Train Services: ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ
ಹುಬ್ಬಳ್ಳಿ: ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್ -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
ರೈಲುಗಳ ಸಂಚಾರ ರದ್ದು: ಜುಲೈ 30, ಆಗಸ್ಟ್ 6 ಮತ್ತು 13 ರಂದು ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಿದೆ.

ಭಾಗಶಃ ರದ್ದು
ಜುಲೈ 30, ಆಗಸ್ಟ್ 6 ಮತ್ತು 13 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ರೈಲು ಭಾಗಶಃ ರದ್ದುಗೊಳ್ಳಲಿವೆ.
ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್, ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್, ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.
ಜುಲೈ 31, ಆಗಸ್ಟ್ 7 ಮತ್ತು 14 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು, ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಭಾಗಶಃ ರದ್ದುಗೊಳ್ಳಲಿವೆ.
ಮಾರ್ಗ ಬದಲಾವಣೆ
ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.
ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 06269 ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ 00:45 ಗಂಟೆಗೆ ಪ್ರಾರಂಭಿಸಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲುಗಳ ನಿಯಂತ್ರಣ: ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ & ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.
-
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications