಡಿಯೂರಪ್ಪ ಮಾಲಾರ್ಪಣೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಕಂದಾಯ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿದ ಸಿಎಂ ಯಡಿಯೂರಪ್ಪಕಂದಾಯ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

''ದೇವಸ್ಥಾನಗಳನ್ನು ತೆರೆದರೆ ಮಸೀದಿ, ಚರ್ಚ್‌ಗಳನ್ನೂ ತೆರೆಯಲಾಗುತ್ತದೆ. ಕೇಂದ್ರ ಸರ್ಕಾರಕ್ಕೆ ಮಂಗಳವಾರ ಈ ಬಗ್ಗೆ ಪತ್ರ ಬರೆಯಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ತೆರೆಯುವುದು ಸೇರಿ ಹಲವು ಚಟುವಟಿಕೆಗಳಿಗೆ ಅವಕಾಶ ಕೇಳಿದ್ದೇವೆ. ಕೇಂದ್ರದ ಅನುಮತಿಗಾಗಿ ಕಾಯುತ್ತಿದ್ದೇವೆ'' ಎಂದು ಸಿಎಂ ಹೇಳಿದರು.

Temple Mosque And Church Will Open Says CM Yediyurappa

''ದೇವಸ್ಥಾನ, ಮಸೀದಿ, ಚರ್ಚ್ ತೆರೆಯುವ ಬಗ್ಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು ಕೆಲವು ನಿಬಂಧನೆಗಳನ್ನು ಅಳವಡಿಸಲು ಸಲಹೆ ಕೊಟ್ಟಿದ್ದಾರೆ. ಆ ನಿಬಂಧನೆಗಳನ್ನು ಅಳವಡಿಸಿಕೊಂಡು ದೇವಸ್ಥಾನ, ಮಸೀದಿ, ಚರ್ಚ್ ತೆರೆಯಲು ಅನುವು ಮಾಡಿಕೊಡಲು ಪ್ರಯತ್ನಿಸಲಾಗುತ್ತಿದೆ'' ಎಂದು ಯಡಿಯೂರಪ್ಪ ಹೇಳಿದರು.

English summary
Temple Mosque And Church Will Open after 4.0 lockdown end. Says CM Yediyurappa At Vidhanasoudha On Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X