ಭಟ್ಕಳ: ಟೆಂಪೋ- ಬಸ್ ಡಿಕ್ಕಿ, 7ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ
ಭಟ್ಕಳ, ಮೇ 25 : ಟೆಂಪೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿ 7ಮಂದಿ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅನಂತವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಉಮೇಶ (35), ಟೆಂಪೋದಲ್ಲಿದ್ದ ಪಾಲಾಕ್ಷಿ (38), ಬೇಬಿ (38) ನಾಗಪ್ಪ (46),ಸುಬ್ರಮಣ್ಯ (15) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರ ಗುರುತು ಸಿಕ್ಕಿಲ್ಲ.

ಟೆಂಪೋದಲ್ಲಿದ್ದ ಪ್ರಯಾಣಿಕರು ದಾರವಾಡದಿಂದ ಧರ್ಮಸ್ಥಳಕ್ಕೆ ಮದುವೆಗೆಂದು ತೆರಳುತ್ತಿದ್ದರು ಎನ್ನಲಾಗಿದ್ದು. ಖಾಸಗಿ ಬಸ್ ಮಂಗಳೂರು ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ವೇಳೆ ಈ ದುರಂತ ನಡೆದಿದೆ.
ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಮಣಿಪಾಲ ಹಾಗೂ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications